Karnataka Budget 2026: ನಾಯಕತ್ವ ಬದಲಾವಣೆ ನಡುವೆಯೇ ಬಜೆಟ್ ಸಿದ್ಧತೆಗೆ ಸಿದ್ದರಾಮಯ್ಯ ಕಸರತ್ತು
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆಯೇ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2026-27 ಬಜೆಟ್ ಸಿದ್ಧತೆಗೆ ಜನವರಿ ಮೊದಲ ವಾರದಿಂದ ಸಿದ್ದತೆಯನ್ನ ಶುರು ಮಾಡುತ್ತಿದ್ದಾರೆ. ಇದು ಮುಖ್ಯಮಂತ್ರಿ ಹುದ್ದೆಯಲ್ಲಿ ಸಿದ್ದರಾಮಯ್ಯ ಅವರು ಮುಂದುವರಿಕೆಗೆ ಸಂಕೇತ ಎಂದು ರಾಜಕೀಯ ವಲಯಗಳಲ್ಲಿ ಚರ್ಚೆ ನಡೆಯುತ್ತಿದೆ. ಸಾಮಾನ್ಯವಾಗಿ ಬಜೆಟ್‌ಗೆ ಸಂಬಂಧಿಸಿದಂಯೆ ಡಿಸೆಂಬರ್‌ನಿಂದ ಆರಂಭವಾಗುತ್ತಿದ್ದ ಸಿದ್ಧತೆ ಈ ಬಾರಿ ನಾಯಕತ್ವ ಬದಲಾವಣೆಯಗೊಂದಲದಿಂದ ಸ್ವಲ್ಪ ತಡವಾಗಿ ಸಿದ್ದತೆ ಆರಂಭವಾಗಿದೆ.
ನಾಯಕತ್ವ ಬದಲಾವಣೆ ಕುರಿತು ಕಳೆದ ಆರು ತಿಂಗಳಿನಿಂದ ಭಾರೀ ಚರ್ಚೆಯಾಗುತ್ತಿದ್ದು, ಈ ಹಿಂದೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2026-27ರ ರಾಜ್ಯ ಬಜೆಟ್ ಮಂಡಿಸುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದರು. ಕೆಲ ಕಾಂಗ್ರೆಸ್ ಶಾಸಕರೇ ಸಿಎಂ ಬದಲಾವಣೆ ಬಗ್ಗೆ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ನಡುವೆ ಬಜೆಟ್ ಮಂಡನೆಗೆ ಸಿದ್ಧತೆಗಳು ನಡೆಯುತ್ತಿವೆ. ಜನವರಿಯಲ್ಲಿ ಬಜೆಟ್ ಸಿದ್ಧತೆಗಳನ್ನು ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

2026-27ನೇ ಹಣಕಾಸು ವರ್ಷದ ಬಜೆಟ್ ಸಿದ್ಧತೆಗೆ ಅಣಿಯಾಗಿದ್ದು, ಜನವರಿ ಮೊದಲ ವಾರದಿಂದಲೇ ಬಜೆಟ್ ಸಿದ್ಧತಾ ಪೂರ್ವಭಾವಿ ಪ್ರಕ್ರಿಯೆಗಳು ಶುರುವಾಗಲಿವೆ. ಈ ಸಂಬಂಧ ಮುಖ್ಯಮಂತ್ರಿ ಅವರೇ ಗುರುವಾರ ಮಾಹಿತಿ ನೀಡಿದ್ದು, ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭಿಸುವುದಾಗಿ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಈ ವರ್ಷ ಜನವರಿಯಲ್ಲಿ ಸಭೆ ನಡೆಸುತ್ತಿದ್ದು, ಫೆಬ್ರವರಿ ಅಂತ್ಯಕ್ಕೆ ಅಥವಾ ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಮಂಡಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಇನ್ನೂ ಬಜೆಟ್‌ಗೆ ಸಂಬಂಧಿಸಿದಂತೆ ಮೊದಲಿಗೆ ಮುಖ್ಯಮಂತ್ರಿ ಅವರು ಇಲಾಖಾವಾರು ಬಜೆಟ್ ಪೂರ್ವಭಾವಿ ಸಭೆಗಳನ್ನು ನಡೆಸಲಿದ್ದಾರೆ. ಯಾವ್ಯಾವ ಇಲಾಖೆಯಿಂದ ಎಷ್ಟೆಷ್ಟು ಆದಾಯ ನಿರೀಕ್ಷಿಸಲಾಗಿತ್ತು? ಹಣಕಾಸು ವರ್ಷಾಂತ್ಯದ ವೇಳೆಗೆ ಎಷ್ಟು ಆದಾಯ ಬರಬಹುದು? ಕಳೆದ ಬಜೆಟ್‌ನಲ್ಲಿ ಆಯಾ ಇಲಾಖೆಗಳಿಗೆ ಹಂಚಿಕೆಯಾಗಿರುವ ಅನುದಾನದಲ್ಲಿ ಎಷ್ಟು? ಹಾಗೂ ಅದರಲ್ಲಿ ಬಳಕೆಯಾಗಿದೆ? ಎಷ್ಟು ಉಳಿದಿದೆ? ಮುಂದಿನ ವರ್ಷದಲ್ಲಿ ಇಲಾಖಾವಾರು ಆದಾಯ ನಿರೀಕ್ಷೆ ಮತ್ತು ಖರ್ಚು-ವೆಚ್ಚಗಳ ಆಧಾರದಲ್ಲಿ ಹೊಸ ಯೋಜನೆಗಳ ಲೆಕ್ಕಾಚಾರ ನಡೆಯಲಿದೆ.
ಎಲ್ಲಾ ಇಲಾಖೆಯ ಅಧಿಕಾರಿ ಹಾಗೂ ಸಚಿವರ ಜೊತೆಗಿನ ಚರ್ಚೆಯ ಬಳಿಕ ಹಣಕಾಸು ಇಲಾಖೆಯೊಂದಿಗೆ ಸಭೆ ನಡೆಸಿ ಸಂಪನ್ಮೂಲ ಸಂಗ್ರಹ ಸಂಬಂಧ ಮತ್ತೊಮ್ಮೆ ಅವಲೋಕನ ಕೈಗೊಳ್ಳಲಿದ್ದಾರೆ. ಅಲ್ಲದೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತರು, ವಾಣಿಜ್ಯೋದ್ಯಮಗಳು, ಸಾರಿಗೆ, ಕಾರ್ಮಿಕ ಮತ್ತಿತರ ಸಂಘಟನೆಗಳಿಂದ ಬೇಡಿಕೆಗಳನ್ನು ಸ್ವೀಕರಿಸಿ ಸಾಧ್ಯವಾಗುವ ಬೇಡಿಕೆಗಳನ್ನು ಬಜೆಟ್‌ನಲ್ಲಿ ಸೇರಿಸುವ ಪ್ರಯತ್ನ ನಡೆಯಲಿದೆ ಎಂದು ತಿಳಿದು ಬಂದಿದೆ.
ನವೆಂಬರ್‌ನಲ್ಲಿ, ಮುಂದಿನ ವರ್ಷ ತಮ್ಮ ದಾಖಲೆಯ 17 ನೇ ಬಜೆಟ್ ಅನ್ನು ಮಂಡಿಸುವುದಾಗಿ ಸಿದ್ದರಾಮಯ್ಯ ಪ್ರತಿಪಾದಿಸಿದ್ದರು. ಮಾರ್ಚ್ 2025 ರಲ್ಲಿ ಸಿದ್ದರಾಮಯ್ಯ ಅವರು ತಮ್ಮ 16 ನೇ ಬಜೆಟ್ ಅನ್ನು ಮಂಡಿಸಿದ್ದರು. ಕಳೆದ ವರ್ಷ ಮಾರ್ಚ್ 7ರಂದು 2025-26ನೇ ಸಾಲಿನ ಹಾಗೂ ತಮ್ಮ 16ನೇ ಮುಂಗಡ ಪತ್ರವನ್ನು ಸಿದ್ದರಾಮಯ್ಯ ಮಂಡಿಸಿದ್ದರು. ಈ ಬಾರಿ ಬಜೆಟ್ ಪೂರ್ವಸಿದ್ಧತಾ ಸಭೆಗಳು ಪೂರ್ಣಗೊಂಡ ಬಳಿಕ ಸಿದ್ದರಾಮಯ್ಯ ಅವರು 17ನೇ ಬಜೆಟ್ ಮಂಡನೆಗೆ ದಿನಾಂಕ ಅಂತಿಮಗೊಳಿಸಬೇಕಾಗಿದೆ ಎಂದು ಹೇಳಲಾಗಿದೆ.












Click it and Unblock the Notifications