Maize Price: ಮೆಕ್ಕೆಜೋಳ ಖರೀದಿ ಬಗ್ಗೆ ಸಿಎಂ ಸಿದ್ದರಾಮಯ್ಯ ಮಹತ್ವದ ನಿರ್ಧಾರ

ರಾಜ್ಯದ ರೈತರ ಬಹುದಿನಗಳ ಬೇಡಿಕೆಯಾಗಿರುವ ಮೆಕ್ಕೆಜೋಳ ಖರೀದಿ ಹಾಗೂ ಬೆಂಬಲ ಬೆಲೆ ನಿಗದಿ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ. ಮೆಕ್ಕೆಜೋಳ ಖರೀದಿ ಹಾಗೂ ಎಥೆನಾಲ್ ನಿರ್ವಹಣೆಗೆ ಸಂಬಂಧಿಸಿದಂತೆ ವಿಧಾನಸೌಧದ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಹತ್ವದ ಚರ್ಚೆ ನಡೆಸಿದ್ದಾರೆ. ಕೇಂದ್ರ ಸರ್ಕಾರ ನಿಗದಿಪಡಿಸಿರುವ ಎಥೆನಾಲ್ ಕೋಟಾಗೆ ಅನುಗುಣವಾಗಿ ಯಾವ ಡಿಸ್ಟಿಲರಿಗಳು ಎಷ್ಟು ಮೆಕ್ಕೆಜೋಳ ಖರೀದಿಸಬೇಕು ಎಂಬ ಬಗ್ಗೆ ಕೃಷಿ ಮಾರುಕಟ್ಟೆ ಇಲಾಖೆ ಈಗಾಗಲೇ ಸೂಚನೆಗಳನ್ನು ನೀಡಿದೆ. ಇದರ ಪ್ರಕಾರ ಡಿಸ್ಟಿಲರಿಗಳು ಮೆಕ್ಕೆಜೋಳ ಖರೀದಿಸಿ ರೈತರ ನೆರವಿಗೆ ಬರಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಕೇಂದ್ರ ಸರ್ಕಾರ ಈಗಾಗಲೇ ಎಲ್ಲ ಧಾನ್ಯ ಆಧಾರಿತ ಡಿಸ್ಟಿಲರಿಗಳು ನಾಫೆಡ್, ಎನ್‌ಸಿಸಿಎಫ್ ಮೂಲಕ ಮೆಕ್ಕೆಜೋಳ ಸಂಗ್ರಹಿಸಲು ಪ್ರಮಾಣಿತ ಕಾರ್ಯವಿಧಾನ (ಎಸ್ಒಪಿ) ಹೊರಡಿಸಿದೆ. ಇದರ ಪ್ರಕಾರ ಎಲ್ಲ ಡಿಸ್ಟಿಲರಿಗಳು ಕಾರ್ಯನಿರ್ವಹಿಸಬೇಕು. ಎಥೆನಾಲ್ ಕೋಟಾ ನಿಗದಿ, ಮೆಕ್ಕೆಜೋಳ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡುವುದು ಕೇಂದ್ರ ಸರ್ಕಾರ. ಆದರೂ ಮೆಕ್ಕೆಜೋಳ ಬೆಳೆಗಾರರ ಹಿತವನ್ನು ಕಾಪಾಡಲು ರಾಜ್ಯ ಸರ್ಕಾರ ಎಲ್ಲ ಕ್ರಮಗಳನ್ನು ಕೈಗೊಳ್ಳಲಿದೆ ಎಂದಿದ್ದಾರೆ.

Karnataka CM Siddaramaiah Orders Direct Maize Procurement MSP Fixed At 2400 Per Quintal

ಡಿಸ್ಟಿಲರಿಗಳು ನೇರವಾಗಿ ರೈತರಿಂದ ಕನಿಷ್ಠ ಬೆಂಬಲ ದರ ನೀಡಿ ಮೆಕ್ಕೆಜೋಳ ಖರೀದಿಸಲು ಮುಂದೆ ಬಂದರೆ, ಜಿಲ್ಲಾಡಳಿತದ ಮೂಲಕ ಸಹಕಾರ ನೀಡಲಾಗುವುದು. ಈಗಾಗಲೇ ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿ ರಾಜ್ಯದ ಕಬ್ಬು ಬೆಳೆಗಾರರ, ಸಕ್ಕರೆ ಕಾರ್ಖಾನೆಗಳ ಹಾಗೂ ಡಿಸ್ಟಿಲರಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಮನವರಿಕೆ ಮಾಡಿದ್ದೇನೆ.

ಕ್ವಿಂಟಾಲ್‌ಗೆ 2,400 ರೂಪಾಯಿ

ಮೆಕ್ಕೆಜೋಳದ ನಾಫೆಡ್ ಪೂರ್ವ ನಿರ್ಧಾರಿತ ಖರೀದಿ ಬೆಲೆ ಕ್ವಿಂಟಾಲ್‌ಗೆ 2,639 ರೂಪಾಯಿ ಇದೆ. ಇದರಲ್ಲಿ ಪ್ರತಿ ಕ್ವಿಂಟಾಲ್‌ಗೆ ರೂ.2,400 ಕನಿಷ್ಟ ಬೆಂಬಲ ಬೆಲೆ ಮೂಲಕ ರೈತರಿಗೆ ನೇರವಾಗಿ ಪಾವತಿಯಾಗಲಿದೆ. ಈ ಹಿನ್ನೆಲೆಯಲ್ಲಿ ನೇರವಾಗಿ ರೈತರಿಂದ ಮೆಕ್ಕೆಜೋಳ ಖರೀದಿಗೆ ಡಿಸ್ಟಿಲರಿಗಳಿಗೆ ಅವಕಾಶ ನೀಡಲಾಗಿದ್ದು, ಈ ಕುರಿತು ಡಿಸ್ಟಿಲರಿಗಳು ನಿರ್ಧಾರ ಕೈಗೊಳ್ಳಬೇಕಾಗಿದೆ.

ರಾಜ್ಯದಲ್ಲಿ ಧಾನ್ಯ ಮಾತ್ರ ಆಧಾರಿತ ಮೂರು ಡಿಸ್ಟಿಲರಿಗಳಿಗೆ ಒಟ್ಟು 94,400 ಕಿ.ಲೀ ಎಥೆನಾಲ್ ಹಂಚಿಕೆ ಮಾಡಲಾಗಿದೆ. 2,48,461 ಮೆಟ್ರಿಕ್‌ ಟನ್ ಮೆಕ್ಕೆಜೋಳದ ಅವಶ್ಯಕತೆ ಇದೆ. 7 ಡ್ಯುಯಲ್ ಫೀಡ್‌ಸ್ಟಾಕ್ ಡಿಸ್ಟಿಲರಿಗಳಿಗೆ 1,90,751 ಕಿ.ಲೀ ಎಥೆನಾಲ್ ಹಂಚಿಕೆ ಮಾಡಲಾಗಿದೆ. 5,02,056 ಮೆಟ್ರಿಕ್‌ ಟನ್ ಮೆಕ್ಕೆಜೋಳದ ಅವಶ್ಯಕತೆಯಿದೆ. ನಿಯಮಾನುಸಾರ ಡಿಸ್ಟಿಲರಿಗಳು ರೈತರಿಂದ ಮೆಕ್ಕೆಜೋಳ ಖರೀದಿಸಿ, ರೈತರ ಹಿತ ಕಾಯುವ ನಮ್ಮ ಪ್ರಯತ್ನಕ್ಕೆ ಬೆಂಬಲವಾಗಿ ನಿಲ್ಲಬೇಕು ಎಂದು ಮನವಿ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+