ವಿಪಕ್ಷಗಳ ಬುಡಕ್ಕೆ ‘ಬಿಲ್ ಬಾಂಬ್’ ಇಟ್ಟ ಸಿಎಂ ಸಿದ್ದರಾಮಯ್ಯ!

ಒಂದು ಕಡೆ ವಿರೋಧ ಪಕ್ಷಗಳು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ವಿಚಾರಗಳ ಬಗ್ಗೆ ನಿತ್ಯವು ಹೊಸ ಹೊಸ ಬಾಂಬ್ ಸಿಡಿಸುತ್ತಿವೆ. ಅದರಲ್ಲೂ ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ, ಗ್ಯಾರಂಟಿ ವಿಚಾರವನ್ನೇ ಅಸ್ತ್ರ ಮಾಡಿಕೊಂಡಿದ್ದಾರೆ. ಇದರ ಜೊತೆಗೆ ಗುತ್ತಿಗೆದಾರರ ಬಿಲ್ ಬಾಕಿ ವಿಚಾರ ಕೂಡ ಸದ್ದು ಮಾಡುತ್ತಿದೆ. ಈಗ ವಿಪಕ್ಷಗಳ ಬುಡಕ್ಕೆ ಸಿಎಂ ಸಿದ್ದರಾಮಯ್ಯ 'ಬಿಲ್ ಬಾಂಬ್' ಇಟ್ಟಿದ್ದಾರೆ!

ಹೌದು ಕರ್ನಾಟಕದಲ್ಲಿ ಕಾಮಗಾರಿಗಳಿಗೆ ಕಮಿಷನ್ ಪಡೆಯುವ ಆರೋಪ ಕೇಳಿಬರುತ್ತಿದೆ. ಈ ಹಿಂದೆ ಬಿಜೆಪಿ ವಿರುದ್ಧ ಕಾಂಗ್ರೆಸ್ ಇದೇ ಅಸ್ತ್ರ ಬಳಸಿಕೊಂಡು ವಾಗ್ದಾಳಿ ನಡೆಸಿ, ಜಯ ಸಾಧಿಸಿತ್ತು. ಆದರೆ ಈಗ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಇದೇ ವಿಚಾರ ದಾಳವಾಗಿ ಮಾಡಿಕೊಂಡಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧವೇ ಕಮಿಷನ್ ಆರೋಪ ಮಾಡ್ತಿದ್ದಾರೆ. ಆದರೆ ಇದೆಲ್ಲದಕ್ಕೂ ಸಿಎಂ ಸಿದ್ದರಾಮಯ್ಯ ಈಗ ಉತ್ತರ ಕೊಟ್ಟಿದ್ದು, ವಿರೋಧ ಪಕ್ಷಗಳ ವಿರುದ್ಧವೇ ಗಂಭೀರ ಆರೋಪ ಮಾಡಿದ್ದಾರೆ.

Karnataka CM Siddaramaiah Gave Explanation To Opposition Party Leaders Allegations

ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ 'ಹಿಂದಿನ ಸರ್ಕಾರ ಹಣವಿಲ್ಲದಿದ್ದರೂ ಕಾಮಗಾರಿಗಳನ್ನು ಮಂಜೂರು ಮಾಡಿ, ಟೆಂಡರ್ ಕರೆದು ಬಿಲ್ಲುಗಳನ್ನು ಬಾಕಿ ಇಟ್ಟು ಹೋಗಿದೆ. 30,000 ಕೋಟಿ ರೂ.ಗಳಷ್ಟು ಬಾಕಿ ಬಿಲ್ಲುಗಳಿವೆ. ಇದಕ್ಕೆ ಯಾರು ಹೊಣೆ? ನಮ್ಮ ಕಾಲದ ಹಾಗೂ ಹಿಂದಿನ ಸರ್ಕಾರದ ಕಾಲದ ಆರ್ಥಿಕ ಸ್ಥಿತಿ ಕುರಿತು ವಿಧಾನಮಂಡಲದಲ್ಲಿ ಶ್ವೇತಪತ್ರ ಮಂಡಿಸುತ್ತೇನೆ.' ಎಂದಿದ್ದಾರೆ.

ಮಾಜಿ ಸಿಎಂ ಕುಮಾರಸ್ವಾಮಿ ಅವರು...

ಹಾಗೇ ತಮ್ಮ ವಾಗ್ದಾಳಿ ಮುಂದುವರಿಸಿರುವ ಸಿಎಂ ಸಿದ್ದರಾಮಯ್ಯ, 'ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ಅವರು ವಿಶ್ವಾಸ ಮತಯಾಚನೆ ಸಂದರ್ಭದಲ್ಲಿ ಮಾತನಾಡುವಾಗ ಮೈತ್ರಿ ಸರ್ಕಾರವನ್ನು ಬೀಳಿಸಿದ್ದು ಬಿಜೆಪಿಯವರು ಎಂದಿರುವುದು ವಿಧಾನಮಂಡಲದ ದಾಖಲೆಯಲ್ಲಿದೆ. ಅದನ್ನು ಬಿಡುಗಡೆ ಮಾಡುತ್ತೇನೆ. ಈಗ ತಮ್ಮ ಹೇಳಿಕೆ ಬದಲಿಸುವ ಮೂಲಕ ಅವರು ವಿಧಾನಮಂಡಲವನ್ನು ತಪ್ಪುದಾರಿಗೆ ಎಳೆಯುತ್ತಿದ್ದಾರೆ.' ಎಂದು ಹೇಳುವ ಮೂಲಕ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಕೂಡ ಸಿಎಂ ಸಿದ್ದರಾಮಯ್ಯ ಸವಾಲು ಎಸೆದಿದ್ದಾರೆ.

ವಿದ್ಯುತ್ ಕೊರತೆಗೆ ಯಾರು ಕಾರಣ?

ಹಾಗೇ ವಿದ್ಯುತ್ ಕೊರತೆ ಬಗ್ಗೆಯೂ ಮಾತನಾಡಿರುವ ಸಿಎಂ, 'ವಿದ್ಯುತ್ ಕ್ಷಾಮ ನೀಗಿಸಲು ಹೊರಗಿನಿಂದ ವಿದ್ಯುತ್ ಕೊಳ್ಳುತ್ತಿದ್ದೇವೆ. ಎಲ್ಲಾ ಸಕ್ಕರೆ ಕಾರ್ಖಾನೆಗಳು ಪ್ರಾರಂಭವಾಗುತ್ತಿದ್ದು, ಅಲ್ಲಿ ಕೋಜನರೇಷನ್ ನಿಂದ ಉತ್ಪಾದನೆ ಆಗುವ ವಿದ್ಯುತನ್ನು ಕೊಂಡುಕೊಳ್ಳುತ್ತೇವೆ. ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಮಾಡುವ ಖಾಸಗಿ ಸಂಸ್ಥೆಗಳು ರಾಜ್ಯಕ್ಕೆ ನೀಡಬೇಕೆಂದು ಆದೇಶ ಹೊರಡಿಸಿದ್ದೇವೆ. ವಿದ್ಯುತ್ ಕೊರತೆ ನೀಗಿಸಲು ಎಲ್ಲಾ ರೀತಿ ಕ್ರಮ ಕೈಗೊಳ್ಳಲಾಗುತ್ತಿದೆ.' ಎಂದು ಸಿಎಂ ತಿಳಿಸಿದ್ದಾರೆ.

Karnataka CM Siddaramaiah Gave Explanation To Opposition Party Leaders Allegations

ಅಲ್ಲದೆ ಸಿಎಂ ಸಿದ್ದರಾಮಯ್ಯ ಅವರು, '2019-23ರ ಅವಧಿಯಲ್ಲಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯ ಹೆಚ್ಚಿಸಲು ಹಿಂದಿನ ಸರ್ಕಾರ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಈಗ ಬರ ಬಂದಿರುವುದರಿಂದ ವಿದ್ಯುತ್ ತೊಂದರೆಯಾಗಿರುವುದಕ್ಕೆ ಅವರೇ ಕಾರಣ. 16,000 ಮೆಗಾ ವ್ಯಾಟ್ ಸೌರ ವಿದ್ಯುತ್ ಉತ್ಪಾದನೆಯನ್ನು ನಾವು ಮಾಡಿದ್ದೆವು. ನವೀಕರಿಸಬಹುದಾದ ಇಂಧನ ಮೂಲಗಳ ಸದ್ಬಳಕೆಗೆ ಹಿಂದಿನ ಸರ್ಕಾರ ಒತ್ತು ನೀಡಿದ್ದರೆ ಪರಿಸ್ಥಿತಿ ಬೇರೆಯದೆ ಇರುತ್ತಿತ್ತು.' ಎನ್ನುವ ಮೂಲಕ ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ಒಟ್ನಲ್ಲಿ ವಿರೋಧ ಪಕ್ಷಗಳ ಆರೋಪಕ್ಕೆ ಈ ಮೂಲಕ ಸಿಎಂ ಸಿದ್ದರಾಮಯ್ಯ ಉತ್ತರವನ್ನು ನೀಡಿದ್ದಾರೆ. ಅದರಲ್ಲೂ ವಿದ್ಯುತ್ ಅಭಾವ ಹಾಗೂ ಸಮ್ಮಿಶ್ರ ಸರ್ಕಾರ ಬಿದ್ದಿದ್ದಕ್ಕೆ ಕಾರಣ ಏನು ಎಂಬುದನ್ನೂ ಸಿಎಂ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಆದರೆ ಇದೀಗ ಸಿಎಂ ನೀಡಿದ ವಿವರಣೆಗೆ ವಿರೋಧ ಪಕ್ಷಗಳ ನಾಯಕರು ಯಾವ ರೀತಿ ರಿಯಾಕ್ಷನ್ ಕೊಡ್ತಾರೆ? ಅಂತಾ ಕಾದು ನೋಡಬೇಕಿದೆ. ಈ ಮೂಲಕ ಕರ್ನಾಟಕದ ರಾಜಕೀಯದಲ್ಲಿ ಮತ್ತೊಂದು ಸುತ್ತಿನ ಕದನ ಗ್ಯಾರಂಟಿ ಅನ್ನೋ ಮಾತು ಕೇಳಿಬರುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+