Ration Card: ರಾಜ್ಯದಲ್ಲಿ ಅನರ್ಹ ಪಡಿತರ ಚೀಟಿ ರದ್ದು ಬಗ್ಗೆ ಸಿಎಂ ಮಹತ್ವದ ಸಂದೇಶ

Ration Card: ರಾಜ್ಯದಲ್ಲಿ ಸದ್ಯ ನಕಲಿ ದಾಖಲೆ ಸೃಷ್ಟಿಸಿ ಪಡೆದಂತಹ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದುಪಡಿಸಿ ಎಪಿಎಲ್‌ಗೆ ವರ್ಗಾಹಿಸುವ ಕಾರ್ಯ ನಡೆಯುತ್ತಿದೆ. ಈ ನಡುವೆಯೇ ಇದೀಹ ಅನರ್ಹ ಪಡಿತರ ಚೀಟಿ ರದ್ದು ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಮಹತ್ವದ ಮಾಹಿತಿಯೊಂದನ್ನು ನೀಡಿದ್ದಾರೆ. ಹಾಗಾದ್ರೆ, ಅವರು ಏನು ಹೇಳಿದ್ದಾರೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಸಾಮಾನ್ಯವಾಗಿ ಬಿಪಿಎಲ್‌ ಪಡಿತರ ಚೀಟಿಯನ್ನು ಬಡತನ ರೇಖೆಗಿಂತ ಕೆಳಗಿರುವವರಿಗೆ ನೀಡಲಾಗುತ್ತದೆ. ಆದರೆ, ಇದನ್ನು ಅನರ್ಹರು ಪಡೆದುಕೊಂಡು ಬಡವರಿಗೆ ಸಿಗಬೇಕಾದ ಅನ್ನ ಹಾಗೂ ಸೌಲಭ್ಯಗಳನ್ನು ಕಿತ್ತುಕೊಳ್ಳುತ್ತಿದ್ದರು. ಇದಕ್ಕೆಲ್ಲ ಕಡಿವಾಣ ಹಾಕುವ ಕೆಲಸವನ್ನು ರಾಜ್ಯ ಸರ್ಕಾರ ಮುಂದುವರೆಸಿದೆ. ಈ ನಡುವೆಯೇ ಅನರ್ಹ ಪಡಿತರ ಚೀಟಿ ರದ್ದಿನ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಮಹತ್ವದ ಮಾಹಿತಿಯೊಂದನ್ನು ಬಿಚ್ಚಿಟ್ಟಿದ್ದಾರೆ.

Karnataka CM Siddaramaiah Announces Action Against Fake Ration Cardholders

ಸೋಮವಾರ (ನವೆಂಬರ್ 10) ಮೈಸೂರಿನಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅನರ್ಹ ಪಡಿತರ ಚೀಟಿಗಳನ್ನು ಗುರುತಿಸುವುದು ಮತ್ತು ಅವುಗಳನ್ನು ರದ್ದು ಮಾಡಲು ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು. ಇದರಿಂದ ಕಳ್ಳಾಟದ ಮೂಲಕ ಪಡಿತರ ಪಡೆಯುವವರಿಗೆ ದೊಡ್ಡ ಸಂಕಷ್ಟ ಎದುರಾದಂತಾಗಿದೆ.

ಮುಂದುವರೆದು ಮಾತನಾಡಿದ ಅವರು, ಬಾಕಿ ಇರುವ ಯೋಜನೆಗಳನ್ನು ಆದ್ಯತೆ ಮೇರೆ ಪೂರ್ಣಗೊಳಿಸಲು ಕ್ರಮವಹಿಸಲಾಗುವುದು. ಎಲ್ಲಾ ಯೋಜನೆಗಳ ಕಾರ್ಯಾದೇಶವನ್ನು ನವೆಂಬರ್-‌2025 ರ ಅಂತ್ಯದೊಳಗೆ ನೀಡತಕ್ಕದ್ದು. ಇನ್ನೂ ರಸ್ತೆ ಗುಂಡಿಗಳಿದ್ದರೆ, ಅವುಗಳನ್ನು ಗುರುತಿಸಿ ದುರಸ್ತಿ ಮಾಡಲು ತಕ್ಷಣವೇ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಮೈಸೂರು ನಗರದಲ್ಲಿ ವೈಟ್ ಟಾಪಿಂಗ್ ಕಾಮಗಾರಿಯನ್ನು ತಕ್ಷಣವೇ ಪ್ರಾರಂಭಿಸಲು ಕ್ರಮವಹಿಸಬೇಕು ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+