ಸರ್ಕಾರ ರಚನೆ ಗಡಿಬಿಡಿಯಲ್ಲೂ ಆರ್‌ಸಿಬಿ ಮ್ಯಾಚ್‌ ನೋಡಿ ಖುಷಿ ಪಟ್ಟ ಸಿದ್ದು- ಕೊಹ್ಲಿ ಅಬ್ಬರಕ್ಕೆ ಫುಲ್‌ ಫಿದಾ ಆದ ಹುಲಿಯಾ

ಬೆಂಗಳೂರು, ಮೇ 19: ಸಚಿವ ಸಂಪುಟ ರಚನೆಯ ತೀವ್ರ ಗಡಿಬಿಡಿಯ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಕುಮಾರ ಕೃಪಾ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಐಪಿಎಲ್‌ ಪಂದ್ಯವನ್ನು ವಿಕ್ಷೀಸಿದರು. ಐಪಿಎಲ್‌ನ ಪ್ರತಿಷ್ಠಿತ ಫ್ರಾಂಚೈಸಿಗಳಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಸನ್‌ರೈಸರ್ಸ್ ಹೈದರಾಬಾದ್ (ಎಸ್‌ಆರ್‌ಹೆಚ್) ನಡುವಿನ ನಿರ್ಣಾಯಕ ಪಂದ್ಯದ ಅಂತಿಮ ಓವರ್‌ಗಳನ್ನು ವೀಕ್ಷಿಸಲು ಸಮಯ ಮಾಡಿಕೊಂಡರು.

ಟೂರ್ನಮೆಂಟ್‌ನಲ್ಲಿ ಆರ್‌ಸಿಬಿ ತಂಡ ಮುಂದುವರಿಯಲು ನಿರ್ಣಾಯಕವಾಗಿದ್ದ ಈ ಮಹತ್ವದ ಪಂದ್ಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವೀಕ್ಷಿಸುತ್ತಿರುವುದು ಕಂಡುಬಂದಿದೆ.

Siddaramaiah Enjoys IPL Match Between rcb vs srh

ವಿರಾಟ್ ಕೊಹ್ಲಿ ಮತ್ತು ಫ್ರಾಂಚೈಸಿಯ ನಾಯಕ ಫಾಫ್ ಡು ಪ್ಲೆಸಿಸ್ ಭರ್ಜರಿ ಬ್ಯಾಟಿಂಗ್‌ ಮಾಡಿದರು. ತಂಡವನ್ನು ಎಂಟು ವಿಕೆಟ್‌ಗಳ ಗೆಲುವಿನತ್ತ ತೆಗೆದುಕೊಂಡು ಹೋದರು. ನಾಕೌಟ್ ಸುತ್ತಿಗೆ ಅರ್ಹತೆ ಪಡೆಯುವ ಭರವಸೆಯನ್ನು ಜೀವಂತವಾಗಿರಿಸಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾಗವಹಿಸಲು ದೆಹಲಿಯಿಂದ ಹಿಂದಿರುಗಿದ ಸಿದ್ದರಾಮಯ್ಯ ಅವರಿಗೆ ಗುರುವಾರ ಅತ್ಯಂತ ಬ್ಯುಜಿ ದಿನವಾಗಿತ್ತು. ನಂತರ ಶಿವಕುಮಾರ್ ಅವರೊಂದಿಗೆ ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಅಧಿಕೃತವಾಗಿ ಹಕ್ಕು ಮಂಡಿಸಿದರು.

Siddaramaiah Enjoys IPL Match Between rcb vs srh

ಮೇ 20 ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಮಧ್ಯಾಹ್ನ 12:30 ಕ್ಕೆ ಸಿದ್ದರಾಮಯ್ಯ ಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಡಿಕೆ ಶಿವಕುಮಾರ್ ಅವರು ಡಿಸಿಎಂ ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಕೆಲವು ಪ್ರಮುಖ ನಾಯಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಬೆಂಗಳೂರಿನ ಕಂಠೀರವ ಸ್ಟೇಡಿಯಮ್‌ನಲ್ಲಿ ನಡೆಯಲಿದರುವ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಸಮಾನ ಮನಸ್ಕ ವಿರೋಧ ಪಕ್ಷಗಳ ನಾಯಕರು ಪಾಲ್ಗೊಳ್ಳುವ ಸಾಧ್ಯತೆ ಇದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹಲವು ಮುಖ್ಯಮಂತ್ರಿಗಳು ಮತ್ತು ಪಕ್ಷದ ಮುಖಂಡರಿಗೆ ಆಹ್ವಾನವನ್ನು ನೀಡಿದ್ದಾರೆ ಮತ್ತು ಕಾರ್ಯಕ್ರಮಕ್ಕೆ ವೈಯಕ್ತಿಕವಾಗಿ ಆಹ್ವಾನಿಸಿದ್ದಾರೆ.

Siddaramaiah Enjoys IPL Match Between rcb vs srh

ಖರ್ಗೆ ಅವರು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರನ್ನು ಆಹ್ವಾನಿಸಿದ್ದಾರೆ. ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರಿಗೂ ಆಹ್ವಾನ ಕಳುಹಿಸಲಾಗಿದೆ.

ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರನ್ನೂ ಆಹ್ವಾನಿಸಲಾಗಿದೆ.

ಕರ್ನಾಟಕ ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೂ ಆಹ್ವಾನ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+