BREAKING: KPSC ಲೋಪ; ಪರೀಕ್ಷಾರ್ಥಿಗಳಿಗೆ ಮಹತ್ವದ ಸುದ್ದಿ ಕೊಟ್ಟ ಸಿಎಂ

ಬೆಂಗಳೂರು, ಸೆಪ್ಟೆಂಬರ್‌ 02: ಇತ್ತೀಚೆಗೆ ನಡೆದ KPSC ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಯಲ್ಲಿ ಲೋಪಗಳು ಕಂಡುಬಂದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ಕನ್ನಡಕ್ಕೆ ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು ಅಸಮರ್ಪಕವಾಗಿದ್ದವೆಂಬ ವಿಚಾರ ನನ್ನ ಗಮನಕ್ಕೆ ಬಂದ ತಕ್ಷಣ, ಪರೀಕ್ಷಾರ್ಥಿಗಳಿಗೆ ಅನ್ಯಾಯವಾಗಬಾರದೆಂಬ ಉದ್ದೇಶದಿಂದ ಮುಂದಿನ ಎರಡು ತಿಂಗಳುಗಳ ಒಳಗೆ ಮರುಪರೀಕ್ಷೆ ಮಾಡುವಂತೆ ಕೆಪಿಎಸ್‌ಸಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದ್ದಾರೆ.

Karnataka CM Siddaramaiah Orders To Conduct KPSC Re-examination

ಕರ್ತವ್ಯ ಲೋಪವೆಸಗಿದ ಅಧಿಕಾರಿಗಳನ್ನು ಸೇವೆಯನ್ನು ಅಮಾನತು ಮಾಡಲಾಗಿದೆ. ಮುಂಬರುವ ಪರೀಕ್ಷೆಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ, ಸಮರ್ಪಕವಾಗಿ ನಡೆಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ನಾವು ನೇಮಕಾತಿ ಪ್ರಕ್ರಿಯೆಗಳ ಸಮಗ್ರತೆ ಮತ್ತು ನಂಬಿಕಾರ್ಹತೆಯನ್ನು ಎತ್ತಿಹಿಡಿದು, ಪರೀಕ್ಷಾರ್ಥಿಗಳ ಹಿತರಕ್ಷಿಸಲು ಬದ್ಧರಾಗಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) ಆಗಸ್ಟ್‌ 27ರಂದು ನಡೆಸಿದ ಗೆಜೆಟೆಡ್ ಪ್ರೊಬೇಷನರ್ಸ್‌ 384 ಹುದ್ದೆಗಳ ನೇಮಕಾತಿ ಪೂರ್ವಭಾವಿ ಪರೀಕ್ಷೆ ಭಾರೀ ಚರ್ಚೆಗೆ ಕಾರಣವಾಗಿತ್ತು. ಕೆಪಿಎಸ್‌ಸಿಯಲ್ಲಿ ಬದಲಾವಣೆ ಬೇಕು, ಕೆಪಿಎಸ್‌ಸಿ ಮರು ಪರೀಕ್ಷೆಯನ್ನು ನಡೆಸಬೇಕು ಎಂಬ ಕೂಗು ಜೋರಾಗಿತ್ತು. ಪ್ರಶ್ನೆಪತ್ರಿಕೆಯಲ್ಲಿನ ತಪ್ಪಾದ ಕನ್ನಡವನ್ನು ಖಂಡಿಸಿ ಇಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಕೂಡ ಹಮ್ಮಿಕೊಳ್ಳಲಾಗಿದೆ.

ಕೆಪಿಎಸ್‌ಸಿ ನೇಮಕಾತಿ ಪೂರ್ವಭಾವಿ ಪರೀಕ್ಷೆ ಪ್ರಶ್ನೆ ಪತ್ರಿಕೆಯಲ್ಲಿನ ಕನ್ನಡ ದೋಷದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿತ್ತು. ಕನ್ನಡ ಅಭಿವೃದ್ಧಿ ಪ್ರಾಧಿಕಾರವೂ ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ಕೆಪಿಎಸ್‌ಸಿಯಿಂದ ವರದಿಯನ್ನು ಕೇಳಿತ್ತು.

ಜೊತೆಗೆ ಕರ್ನಾಟಕ ರಾಜ್ಯ ಸ್ಪರ್ಧಾತ್ಮಕ ಪರೀಕ್ಷಾ ಆಕಾಂಕ್ಷಿಗಳ ಸಂಘಗಳ ಒಕ್ಕೂಟವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರವನ್ನು ಬರೆದಿದ್ದು, ಮರು ಪರೀಕ್ಷೆ ನಡೆಸಲು ಕೆಪಿಎಸ್‌ಸಿಗೆ ಸೂಕ್ತ ಆದೇಶವನ್ನು ನೀಡಬೇಕು ಎಂದು ಮನವಿ ಮಾಡಿತ್ತು. ಈ ಸಂಬಂಧ ಒಕ್ಕೂಟದ ಅಧ್ಯಕ್ಷೆ ಭವ್ಯಾ ನರಸಿಂಹಮೂರ್ತಿ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು.

ಕೆಪಿಎಸ್‌ಸಿ ಪರೀಕ್ಷೆ ಬಗ್ಗೆ ಭಾರಿ ವಿರೋಧ ವ್ಯಕ್ತವಾದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರು ಮುಂದಿನ ಎರಡು ತಿಂಗಳೊಳಗೆ ಮರುಪರೀಕ್ಷೆ ನಡೆಸುವಂತೆ ಸೂಚಿಸಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡುವ ಮೂಲಕ ಮರುಪರೀಕ್ಷೆಯ ಬಗ್ಗೆ ಮಾಹಿತಿ ಹಂಚೊಕೊಂಡಿದ್ದಾರೆ. ಇದರಿಂದ ಪರೀಕ್ಷೆ ಬರೆದಿದ್ದ ಅಭ್ಯರ್ಥಿಗಳ ಕೂಗಿಗೆ ನ್ಯಾಯ ಸಿಕ್ಕಂತಾಗಿದೆ ಎಂದು ನಿಟ್ಟುಸಿರು ಬಿಟ್ಟಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+