Ration Card: ರಾಜ್ಯದಲ್ಲಿ ಅನರ್ಹ ಪಡಿತರ ಚೀಟಿ ರದ್ದು ಬಗ್ಗೆ ಸಿಎಂ ಮಹತ್ವದ ಸಂದೇಶ
Ration Card: ರಾಜ್ಯದಲ್ಲಿ ಸದ್ಯ ನಕಲಿ ದಾಖಲೆ ಸೃಷ್ಟಿಸಿ ಪಡೆದಂತಹ ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸಿ ಎಪಿಎಲ್ಗೆ ವರ್ಗಾಹಿಸುವ ಕಾರ್ಯ ನಡೆಯುತ್ತಿದೆ. ಈ ನಡುವೆಯೇ ಇದೀಹ ಅನರ್ಹ ಪಡಿತರ ಚೀಟಿ ರದ್ದು ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಮಹತ್ವದ ಮಾಹಿತಿಯೊಂದನ್ನು ನೀಡಿದ್ದಾರೆ. ಹಾಗಾದ್ರೆ, ಅವರು ಏನು ಹೇಳಿದ್ದಾರೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಸಾಮಾನ್ಯವಾಗಿ ಬಿಪಿಎಲ್ ಪಡಿತರ ಚೀಟಿಯನ್ನು ಬಡತನ ರೇಖೆಗಿಂತ ಕೆಳಗಿರುವವರಿಗೆ ನೀಡಲಾಗುತ್ತದೆ. ಆದರೆ, ಇದನ್ನು ಅನರ್ಹರು ಪಡೆದುಕೊಂಡು ಬಡವರಿಗೆ ಸಿಗಬೇಕಾದ ಅನ್ನ ಹಾಗೂ ಸೌಲಭ್ಯಗಳನ್ನು ಕಿತ್ತುಕೊಳ್ಳುತ್ತಿದ್ದರು. ಇದಕ್ಕೆಲ್ಲ ಕಡಿವಾಣ ಹಾಕುವ ಕೆಲಸವನ್ನು ರಾಜ್ಯ ಸರ್ಕಾರ ಮುಂದುವರೆಸಿದೆ. ಈ ನಡುವೆಯೇ ಅನರ್ಹ ಪಡಿತರ ಚೀಟಿ ರದ್ದಿನ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಮಹತ್ವದ ಮಾಹಿತಿಯೊಂದನ್ನು ಬಿಚ್ಚಿಟ್ಟಿದ್ದಾರೆ.

ಸೋಮವಾರ (ನವೆಂಬರ್ 10) ಮೈಸೂರಿನಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅನರ್ಹ ಪಡಿತರ ಚೀಟಿಗಳನ್ನು ಗುರುತಿಸುವುದು ಮತ್ತು ಅವುಗಳನ್ನು ರದ್ದು ಮಾಡಲು ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು. ಇದರಿಂದ ಕಳ್ಳಾಟದ ಮೂಲಕ ಪಡಿತರ ಪಡೆಯುವವರಿಗೆ ದೊಡ್ಡ ಸಂಕಷ್ಟ ಎದುರಾದಂತಾಗಿದೆ.
ಮುಂದುವರೆದು ಮಾತನಾಡಿದ ಅವರು, ಬಾಕಿ ಇರುವ ಯೋಜನೆಗಳನ್ನು ಆದ್ಯತೆ ಮೇರೆ ಪೂರ್ಣಗೊಳಿಸಲು ಕ್ರಮವಹಿಸಲಾಗುವುದು. ಎಲ್ಲಾ ಯೋಜನೆಗಳ ಕಾರ್ಯಾದೇಶವನ್ನು ನವೆಂಬರ್-2025 ರ ಅಂತ್ಯದೊಳಗೆ ನೀಡತಕ್ಕದ್ದು. ಇನ್ನೂ ರಸ್ತೆ ಗುಂಡಿಗಳಿದ್ದರೆ, ಅವುಗಳನ್ನು ಗುರುತಿಸಿ ದುರಸ್ತಿ ಮಾಡಲು ತಕ್ಷಣವೇ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಮೈಸೂರು ನಗರದಲ್ಲಿ ವೈಟ್ ಟಾಪಿಂಗ್ ಕಾಮಗಾರಿಯನ್ನು ತಕ್ಷಣವೇ ಪ್ರಾರಂಭಿಸಲು ಕ್ರಮವಹಿಸಬೇಕು ಎಂದು ತಿಳಿಸಿದರು.
-
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ












Click it and Unblock the Notifications