ರಾಯಚೂರಿಗೆ ‘ಏಮ್ಸ್’ ಫಿಕ್ಸ್? ಸಿದ್ದರಾಮಯ್ಯ ಸರ್ಕಾರದ ನಿರ್ಧಾರವೇನು?
ರಾಯಚೂರು: ಕರ್ನಾಟಕದ ಗಡಿ ಜಿಲ್ಲೆ ಹಾಗೂ ಬಿಸಿಲನಾಡು ಎಂದೇ ಖ್ಯಾತಿ ಪಡೆದಿರುವ ರಾಯಚೂರಿಗೆ ಏಮ್ಸ್ ಬೇಕು ಎಂಬ ಒತ್ತಾಯ ಕೇಳಿಬರುತ್ತಿತ್ತು. ಇದೀಗ ಒತ್ತಾಯಕ್ಕೆ ರಾಜ್ಯ ಸರ್ಕಾರ ಮನ್ನಣೆ ನೀಡಿದ್ದು, ಖುದ್ದು ಸಿಎಂ ಸಿದ್ದರಾಮಯ್ಯ ರಾಯಚೂರಿನ ಪ್ರಜೆಗಳ ಮನವಿ ಪೂರೈಸಲು ಮುಂದಾಗಿದ್ದಾರೆ. ಹಾಗಾದ್ರೆ ಸಿಎಂ ಸಿದ್ದರಾಮಯ್ಯ ಕೈಗೊಂಡಿರುವ ನಿರ್ಧಾರ ಏನದು? ಮುಂದೆ ಓದಿ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಯಚೂರಿನಲ್ಲೂ ಏಮ್ಸ್ (All India Institute of Medical Sciences) ಸ್ಥಾಪಿಸುವಂತೆ ಒತ್ತಾಯಿಸಿ ಕೇಂದ್ರ ಆರೋಗ್ಯ ಸಚಿವ ಮನ್ ಸುಖ್ ಮಾಂಡವೀಯ ಅವರಿಗೆ ಪತ್ರ ಬರೆದಿದ್ದಾರೆ. ರಾಯಚೂರಿನಲ್ಲಿ ಆರೋಗ್ಯ, ಶಿಕ್ಷಣದ ಮಟ್ಟ ಮತ್ತು ತಲಾ ಆದಾಯವು ಇತರ ಪ್ರದೇಶಗಳಿಗಿಂತ ಕಡಿಮೆ ಇದೆ. ವಿಪರೀತ ಹವಾಗುಣದಿಂದಾಗಿ ಭೌಗೋಳಿಕವಾಗಿಯೂ ಪ್ರತಿಕೂಲ ವಾತಾವರಣ ಹೊಂದಿದೆ. ಈ ಎಲ್ಲಾ ಕಾರಣಗಳಿಂದಾಗಿ ರಾಯಚೂರಲ್ಲಿ ಅತ್ಯಾಧುನಿಕ ವೈದ್ಯಕೀಯ ಸೌಲಭ್ಯಗಳ ಅಗತ್ಯವಿದೆ. ಏಮ್ಸ್ ಸ್ಥಾಪನೆಯಿಂದ ಈ ಭಾಗದಲ್ಲಿ ವಿಶ್ವದರ್ಜೆ ವೈದ್ಯಕೀಯ ಸೌಲಭ್ಯ ಒದಗಿಸಿದಂತಾಗುತ್ತೆ ಎಂದು ಸಿಎಂ ಕೂಡ ಪ್ರತಿಪಾದಿಸಿದ್ದಾರೆ.

ಕರ್ನಾಟಕದ ಗಡಿ ಜಿಲ್ಲೆಗೆ ಏಮ್ಸ್?
ಏಮ್ಸ್ ಸ್ಥಾಪನೆಗೆ ಈ ಭಾಗದ ಜನತೆ ಮತ್ತು ಜನಪ್ರತಿನಿಧಿಗಳ ಬೇಡಿಕೆ ಹೆಚ್ಚಿದೆ. ಕಳೆದ ಹಲವು ವರ್ಷಗಳಿಂದಲೂ ಈ ರೀತಿಯ ಒತ್ತಾಯ ಕೇಳಿಬಂದಿದೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿ ನಮ್ಮ ಅತ್ಯಾದ್ಯತೆ ವಿಷಯವಾಗಿದೆ. ಆದ್ದರಿಂದ ಸಂಬಂಧಿಸಿದವರಿಗೆ ಈ ಬಗ್ಗೆ ಕ್ರಮ ವಹಿಸಲು ಸೂಚನೆ ನೀಡುವಂತೆ ಸಿಎಂ ಸಿದ್ದರಾಮಯ್ಯ ಕೇಂದ್ರ ಸಚಿವರ ಬಳಿ ಮನವಿ ಮಾಡಿ ಪತ್ರ ಬರೆದಿದ್ದಾರೆ. ಗ್ಯಾರಂಟಿ ವಿಚಾರಗಳಲ್ಲಿ ಫೈಟ್ ನಡೆಯುವಾಗಿ ಸಿಎಂ ಸಿದ್ದರಾಮಯ್ಯ ಅವ್ರ ಈ ಪತ್ರ ಇದೀಗ ಸಂಚಲನ ಸೃಷ್ಟಿಸಿದೆ.
ಮತ್ತೊಂದ್ಕಡೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಭೋಸರಾಜು ಅವರು ರಾಯಚೂರಿನಲ್ಲಿ ಏಮ್ಸ್ ಸ್ಥಾಪಿಸುವ ಕುರಿತಾಗಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಇತ್ತೀಚೆಗೆ ಸಿಎಂಗೆ ಮನವಿ ಮಾಡಿದ್ದರು. ಅದರಂತೆ ಸಿಎಂ ಕೇಂದ್ರ ಸಚಿವರಿಗೆ ಪತ್ರ ಬರೆದಿದ್ದಾರೆ ಅಂತಾ ಹೇಳಲಾಗುತ್ತಿದೆ. ಈ ಮೂಲಕ ರಾಜ್ಯಕ್ಕೆ ದೇಶದ ಪ್ರತಿಷ್ಠಿತ ಆಸ್ಪತ್ರೆ ಬರುವುದು ಕೂಡ ಬಹುತೇಕ ಪಕ್ಕಾ ಆಗಿದೆ. ಆದರೆ ಕೇಂದ್ರ ಸರ್ಕಾರ ಈ ಪತ್ರಕ್ಕೆ ಯಾವ ರೀತಿ ಪ್ರತಿಕ್ರಿಯೆ ನೀಡುತ್ತೆ? ಅನ್ನೋದನ್ನ ಕಾದು ನೋಡಬೇಕಿದೆ. ಹಾಗೇ ಲೋಕಸಭೆ ಚುನಾವಣೆ ಹಾಗೂ ಬಿಬಿಎಂಪಿ ಚುನಾವಣೆ ಹತ್ತಿರ ಆಗುತ್ತಿದ್ದಂತೆ ಈ ಬೆಳವಣಿಗೆ ತೀವ್ರ ಕುತೂಹಲ ಕೆರಳಿಸಿದೆ.












Click it and Unblock the Notifications