ಸಿಎಂ ಸಿದ್ದರಾಮಯ್ಯಗೆ ಜಾಮೀನು, ಡಿ.ಕೆ. ಶಿವಕುಮಾರ್‌ಗೆ ಬಿಗ್ ರಿಲೀಫ್!
ಸಿಎಂ ಸಿದ್ದರಾಮಯ್ಯ & ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಇಂದು ಬಿಗ್ ರಿಲೀಫ್ ಸಿಕ್ಕಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ನಂತರ ಭಾರಿ ದೊಡ್ಡ ಮಟ್ಟದಲ್ಲಿ ಸೌಂಡ್ ಮಾಡಿ ಸುದ್ದಿಯಾಗಿದ್ದ ಕೇಸ್‌ನಲ್ಲಿ, ಈಗ ಸಿದ್ದರಾಮಯ್ಯ & ಡಿ.ಕೆ. ಶಿವಕುಮಾರ್ ಅವರು ರಿಲೀಫ್ ಪಡೆದಿದ್ದಾರೆ. ಹಾಗಾದರೆ ಯಾವುದು ಆ ಕೇಸ್? ಬನ್ನಿ ಸಂಪೂರ್ಣ ಮಾಹಿತಿ ತಿಳಿಯೋಣ.
ಅಂದಹಾಗೆ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಪ್ರಮುಖ ಕಾರಣವಾಗಿದ್ದೇ ಗ್ಯಾರಂಟಿ ಯೋಜನೆಗಳು. 5 ಗ್ಯಾರಂಟಿ ಯೋಜನೆಗಳ ಮೂಲಕ ಮತದಾರರ ಗಮನ ಸೆಳೆದ ಕಾಂಗ್ರೆಸ್ ನಾಯಕರು 2023 ರಲ್ಲಿ ಭರ್ಜರಿ ಗೆಲುವು ಸಾಧಿಸಿದ್ದರು. ಹೀಗಿದ್ದಾಗ ಅಂದಿನ BJP ಸರ್ಕಾರ & ಆಗಿನ ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧವೇ ಗಂಭೀರ ಆರೋಪ ಮಾಡಿದ್ದರು. ಶೇಕಡಾ 40% ಕಮಿಷನ್ ಆರೋಪ ಮಾಡಿದ್ದ ಕಾಂಗ್ರೆಸ್, ಭಾರಿ ದೊಡ್ಡ ಪ್ರಮಾಣದಲ್ಲಿ ಜಾಹೀರಾತು & ಪೋಸ್ಟರ್ ಅಂಟಿಸಿತ್ತು. ಆದರೆ ಈ ಪ್ರಕರಣ ಕೋರ್ಟ್ ಮೆಟ್ಟಿಲು ಏರಿ ಸಿದ್ದರಾಮಯ್ಯ & ಡಿ.ಕೆ. ಶಿವಕುಮಾರ್ ಅವರಿಗೆ ಜೈಲಿನ ದರ್ಶನ ಮಾಡಿಸುವ ಆತಂಕ ಹುಟ್ಟಿಸಿತ್ತು.

ಸಿಎಂ ಸಿದ್ದರಾಮಯ್ಯ ಬಚಾವ್?
ಸಿದ್ದರಾಮಯ್ಯ & ಡಿ.ಕೆ. ಶಿವಕುಮಾರ್ ಅವರು ಈಗ ದೊಡ್ಡ ಗಂಡಾಂತರ ತಪ್ಪಿಸಿಕೊಂಡಿದ್ದು, ಕೋರ್ಟ್‌ನಿಂದ ಬೇಲ್ ಪಡೆದಿದ್ದಾರೆ. 2023ರಲ್ಲಿ ಆಗಿನ BJP ಸರ್ಕಾರ & ಸಿಎಂ ಬೊಮ್ಮಾಯಿ ವಿರುದ್ಧ ಮಾಡಿದ್ದ ಶೇಕಡಾ 40% ಕಮಿಷನ್ ಆರೋಪದಲ್ಲಿ ಕೋರ್ಟ್‌ಗೆ ಹಾಜರಾಗಿ ವಿಚಾರಣೆ ಎದುರಿಸಿದ್ದಾರೆ. ಇದೀಗ ಮಾನನಷ್ಟ ಮೊಕದ್ದಮೆ ಪ್ರಕರಣದ ಸಂಬಂಧ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯವು ಸಿದ್ದರಾಮಯ್ಯ & ಡಿ.ಕೆ. ಶಿವಕುಮಾರ್ ಅವರಿಗೆ, ಜಾಮೀನು ಮಂಜೂರು ಮಾಡಿದೆ ರಿಲೀಫ್ ನೀಡಿದೆ. ಹಾಗಾದ್ರೆ ರಾಹುಲ್ ಗಾಂಧಿ ಕಥೆ ಏನು? ಮುಂದೆ ಓದಿ.
ಯಾರೆಲ್ಲಾ ಆರೋಪಿ ಸ್ಥಾನದಲ್ಲಿ ಇದ್ದಾರೆ?
ಅಷ್ಟಕ್ಕೂ ಬಿಜೆಪಿ ವಿರುದ್ಧ ಕಮಿಷನ್ ಪಡೆದ ಆರೋಪ ಮಾಡಿದ್ದ ಸಿಎಂ ಸಿದ್ದರಾಮಯ್ಯ & ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಕರಣ ಎದುರಿಸುತ್ತಿದ್ದರು. ಈ ಪ್ರಕರಣದಲ್ಲಿ A1 ಆರೋಪಿ ಆಗಿ ಕೆಪಿಸಿಸಿ, A2 ಆಗಿ ಡಿಕೆ ಶಿವಕುಮಾರ್, A3 ಆರೋಪಿಯಾಗಿ ಸಿಎಂ ಸಿದ್ದರಾಮಯ್ಯ ಅವರ ಜೊತೆ A4 ಆರೋಪಿಯಾಗಿ ರಾಹುಲ್ ಗಾಂಧಿ ಅವರನ್ನು ಹೆಸರಿಸಲಾಗಿತ್ತು. ಐಪಿಸಿ ಸೆಕ್ಷನ್ 499 ಹಾಗೂ 500 ಅಡಿಯಲ್ಲಿ ಖಾಸಗಿ ದೂರು ದಾಖಲಾಗಿತ್ತು. ಇದೀಗ ಈ ಪ್ರಕರಣದಲ್ಲಿ ಇಬ್ಬರಿಗು ರಿಲೀಫ್ ಸಿಕ್ಕಿದ್ದು, ರಾಹುಲ್ ಗಾಂಧಿ ಅವರ ಬಗ್ಗೆ ಇನ್ನೇನು ನಿರ್ಣಯ ಹೊರಬೀಳಲಿದೆ.












Click it and Unblock the Notifications