ಕೃಷಿ ಕ್ಷೇತ್ರದ ಹೊಸ ಬದಲಾವಣೆಗಳು ಪ್ರತಿ ರೈತರಿಗೆ ತಲುಪಬೇಕು: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಏಪ್ರಿಲ್ 24: ಕೃಷಿ ಕ್ಷೇತ್ರದಲ್ಲಿ ನಡೆಯುತ್ತಿರುವ ಹೊಸ ತಂತ್ರಜ್ಞಾನ ಮತ್ತು ಬದಲಾವಣೆಗಳು ಪ್ರತಿಯೊಬ್ಬ ರೈತನಿಗೂ ತಲುಪಬೇಕೆಂಬುದು ರಾಜ್ಯ ಸರ್ಕಾರದ ಪ್ರಮುಖ ಗುರಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ "ಗ್ಲೋಬಲ್ ಅಗ್ರಿಟೆಕ್ ಸಮ್ಮಿಟ್-2026" ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೃಷಿಯನ್ನು ಲಾಭದಾಯಕವಾಗಿಸಲು ಸರ್ಕಾರದ ಯೋಜನೆಗಳು ಹಾಗೂ ತಂತ್ರಜ್ಞಾನಗಳ ಬಳಕೆ ಅತ್ಯಂತ ಅಗತ್ಯ ಎಂದು ಹೇಳಿದರು.

ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು

ಎಫ್ ಕೆ ಸಿಸಿಐ ಅಧ್ಯಕ್ಷರಾದ ಶ್ರೀಮತಿ ಉಮಾರೆಡ್ಡಿ ಅವರು ಉತ್ತಮ ವಾಣಿಜ್ಯೋದ್ಯಮಿಯಾಗಿ ನನಗೆ ಚಿರಪರಿಚಿತರು. ಕೃಷಿ ವಿವಿ ಹಾಗೂ ಎಫ್ ಕೆ ಸಿಸಿಐ ಸಹಭಾಗಿತ್ವದಲ್ಲಿ ಏರ್ಪಡಿಸಲಾದ ಆಯೋಜಿಸಿದ್ದ "ಗ್ಲೋಬಲ್ ಅಗ್ರಿಟೆಕ್ ಸಮ್ಮಿಟ್-2026 ರೈತರಿಗೆ ಸಹಕಾರಿಯಾಗಿದೆ. ರೈತರಿಗೆ ಉಪಯುಕ್ತವಾದ ಈ ಕಾರ್ಯಕ್ರಮದಲ್ಲಿ ಸಾವಯವ ಕೃಷಿ ಹಾಗೂ ಯಂತ್ರೋಪಕರಣಗಳ ವಸ್ತುಪ್ರದರ್ಶನ ಏರ್ಪಡಿಸಿರುವುದು ಉತ್ತಮವಾಗಿದೆ. ಆದರೆ ವಸ್ತುಪ್ರದರ್ಶನವನ್ನು ಪ್ರತ್ಯೇಕವಾಗಿ ಆಯೋಜಿಸುವುದು ಉತ್ತಮವಾಗಿದೆ. ಇಂತಹ ಕಾರ್ಯಕ್ರಮಗಳಲ್ಲಿ ರೈತರು ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸುವಂತಾಗಬೇಕು ಎಂದರು.

Karnataka CM Siddaramaiah

ಕೃಷಿ ಲಾಭದಾಯಕಗೊಳಿಸಲು ಸರ್ಕಾರದ ಯೋಜನೆಗಳು

ಭಾರತ ದೇಶ ಕೃಷಿಪ್ರಧಾನ ದೇಶ. ಕೃಷಿಯನ್ನು ಸುಸ್ಥಿರಗೊಳಿಸುವುದು ಹಾಗೂ ಲಾಭದಾಯಕಗೊಳಿಸುವುದೇ ಈ ಕಾರ್ಯಕ್ರಮದ ಉದ್ದೇಶವಾಗಿದೆ. ಇಂದಿನ ಯುವಜನತೆ ಕೃಷಿಯಿಂದ ವಿಮುಖರಾಗುತ್ತಿದ್ದಾರೆ. ಕೃಷಿ ಲಾಭದಾಯಕವಾದರೆ ಯುವಜನತೆ ಸಹಜವಾಗಿ ಕೃಷಿಯತ್ತ ಮುಖಮಾಡುತ್ತಾರೆ. ಸರ್ಕಾರ ಕೃಷಿಯನ್ನು ಲಾಭದಾಯಕಗೊಳಿಸಲು ಹಲವು ಯೋಜನೆಗಳನ್ನು ರೂಪಿಸಿ, ಈ ಉದ್ದೇಶಕ್ಕೆ ಕೈಗಾರಿಕೆಗಳೂ ಕೈಜೋಡಿಸಬೇಕು ಎಂದರು.

ಕೇಂದ್ರದ ದಾಳಿಗಳು ಕಾಂಗ್ರೆಸ್ ನಾಯಕರ ಮೇಲೆಯೇ: ಸಿಎಂ ಸಿದ್ದರಾಮಯ್ಯ ಆರೋಪ
ಕೇಂದ್ರದ ದಾಳಿಗಳು ಕಾಂಗ್ರೆಸ್ ನಾಯಕರ ಮೇಲೆಯೇ: ಸಿಎಂ ಸಿದ್ದರಾಮಯ್ಯ ಆರೋಪ

ಕೃಷಿ ತಂತ್ರಜ್ಞಾನಕ್ಕೂ ಬೆಂಗಳೂರು ರಾಜಧಾನಿಯಾಗಬೇಕು

ಮಾಹಿತಿ ತಂತ್ರಜ್ಞಾನದಲ್ಲಿ ಬೆಂಗಳೂರು ರಾಜಧಾನಿಯಾದಂತೆ, ಕೃಷಿ ತಂತ್ರಜ್ಞಾನದಲ್ಲಿಯೂ ಬೆಂಗಳೂರು ರಾಜಧಾನಿಯಾಗಬೇಕು. ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಕೃತಕ ಬುದ್ದಿಮತ್ತೆ ಸೇರಿದಂತೆ ಎಲ್ಲ ಕ್ಷೇತ್ರಗಳ ತಂತ್ರಜ್ಞಾನವನ್ನು ಬಳಸಿಕೊಳ್ಳಬೇಕು ಎಂದರು.

ಜನಗಣತಿಯ ನಂತರವೇ ಕ್ಷೇತ್ರ ಮರು ವಿಂಗಡನೆ ಸೂಕ್ತ: ಸಿಎಂ ಸಿದ್ದರಾಮಯ್ಯ ಅಭಿಪ್ರಾಯ
ಜನಗಣತಿಯ ನಂತರವೇ ಕ್ಷೇತ್ರ ಮರು ವಿಂಗಡನೆ ಸೂಕ್ತ: ಸಿಎಂ ಸಿದ್ದರಾಮಯ್ಯ ಅಭಿಪ್ರಾಯ

ಬಿಜೆಪಿ ಸ್ಥಗಿತಗೊಳಿಸಿದ್ದ 'ಕೃಷಿಭಾಗ್ಯ'ವನ್ನು ಸರ್ಕಾರ ಪುನ: ಜಾರಿಗೊಳಿಸಿದೆ

ರಾಜ್ಯದಲ್ಲಿ ಒಣಭೂಮಿಯ ಪ್ರಮಾಣ ಹೆಚ್ಚಿದ್ದು, ಸಣ್ಣಹಿಡುವಳಿದಾರರಿಗೆ ಕೃಷಿಯನ್ನು ಲಾಭದಾಯಕಗೊಳಿಸಬೇಕಿದೆ. ಆದ್ದರಿಂದ ನಮ್ಮ ಸರ್ಕಾರ ಕೃಷಿಭಾಗ್ಯ ಯೋಜನೆಯನ್ನು ಜಾರಿಗೆ ತಂದಿತು. ಹೆಚ್ಚು ಒಣಭೂಮಿಯಿರುವ ರಾಜ್ಯಗಳಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಬಿಜೆಪಿಯವರು ಅಧಿಕಾರಕ್ಕೆ ಬಂದಾಗ ಕೃಷಿಭಾಗ್ಯವನ್ನು ಸ್ಥಗಿತಗೊಳಿಸಿದ್ದು, ನಮ್ಮ ಸರ್ಕಾರ ಈ ಯೋಜನೆಗೆ ಮರುಜಾರಿಗೊಳಿಸಿದೆ. ಸುಮಾರು 83 ಲಕ್ಷ ರೈತರಿಗೆ 70 ಸಾವಿರ ಕೋಟಿ ರೂ.ಗಳ ಕೃಷಿಸಾಲವನ್ನು ನೀಡಲಾಗಿದೆ. ಕಳೆದ ವರ್ಷ 8 ಸಾವಿರ ಕೋಟಿ ಗಳನ್ನು ಮುಖ್ಯಮಂತ್ರಿಗಳ ಮೂಲಭೂತ ಸೌಕರ್ಯಗಳಿಗೆ ಇಡಲಾಗಿತ್ತು. ಬಂಡವಾಳ ಹೂಡಿಕೆ ಅಧಿಕಗೊಳ್ಳಬೇಕು. ಕೈಗಾರಿಕೆ, ಗ್ರಾಮೀಣಾಭೀವೃದ್ಧಿಯಲ್ಲಿ ಕರ್ನಾಟಕ ಮೊದಲನೇ ಸ್ಥಾನದಲ್ಲಿದ್ದು, ಕೃಷಿ ಕ್ಷೇತ್ರದಲ್ಲಿಯೂ ಹೂಡಿಕೆಗಳು ಹೆಚ್ಚಾಗಬೇಕು. ಆಗ ಮಾತ್ರ ಕೃಷಿ ಲಾಭದಾಯಕವಾಗಲಿದೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+