ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನುಡಿದಂತೆ ನಡೆದ ಸರ್ಕಾರ: ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಟ್ವೀಟ್ ಅಸ್ತ್ರ!

By ಒನ್ ಇಂಡಿಯಾ ಡೆಸ್ಕ್
|
Google Oneindia Kannada News

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳ ವಿರುದ್ಧ ಅತ್ತ ಬಿಜೆಪಿ ಪ್ರತಿಭಟನೆ ಮತ್ತು ವಾಗ್ದಾಳಿ ನಡೆಸುತ್ತಿದೆ. ಇದರ ಜೊತೆಗೆ ಬಿಜೆಪಿ ನಾಯಕರು ಕಾಂಗ್ರೆಸ್ ಸರ್ಕಾರವನ್ನ ಇದೇ ಗ್ಯಾರಂಟಿ ವಿಚಾರ ಹಿಡಿದು ಅಲ್ಲಾಡಿಸಲು ನೋಡುತ್ತಿದ್ದಾರೆ. ಆದರೆ ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಟ್ವೀಟ್ ಅಸ್ತ್ರ ಪ್ರಯೋಗಿಸಿದ್ದಾರೆ!

ಹೌದು, ಬಿಜೆಪಿ ನಾಯಕರ ಆರೋಪಗಳು ಹಾಗೂ ಪ್ರತಿಭಟನೆ ನಡೆವೆಯೂ ಗ್ಯಾರಂಟಿಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಗಟ್ಟಿಯಾಗಿ ಮಾತನಾಡಿದ್ದಾರೆ. ಬಿಜೆಪಿ ನಾಯಕರ ಪ್ರತಿಭಟನೆ ಮತ್ತು ಆರೋಪಗಳಿಗೆ ಟ್ವೀಟ್ ಮೂಲಕ ಉತ್ತರ ನೀಡಿದ್ದಾರೆ ಸಿಎಂ ಸಿದ್ದರಾಮಯ್ಯ. ಈ ಮೂಲಕ 'ನುಡಿದಂತೆ ನಡೆದ ಸರ್ಕಾರ' ಎಂದಿದ್ದಾರೆ. ಅಲ್ಲದೆ ಅಧಿಕೃತವಾಗಿ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಬಗ್ಗೆ ಸಿಎಂ ತಮ್ಮ ಟ್ವೀಟ್ ಖಾತೆಯಲ್ಲಿ ಮಾಹಿತಿ ನೀಡಿದ್ದಾರೆ. ಸರಣಿ ಟ್ವೀಟ್ ಮೂಲಕ ರಾಜ್ಯದ ಜನರಿಗೆ ಈ ಬಗ್ಗೆ ಸಂಪೂರ್ಣ ಮಾಹಿತಿ ಒದಗಿಸಿದ್ದಾರೆ.

Karnataka CM Siddaramaiah given complete information about Congress guarantees

5 ಗ್ಯಾರಂಟಿ ಬಗ್ಗೆ ಸಿಎಂ ಅಭಯ!

'ರಾಜ್ಯ ಸರ್ಕಾರ ಘೋಷಿಸಿರುವ ಗ್ಯಾರಂಟಿ ಯೋಜನೆಗಳಲ್ಲಿ ಗೃಹಜ್ಯೋತಿ ಯೋಜನೆ ಆಗಸ್ಟ್‌ 1 ರಂದು ಹಾಗೂ ಗೃಹ ಲಕ್ಷ್ಮಿ ಯೋಜನೆಗೆ ಆಗಸ್ಟ್‌ 17- 18 ರಂದು ಚಾಲನೆ ನೀಡಲು ತಯಾರಿ ನಡೆಸಲಾಗುತ್ತಿದೆ. ಎಲ್ಲ ಗ್ಯಾರಂಟಿ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಸರಳಗೊಳಿಸಬೇಕು. ಅನಗತ್ಯ ಮಾಹಿತಿ, ದಾಖಲೆ ಕೇಳಬಾರದು ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಜೊತೆಗೆ ಅರ್ಜಿ ತಿರಸ್ಕರಿಸಿದಲ್ಲಿ, ಅದು ಸಕಾರಣವಾಗಿರಬೇಕು. ಕುಂಟು ನೆಪ ನೀಡಿ ತಿರಸ್ಕರಿಸುವಂತಿಲ್ಲ ಎಂದು ಎಚ್ಚರಿಕೆಯನ್ನು ನೀಡಿದ್ದೇನೆ' ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಅಧಿಕಾರಿಗಳಿಗೆ ಸಿದ್ದರಾಮಯ್ಯ ಖಡಕ್ ಸೂಚನೆ

'ಎಲ್ಲ ಗ್ಯಾರಂಟಿ ಯೋಜನೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಅರ್ಜಿಗಳು ಸಲ್ಲಿಕೆಯಾಗುವ ಕಾರಣ, ಅಪಾರ ಪ್ರಮಾಣದ ದತ್ತಾಂಶ ಸಲ್ಲಿಕೆಗೆ ಅನುಗುಣವಾಗಿ ಸೇವಾ ಸಿಂಧು ಪೋರ್ಟಲ್‌ ಸಾಮರ್ಥ್ಯ ವೃದ್ಧಿಸುವಂತೆ ಇ-ಆಡಳಿತ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಗೃಹ ಜ್ಯೋತಿ ಯೋಜನೆಗೆ ಆಗಸ್ಟ್‌ 1 ರಂದು ಕಲಬುರಗಿಯಲ್ಲಿ ಚಾಲನೆ ನೀಡುವ ಕುರಿತು ಯೋಚಿಸುತ್ತಿದ್ದೇವೆ. ಈ ಯೋಜನೆಯ ಮಾರ್ಗಸೂಚಿಗಳ ಕುರಿತು ಇರುವ ಎಲ್ಲ ಗೊಂದಲಗಳನ್ನು ನಿವಾರಿಸಿ, ನಾಗರಿಕರಿಗೆ ಅರಿವು ಮೂಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ.' ಎಂದು ಮಾಹಿತಿ ನೀಡಿದ್ದಾರೆ.

Karnataka CM Siddaramaiah given complete information about Congress guarantees

ಗೃಹ ಜ್ಯೋತಿ ಅರ್ಜಿ ಹೇಗೆ ಸಲ್ಲಿಸುವುದು?

'ಗೃಹ ಜ್ಯೋತಿ ಯೋಜನೆಗೆ ಸೇವಾ ಸಿಂಧು ಪೋರ್ಟಲ್‌ ಮೂಲಕ ನೋಂದಾಯಿಸಲು ಅವಕಾಶವಿದೆ. ಇದಲ್ಲದೆ, ಎಸ್ಕಾಂಗಳ ಎಲ್ಲ ಕಚೇರಿಗಳಲ್ಲಿ ಹೆಲ್ಪ್‌ ಡೆಸ್ಕ್‌ ಸ್ಥಾಪಿಸಲಾಗುವುದು. ಜೂನ್‌ 15 ರಿಂದ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಲಿದೆ. ಬೆಂಗಳೂರು ಒನ್‌, ಕರ್ನಾಟಕ ಒನ್‌, ಗ್ರಾಮ ಒನ್‌ ಕೇಂದ್ರಗಳ ಮೂಲಕ ಹಾಗೂ ಮನೆಯಲ್ಲಿಯೇ ಕಂಪ್ಯೂಟರ್‌ ಮೂಲಕ ಅಥವಾ ಮೊಬೈಲ್‌ ಆಪ್‌ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು' ಎಂದು ಸಿಎಂ ತಿಳಿಸಿದ್ದಾರೆ.


ಹಳೆ ವಿದ್ಯುತ್‌ ಬಿಲ್‌ ಬಾಕಿ ಪಾವತಿಗೆ..

'ಹೊಸ ಮನೆ, ಹೊಸ ಬಾಡಿಗೆದಾರರಿಗೆ ರಾಜ್ಯದ ವಿದ್ಯುತ್‌ ಬಳಕೆಯ ಸರಾಸರಿ ಆಧಾರದಲ್ಲಿ ಉಚಿತ ವಿದ್ಯುತ್‌ ಸೌಲಭ್ಯ ನೀಡಲಾಗುವುದು. ಒಂದು ವರ್ಷದ ಸರಾಸರಿ ಲಭ್ಯವಾದ ನಂತರ, ಈ ದತ್ತಾಂಶವನ್ನು ಆಧರಿಸಿ, ಉಚಿತ ವಿದ್ಯುತ್‌ ಸೌಲಭ್ಯ ನೀಡಲಾಗುವುದು. ಹಳೆ ವಿದ್ಯುತ್‌ ಬಿಲ್‌ ಬಾಕಿ ಪಾವತಿಗೆ ಸೆಪ್ಟೆಂಬರ್‌ 30 ರ ವರೆಗೆ ಅವಕಾಶ ಕಲ್ಪಿಸಲಾಗಿದೆ. ಗೃಹಜ್ಯೋತಿ ಯೋಜನೆಗೆ ಆಧಾರ್‌, ಆರ್. ಆರ್. ಸಂಖ್ಯೆ, ಬಾಡಿಗೆದಾರರು ಕರಾರು ಪತ್ರ ಹಾಗೂ ಅದೇ ವಿಳಾಸದ ಮತದಾರರ ಗುರುತು ಚೀಟಿ ಮಾಹಿತಿ ಸಲ್ಲಿಸಿ, ಸೌಲಭ್ಯ ಪಡೆಯಬಹುದಾಗಿದೆ' ಎಂದು ರಾಜ್ಯದ ಜನರಿಗೆ ಮಾಹಿತಿ ನೀಡಿದ್ದಾರೆ.

Karnataka CM Siddaramaiah given complete information about Congress guarantees


ಗೃಹ ಲಕ್ಷ್ಮಿ ಯೋಜನೆಯ ಮಾಹಿತಿ

ಇನ್ನೊಂದ್ಕಡೆ ಗೃಹ ಲಕ್ಷ್ಮಿ ಯೋಜನೆ ಕುರಿತು ಮಾಹಿತಿ ನೀಡಿದ್ದಾರೆ. 'ಗೃಹ ಲಕ್ಷ್ಮಿ ಯೋಜನೆಯನ್ನು ಆಗಸ್ಟ್‌ 17 ಅಥವಾ 18 ರಂದು ಬೆಳಗಾವಿಯಲ್ಲಿ ಚಾಲನೆ ನೀಡುವ ಕುರಿತು ಚರ್ಚಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜೂನ್‌ 15 ರಿಂದ ಪ್ರಾರಂಭವಾಗಲಿದೆ. ಈ ಯೋಜನೆಗೆ ಆನ್‌ಲೈನ್‌ ನಲ್ಲಿ ಸೇವಾ ಸಿಂಧು ಪೋರ್ಟಲ್‌ ಮೂಲಕ ಅರ್ಜಿ ಸಲ್ಲಿಸಬಹುದು. ಅಂತೆಯೇ ನಾಡಕಚೇರಿಗಳಲ್ಲಿ ಖುದ್ದಾಗಿ ಅರ್ಜಿ ಸಲ್ಲಿಸಬಹುದು. ಇದಕ್ಕಾಗಿ ಪ್ರತ್ಯೇಕ ಕೌಂಟರುಗಳನ್ನು ಸ್ಥಾಪಿಸಲು ತೀರ್ಮಾನಿಸಲಾಗಿದೆ' ಎಂದಿದ್ದಾರೆ.


ಯಜಮಾನಿಗೆ ಸಿಗುತ್ತೆ 2000 ರೂಪಾಯಿ!

ಗೃಹಲಕ್ಷ್ಮಿ ಯೋಜನೆ ಪಡೆಯುವ ಕುರಿತು ಪೂರ್ಣ ಮಾಹಿತಿ ನೀಡಿದ್ಧಾರೆ. 'ಅರ್ಜಿದಾರರು ರೇಷನ್‌ ಕಾರ್ಡ್‌ ಸಂಖ್ಯೆ, ಯಜಮಾನಿಯ ಹಾಗೂ ಪತಿಯ ಆಧಾರ್‌ ಕಾರ್ಡ್‌ ಸಂಖ್ಯೆ, ಆಧಾರ್‌ ಸಂಯೋಜನೆಯಾಗಿರುವ ಬ್ಯಾಂಕ್‌ ಖಾತೆಯ ವಿವರವನ್ನು ಒದಗಿಸಬೇಕು. ಈ ದಾಖಲೆಗಳ ಪ್ರತಿಗಳನ್ನು ಆಫ್‌ಲೈನ್‌ ಅರ್ಜಿಗಳೊಂದಿಗೂ ಸಲ್ಲಿಸಬಹುದು. ಅರ್ಹ ಫಲಾನುಭವಿಗಳಿಗೆ ಡಿಬಿಟಿ ಮೂಲಕ ನೇರವಾಗಿ ಬ್ಯಾಂಕ್‌ ಖಾತೆಗೆ ನೆರವಿನ ಮೊತ್ತ ಜಮೆ ಆಗಲಿದೆ. ಗೃಹಲಕ್ಷ್ಮಿ ಯೋಜನೆಯು ರಾಜ್ಯದ ಶೇ. 85 ಕ್ಕೂ ಹೆಚ್ಚು ಕುಟುಂಬಗಳನ್ನು ತಲುಪಲಿದೆ ಎಂದು ಅಂದಾಜಿಸಲಾಗಿದೆ. ತೆರಿಗೆ ಪಾವತಿದಾರರಲ್ಲದ ಎಪಿಎಲ್‌ ಕಾರ್ಡುದಾರರಿಗೂ ಈ ಸೌಲಭ್ಯ ದೊರೆಯಲಿದೆ' ಎಂದು ತಿಳಿಸಿದ್ದಾರೆ.

English summary
Karnataka CM Siddaramaiah given complete information about Congress guarantees.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X