ಮೈಸೂರು ದಸರಾ ಸಕ್ಸಸ್: ಅಧಿಕಾರಿಗಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?
ದಸರಾ ಕನ್ನಡಿಗರ ಹೆಮ್ಮೆ, ದಸರಾ ಸಂಭ್ರಮಾಚರಣೆಗೆ ಕರ್ನಾಟಕದ ಈ ನೆಲವು ಜಗತ್ತಿನ ಮೂಲೆ ಮೂಲೆಯಲ್ಲೂ ಕೀರ್ತಿ ಪಡೆದಿದೆ. ಆದರೆ ಈ ಬಾರಿ ಕರ್ನಾಟಕದಲ್ಲಿ ಭೀಕರ ಬರ ಎದುರಾಗಿದ್ದ ಕಾರಣ, ಸರಳ ದಸರಾ ಆಚರಣೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ನಿರ್ಧಾರ ಮಾಡಿತ್ತು. ಹೀಗೆ ಸರಳವಾಗಿ ದಸರಾ ಆಚರಣೆ ಮಾಡಿದರೂ, ಅದ್ಧೂರಿಯಾಗೇ ಈ ಬಾರಿ ಅಂಬಾರಿ ಉತ್ಸವ ನಡೆದಿದೆ. ಈ ಬಗ್ಗೆ ಅಧಿಕಾರಿಗಳ ಕುರಿತು ಸಿಎಂ ಹೇಳಿದ್ದೇನು ಗೊತ್ತಾ?
ಅಂದಹಾಗೆ, ಒಗ್ಗಟ್ಟಿನ ಶ್ರಮ ಮತ್ತು ಕೆಲಸದ ಹಂಚಿಕೆ ಮೂಲಕ ಸಾರ್ವಜನಿಕರಿಂದ ಆಕ್ಷೇಪಣೆ ಇಲ್ಲದ ರೀತಿಯಲ್ಲಿ ದಸರಾ ಯಶಸ್ವಿಯಾಗಿದ್ದಕ್ಕೆ ಜಿಲ್ಲಾ ಮಟ್ಟದ ಅಧಿಕಾರಿಗಳ ಕಾರ್ಯಕ್ಷಮತೆ ಶ್ಲಾಘನೀಯ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಹಾಗೇ, ಅಧಿಕಾರಿಗಳು ಅರ್ಪಣಾ ಮನೋಭಾವದಿಂದ ಕೆಲಸ ಮಾಡಿದ್ರೆ ಪರಿಣಾಮಕಾರಿ ಅಭಿವೃದ್ಧಿಯು ಸಾಧ್ಯ. ಅಧಿಕಾರಿಗಳು, ಜನಗಳ ಮಧ್ಯೆ ಇದ್ರೆ ಅಧಿಕಾರಿಗಳ ಜನಪ್ರಿಯತೆ ಕೂಡ ಹೆಚ್ಚುತ್ತದೆ. ಜನರ ಸಮಸ್ಯೆಗಳು ಕೂಡ ಅರ್ಥ ಆಗುತ್ತವೆ. ಸಮಸ್ಯೆ ಅರ್ಥವಾದಷ್ಟೂ ಪರಿಣಾಮಕಾರಿಯಾಗಿ ಪರಿಹಾರವನ್ನ ಒದಗಿಸಲು ಸಾಧ್ಯವಿದೆ ಎಂದು ಸಿಎಂ ಸಿದ್ದರಾಮಯ್ಯ ಇದೇ ವೇಳೆ ಅಧಿಕಾರಿಗಳಿಗೆ ಸಲಹೆ ನೀಡಿದ್ದಾರೆ.

ಮೈಸೂರು ಅಭಿವೃದ್ಧಿಗೆ ಖಡಕ್ ಸೂಚನೆ
ಇನ್ನು, ದಸರಾ ಜನರ ಹಬ್ಬ. ಆದ್ದರಿಂದ ಜನರ ಪಾಲ್ಗೊಳ್ಳುವಿಕೆ ಅತ್ಯಂತ ಅಗತ್ಯ. ಇದು ಈ ಬಾರಿ ಕೂಡ ಯಶಸ್ವಿಯಾಗಿದೆ. ಮುಂದಿನ ಬಾರಿ ಜನರ ಜತೆ ಪೂರ್ವಭಾವಿ ಸಭೆಗಳನ್ನು ನಡೆಸಿ ದಸರಾವನ್ನು ಮತ್ತಷ್ಟು ಅರ್ಥಪೂರ್ಣಗೊಳಿಸೋಣ. ಅಧಿಕಾರಿಗಳಿಗೆ ಜನಪರವಾದ ಮನಸ್ಸು ಮತ್ತು ಕಾಳಜಿ ಜೊತೆಯಲ್ಲಿ ಹೃದಯ ಇದ್ದರೆ ಮಾತ್ರ ಜನಪರ ಅಭಿವೃದ್ಧಿ ಸಾಧ್ಯ. ಕಳೆದ 5 ವರ್ಷಗಳಲ್ಲಿ ಮೈಸೂರಿನಲ್ಲಿ ಅಭಿವೃದ್ಧಿ ಕೆಲಸಗಳು ಆಗಿಲ್ಲ. ಹೀಗಾಗಿ ಈಗ ಇಡೀ ಮೈಸೂರಿನ ಅಭಿವೃದ್ಧಿಗೆ ನೀಲನಕ್ಷೆ ಸಿದ್ಧಪಡಿಸಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸೂಚಿಸಿದ್ದಾರೆ.
ಖಡಕ್ ಸೂಚನೆ ನೀಡಿದ ಸಿದ್ದರಾಮಯ್ಯ
ಗತಕಾಲದ ಅಭಿವೃದ್ಧಿ ವೈಭವ ಮೈಸೂರಲ್ಲಿ ಮರುಕಳಿಸಬೇಕು. ನಾಲ್ವಡಿ ಅರಸರು ಮಾಡಿದ ನೀರಾವರಿ, ಕೃಷಿ, ಸಮಾಜ ಕಲ್ಯಾಣ ಸೇರಿ ಎಲ್ಲ ಅಭಿವೃದ್ಧಿ ಕಾರ್ಯ ಮಾದರಿಯಾಗಬೇಕಿದೆ ಎಂದು ಈ ವೇಳೆ ಅಧಿಕಾರಿಗಳಿಗೆ ಅಭಿವೃದ್ಧಿ ಪಾಠ ಮಾಡಿದರು. ಅವರ ಕಾಲದ ಅಭಿವೃದ್ಧಿ ವೈಭವ ಜಿಲ್ಲೆಯಲ್ಲಿ ಮರುಕಳಿಸಬೇಕು. ಮೈಸೂರನ್ನು ಅಭಿವೃದ್ಧಿಯಲ್ಲಿ ನಂಬರ್ 1 ಸ್ಥಾನಕ್ಕೆ ಕರೆದೊಯ್ಯಬೇಕಿರುವುದು ಇಲ್ಲಿನ ಅಧಿಕಾರಿಗಳ ಜವಾಬ್ದಾರಿ ಎಂದು ಸಿಎಂ ಖಡಕ್ ಆಗಿ ಈ ವೇಳೆ ತಿಳಿಸಿದರು. ಇದರ ಜತೆಗೆ ಅಧಿಕಾರಿಗಳಿಗೆ ಹಲವು ಖಡಕ್ ಸೂಚನೆ ನೀಡಿದ್ರು ಸಿಎಂ.
ಹುಮ್ಮಸ್ಸು ತುಂಬಿದ ಸಿಎಂ
ಹಾಗೆಯೇ ಶಿಕ್ಷಣ, ಆರೋಗ್ಯ, ಗ್ರಾಮೀಣಾಭಿವೃದ್ಧಿ, ನಗರಾಭಿವೃದ್ಧಿ ಸೇರಿ ಸಮಾಜ ಕಲ್ಯಾಣ ಮತ್ತು ಎಲ್ಲಾ ಕ್ಷೇತ್ರಗಳಲ್ಲೂ ಅಭಿವೃದ್ಧಿಯಲ್ಲಿ ಮೈಸೂರು ನಂಬರ್ ಒನ್ ಆಗಬೇಕಿದೆ. ಇದು ನಿಮ್ಮಿಂದ ಸಾಧ್ಯವಿದೆ, ಸಾಧಿಸಿ ತೋರಿಸೋಣ ಎಂದು ಸಿಎಂ ಹುಮ್ಮಸ್ಸು ತುಂಬಿದರು. ಈ ವೇಳೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು. ಈ ಮೂಲಕ, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಯಶಸ್ವಿಯಾಗಿ ನಡೆದ ದಸರಾ ಸಂಭ್ರಮಾಚರಣೆಗೆ ಶ್ರಮ ವಹಿಸಿದ ರಾಜ್ಯದ ಅಧಿಕಾರಿ ವರ್ಗವನ್ನು ಸಿಎಂ ಶ್ಲಾಘಿಸಿದ್ದಾರೆ.
ಒಟ್ನಲ್ಲಿ ಈ ಬಾರಿ ಬರದ ಹಿನ್ನೆಲೆ ದಸರಾ ಸಂಭ್ರಮ ಕಳೆಗುಂದುವ ಆತಂಕ ಇತ್ತು. ಆದರೆ ಆ ರೀತಿಯ ಯಾವುದೆ ವಾತಾವರಣ ಇರಲಿಲ್ಲ. ಜಗತ್ತಿನ ಮೂಲೆ ಮೂಲೆಯಿಂದ ಬಂದಿದ್ದ ಜನರು, ಕನ್ನಡಿಗರ ಈ ಹೆಮ್ಮೆಯ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡರು. ಹಾಗೇ ವಿಶ್ವದ ಮೂಲೆ ಮೂಲೆಯಲ್ಲೂ ಹೆಸರು ಪಡೆದಿರುವ ಅಂಬಾರಿ ಉತ್ಸವ ಕಣ್ತುಂಬಿಕೊಂಡರು. ಈ ಬಗ್ಗೆ ಇದೀಗ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳ ಶ್ರಮವನ್ನು ಶ್ಲಾಘಿಸಿದ್ದಾರೆ. ಹಾಗೇ ಇದೇ ರೀತಿ ಮುಂದೆಯೂ ಕೆಲಸ ಮಾಡಿ ಎಂದು ಸಲಹೆ ನೀಡಿ, ಅಭಿವೃದ್ಧಿ ಪಾಠ ಮಾಡಿದ್ದಾರೆ.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications