ಪೌರ ಕಾರ್ಮಿಕರ ಕೆಲಸ ಕಾಯಂ ಬಗ್ಗೆ ಭರ್ಜರಿ ಸುದ್ದಿ ನೀಡಿದ ಸಿಎಂ ಸಿದ್ದರಾಮಯ್ಯ! CM Siddaramaiah
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಈಗಾಗಲೇ ಹಲವು ಗ್ಯಾರಂಟಿ ಯೋಜನೆಗಳನ್ನ ಜಾರಿಗೆ ತಂದು, ಕೋಟ್ಯಂತರ ಜನರಿಗೆ ಸಹಾಯ ಆಗುವಂತೆ ಮಾಡಿದೆ. ಅದರಲ್ಲೂ ಗೃಹಲಕ್ಷ್ಮೀ & ಶಕ್ತಿ ಯೋಜನೆಗಳು ಜಗತ್ತಿನಾದ್ಯಂತ ಸದ್ದು ಮಾಡುತ್ತಿವೆ. ಇಂತಹ ಸಮಯದಲ್ಲೇ, ಕರ್ನಾಟಕ ರಾಜ್ಯದಲ್ಲಿ ಸೇವೆ ಸಲ್ಲಿಸುತ್ತಿರುವ ಪೌರ ಕಾರ್ಮಿಕರಿಗೂ ಭಾರಿ ಭರ್ಜರಿ ಸುದ್ದಿಯೊಂದು ಸಿಕ್ಕಿದೆ. ಸ್ವತಃ ಸಿಎಂ ಸಿದ್ದರಾಮಯ್ಯ ಅವರು ಪೌರ ಕಾರ್ಮಿಕರ ಸೇವೆಯನ್ನು ಕಾಯಂ ಮಾಡುವ ಬಗ್ಗೆ ಮಾತನಾಡಿದ್ದಾರೆ.
ಅಂದಹಾಗೆ ಎಲ್ಲಾ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ ಎಂದು ಈಗ ಸಿಎಂ ಸಿದ್ದರಾಮಯ್ಯ ಅವರು ಮಾಹಿತಿ ನೀಡಿದ್ದಾರೆ. ಸ್ಮಾರ್ಟ್ ಸಿಟಿ ಅನುದಾನ ಅಡಿಯಲ್ಲಿ ನೂತನವಾಗಿ ನಿರ್ಮಿಸಿರುವ ಬೆಳಗಾವಿ ಟಿಳಕವಾಡಿಯ ಆಧುನಿಕ ಸೌಲಭ್ಯ ಇರುವ ಬಹುಮಹಡಿ ಕಲಾ ಮಂದಿರವನ್ನು ಇಂದು ಸಿಎಂ ಸಿದ್ದರಾಮಯ್ಯ ಅವರು ಲೋಕಾರ್ಪಣೆ ಮಾಡಿದರು. ಕಲಾ ಮಂದಿರ ಲೋಕಾರ್ಪಣೆ ನಂತರ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಪೌರ ಕಾರ್ಮಿಕರ ಸೇವೆಯನ್ನು ಕಾಯಂ ಮಾಡುವ ಬಗ್ಗೆ ಮಾಹಿತಿ ನೀಡಿದ್ದಾರೆ.

ದೇಶಾದ್ಯಂತ ಸದ್ದು ಮಾಡಲಿದೆ ಈ ನಿರ್ಧಾರ!
ಪೌರ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಗುತ್ತಿಗೆ ನೌಕರರನ್ನ ಈಗಾಗಲೇ ಕನಿಷ್ಠ ವೇತನದ ಅಡಿಯಲ್ಲಿ ತರಲಾಗಿದ್ದು, ಇದನ್ನು ಮಾಡಿದ್ದು ನಮ್ಮ ಸರ್ಕಾರವೇ ಎಂದರು. ಅಲ್ಲದೆ ಇದೀಗ ಕಾಯಂ ಮಾಡುವುದೂ ಕೂಡ ನಮ್ಮ ಸರ್ಕಾರವೇ ಎಂದು ಸಿಎಂ ಸಿದ್ದರಾಮಯ್ಯ ಅವರು ಈ ವೇಳೆ ತಿಳಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರ ಈಗ ಕೈಗೊಂಡಿರುವ ಪೌರ ಕಾರ್ಮಿಕರ ಸೇವೆಯನ್ನ ಕಾಯಂಗೊಳಿಸುವ ನಿರ್ಧಾರ ಮತ್ತೆ ದೇಶಾದ್ಯಂತ ಸದ್ದು ಮಾಡುತ್ತಿದೆ. ಯಾಕೆ ಅಂದ್ರೆ ಇತ್ತೀಚಿನ ದಿನಗಳಲ್ಲಿ ಇಂತಹ ಗಟ್ಟಿಯಾದ ನಿರ್ಧಾರ ಕೈಗೊಂಡಿರುವ ರಾಜ್ಯಗಳ ಪೈಕಿ ಕರ್ನಾಟಕ ಕೂಡ ಒಂದಾಗಲಿದೆ.
₹6,928 ಕೋಟಿ ಮೊತ್ತದ ಯೋಜನೆಗಳು!
ಮತ್ತೊಂದು ಕಡೆ ಬೆಳಗಾವಿ ಜಿಲ್ಲೆಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯ ಅಡಿಯಲ್ಲಿ ಒಟ್ಟು 150 ಕಾರ್ಯಕ್ರಮ ಕೈಗೆತ್ತಿಕೊಂಡಿದ್ದು, ಇದರಲ್ಲಿ 102 ಪೂರ್ಣಗೊಂಡಿವೆ. ಉಳಿದವು ಸದ್ಯದಲ್ಲೇ ಪೂರ್ಣಗೊಳ್ಳಲಿವೆ ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿಯನ್ನ ನೀಡಿದ್ದಾರೆ. ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ಒಟ್ಟಾರೆ 6,928 ಕೋಟಿ ರೂಪಾಯಿ ಮೊತ್ತದ ಕೆಲಸಗಳು ನಡೆಯುತ್ತಿವೆ ಎಂದು ತಿಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬೆಳಗಾವಿ ಜಿಲ್ಲೆ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ನಿರಂತರವಾಗಿ ಯೋಜನೆ ರೂಪಿಸುತ್ತಿದೆ ಹಾಗೂ ಕಾರ್ಯಕ್ರಮಗಳನ್ನು ಜಾರಿಗೆ ತರುತ್ತಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಹಲವು ಸಚಿವರು & ಸ್ಥಳೀಯ ಶಾಸಕರೂ ಹಾಜರಿದ್ದರು.












Click it and Unblock the Notifications