Get Updates
Get notified of breaking news, exclusive insights, and must-see stories!

Karnataka CM Crisis: ನಾನು ಯಾವಾಗಲೂ ಸಿಎಂ ರೇಸಿನಲ್ಲಿ ಇದ್ದೇನೆ: ಜಿ.ಪರಮೇಶ್ವರ ಅಚ್ಚರಿಯ ಹೇಳಿಕೆ

ಬೆಂಗಳೂರು, ನವೆಂಬರ್ 23: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷ ಪೂರ್ಣಗೊಂಡಿದೆ. ಇದೀಗ ಬಣರಾಜಕೀಯ ನಡೆದಿದೆ. ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯ ಅವರ ಬೆಂಬಲಿಗರ ಮಧ್ಯ ತೆರೆಮರೆಯ ಕಸರತ್ತು ಗುಟ್ಟಾಗಿ ಉಳಿದಿಲ್ಲ. ಒಂದೊಂದೆ ಬಣ್ಣದವರು ಹಿರಿಯ ನಾಯಕರನ್ನು ಭೇಟಿ ಮಾಡುತ್ತಿದ್ದಾರೆ. ಆದರೆ ಈ ಬಗ್ಗೆ ಕೈ ನಾಯಕರು ಸುಳಿವು ಬಿಟ್ಟು ಕೊಡುತ್ತಿಲ್ಲ. ಇದೀಗ ಗೃಹ ಸಚಿವ ಜಿ.ಪರಮೇಶ್ವರ ಅವರು ನಾನು ಯಾವಾಗಲೂ ಸಿಎಂ ರೇಸಿನಲ್ಲಿ ಇರ್ತಿನಿ ಎಂದು ಹೇಳಿ ಅಚ್ಚರಿ ಮೂಡಿಸಿದ್ದಾರೆ. ಹಾಗಾದರೆ ಸಿಎಂ ಸ್ಥಾನಕ್ಕೆ ತ್ರಿಕೋನ ಸ್ಪರ್ಧೆ ಏರ್ಪಡುತ್ತಾ..?

ಬೆಂಗಳೂರಿನಲ್ಲಿ ಭಾನುವಾರ ನಗರ ಪೊಲೀಸ್ ಆಯುಕ್ತರು ಮತ್ತು ಅಧಿಕಾರಿಗಳ ಜೊತೆಗೆ ಗೃಹ ಸಚಿವರು ಸಭೆ ನಡೆಸಿ ಬಳಿಕ ಸುದ್ದಿಗಾರರ ಹಲವು ಪ್ರಶ್ನೆಗಳಿಗೆ ಉತ್ತಿರಿಸಿದರು. ಈ ವೇಳೆ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತು, ಮುಖ್ಯಮಂತ್ರಿಗಳನ್ನು ಆಯ್ಕೆ ಮಾಡುವ ಸಂದರ್ಭದಲ್ಲಿ ಎಐಸಿಸಿಯಿಂದ ವೀಕ್ಷಕರು ಬಂದಿದ್ದರು. ಸಿಎಲ್‌ಪಿ ಸಭೆಯಲ್ಲಿ ಅವರ ಮುಂದೆ ನಡೆದಿದೆ. ಸಿದ್ದರಾಮಯ್ಯ ಅವರು ಎರಡೂವರೆ ವರ್ಷ ಸಿಎಂ ಅಂತ ಹೇಳಿರಲಿಲ್ಲ. ಮಧ್ಯದಲ್ಲಿ ಬದಲಾಯಿಸುತ್ತಾರೆ ಎಂಬುದು ಹೈಕಮಾಂಡ್‌ಗೆ ಬಿಟ್ಟದ್ದು.

Karnataka CM Race G Parameshwara Says He Has Always Been in the Race Sparks Political Buzz

ಮುಖ್ಯಮಂತ್ರಿ ಸ್ಥಾನ ನಾವು ಬದಲಾವಣೆ ಮಾಡಲು ಆಗುತ್ತದೆಯೇ?. ಆ ಸಂದರ್ಭ ಬಂದಾಗ ಹೈಕಮಾಂಡ್‌ನವರು ಮಾಡುತ್ತಾರೆ. ಹಿಂದೆ ಎಲ್ಲ ಮಾಡಿಲ್ಲವೇ? ಬಂಗಾರಪ್ಪ ಅವರನ್ನು ಬದಲಾಯಿಸಿ ವೀರಪ್ಪ ಮೋಯ್ಲಿ ಅವರನ್ನು ಮಾಡಿದ್ದರು. ಈಗ ಆ ಸಂದರ್ಭ ಬಂದಿದೆ ಅಂತ ನನಗೆ ಅನ್ನಿಸುತ್ತಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ನಾನು ಯಾವಾಗಲೂ ಸಿಎಂ ರೇಸಿನಲ್ಲಿದ್ದೇನೆ..!

ನೀವು ಸಿಎಂ ರೇಸ್ ಅಲ್ಲಿ ಇದ್ದೀರ? ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಾನು ಯಾವಾಗಳೂ ರೇಸ್ ಅಲ್ಲಿ ಇರ್ತಿನಿ ಕಣ್ರಿ. 2013ರಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷನಾಗಿದ್ದೆ. ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತಂದಿದ್ದೆವು. ನಾನೊಬ್ಬನೇ ಸರ್ಕಾರ ಅಧಿಕಾರಕ್ಕೆ ತಂದಿದ್ದು ಎಂದು ಇಲ್ಲಿಯವರೆಗೂ ನಾನು ಎಲ್ಲೂ ಹೇಳಿಲ್ಲ.‌ ಎಲ್ಲರು ಸೇರಿ ಕೆಲಸ ಮಾಡಿದ್ದವು ಎಂದರು.

ಅಂದು ಜನರು ಓಟ್ ಹಾಕಿ ಪಕ್ಷವನ್ನು ಗೆಲ್ಲಿಸಿದ್ದರು. ಆ ಸಂದರ್ಭದಲ್ಲಿ ನಾನು ಪರಾಭವಗೊಂಡೆ. ಒಂದು ವೇಳೆ ನಾನು ಗೆದ್ದಿದ್ದರೆ ಏನಾಗುತ್ತಿತ್ತು ಗೊತ್ತಿಲ್ಲ. ಕೆಪಿಸಿಸಿ ಅಧ್ಯಕ್ಷರಿಗೆ ಒಂದು ಅವಕಾಶ ಕೊಡುತ್ತಾರೆ. ಅದು ಕೆಲವು ಸಂದರ್ಭದಲ್ಲಿ ಸಾಧ್ಯವಾಗುವುದಿಲ್ಲ ಎಂದರು. ಆ ಕನಸು ಈಗ ಈಡೇರುತ್ತದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ನನಗೆ ಆ ಕನಸೇ ಬಿದ್ದಿಲ್ಲವಲ್ಲ ಎಂದು ಹೇಳಿದರು.

ದಲಿತ ನಾಯಕರು ರಾಜ್ಯದ ಮುಖ್ಯಮಂತ್ರಿ ಆಗಬೇಕು ಎಂದು ಬಹಳ ದಿನದಿಂದ ಕೇಳುತ್ತಿದ್ದಾರೆ. ನಾವು ಊಟಕ್ಕೆ ಸೇರಿದ ತಕ್ಷಣ ಆಗಿಬಿಡುತ್ತದೆಯೇ? ನಾವೆಲ್ಲ ಸಮಾನ ಮನಸ್ಕರಿದ್ದೇವೆ. ಒಳಮೀಸಲಾತಿ ಬಗ್ಗೆ ಹೋರಾಟ ಅಯ್ತು. ನಮ್ಮ ಸಮಸ್ಯೆಗಳ ಚರ್ಚೆ ಮಾಡಬಾರದೇ ಎಂದು ಅವರು ಮರುಪ್ರಶ್ನಿಸಿದರು.

ಅಂತಹ ಸಂದರ್ಭ ಬಂದರೆ ನೋಡೋಣ

ಸಿಎಂ ಬದಲಾವಣೆಯ ಕೂಗು ಬಂದರೆ ಪರಿಗಣಿಸುವಂತೆ ಹೇಳುವ ಸಾಧ್ಯತೆ ಇದೆಯೇ? ಎಂಬುದಕ್ಕೆ ಉತ್ತರಿಸಿದ ಅವರು, ಆ ಸಂದರ್ಭ ಬರಲಿ. ಅಂತಹ ಸಂದರ್ಭ ಇನ್ನು ಬಂದಿಲ್ಲ. ಎಐಸಿಸಿ ಅಧ್ಯಕ್ಷರನ್ನು ನಾನೇನು ಹೋಗಿ ಭೇಟಿ‌ ಮಾಡುವುದಿಲ್ಲ. ಬೇಕಾದಾಗ ನಾನು ಹೋಗಿ ಅವರನ್ನು ಭೇಟಿ ಮಾಡುತ್ತೇನೆ ಎಂದರು.

ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರು ವಿದೇಶ ಪ್ರವಾಸದಲ್ಲಿದ್ದಾರೆ. ಅವರು ಬಂದ ನಂತರ ಪಕ್ಷದಲ್ಲಿನ ಬೆಳವಣಿಗೆಗಳು ಏನಾದರೂ ಇದ್ದಲ್ಲಿ ಚರ್ಚೆ ಮಾಡಿ ಎಐಸಿಸಿ ಅಧ್ಯಕ್ಷರು ತೀರ್ಮಾನ ಮಾಡುತ್ತಾರೆ. ಕರ್ನಾಟಕದವರೇ ಎಐಸಿಸಿ ಅಧ್ಯಕ್ಷರಿದ್ದಾರೆ. ರಾಜ್ಯ ರಾಜಕೀಯದ ಬಗ್ಗೆ ಅವರಿಗೆ ಗೊತ್ತಿರುವಷ್ಟು ಯಾರಿಗೂ ಗೊತ್ತಿಲ್ಲ. ಐವತ್ತು ವರ್ಷ ಸುಧೀರ್ಘ ರಾಜಕಾರಣ ಮಾಡಿರುವವರು ಎಐಸಿಸಿ ಅಧ್ಯಕ್ಷರಿದ್ದಾರೆ. ತೀರ್ಮಾನಗಳನ್ನು ಮಾಡುತ್ತಾರೆ. ಪಕ್ಷದಲ್ಲಿ ಅಂತದ್ದೇನಾದರು ಗೊಂದಲಗಳಿದ್ದರೆ ರಾಹುಲ್ ಗಾಂಧಿ ಅವರು ಬಂದ ಬಳಿಕ ತೀರ್ಮಾನ ಮಾಡುತ್ತಾರೆ ಎಂದು ತಿಳಿಸಿದರು.

ನಿಮ್ಮನೆ ಸಮಸ್ಯೆ ಬಗೆಹರಿಸಿಕೊಳ್ಳಿ: ಬಿಜೆಪಿಗೆ ತಿರುಗೇಟು

ರಾಜ್ಯಪಾಲರಿಗೆ ಬಿಜೆಪಿಯವರು ದೂರು ವಿಚಾರ, ಬಿಜೆಪಿಯವರನ್ನು ನಾವೇನು ಸರ್ಟಿಫಿಕೇಟ್ ಕೇಳುತ್ತಿಲ್ಲ. ಅವರ ಮನೆ ಹೇಗಿದೆ ಅಂತ ನೋಡಿಕೊಳ್ಳಲಿ. ಅಧ್ಯಕ್ಷನಾಗಿ ನಾನೇ ಮುಂದುವರಿಯುತ್ತೇನೆ ಎಂದು ಬಿ.ವೈ.ವಿಜಯೇಂದ್ರ ಅವರು ಹೇಳಿಕೆ ಕೊಟ್ಟಿದ್ದಾರೆ. ಆ ಹೇಳಿಕೆಯ ಅಗತ್ಯ ಇದೆಯೇ? ಮೊದಲು ಅವರ ಮನೆಯ ಸಮಸ್ಯೆಯನ್ನು ಸರಿಪಡಿಸಿಕೊಳ್ಳಲು ಹೇಳಿ. ಆ ಮೇಲೆ ನಮ್ಮನ್ನು ಕೇಳಲಿ ಎಂದು ಅವರು ತಿರುಗೇಟು ಕೊಟ್ಟರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+