ಆಗಸ್ಟ್ 3ರಂದು ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿ ಮಾಡಲಿರುವ ಸಿಎಂ ಸಿದ್ದರಾಮಯ್ಯ- ಏನು ವಿಶೇಷ?

ಬೆಂಗಳೂರು, ಆಗಸ್ಟ್‌ 01: ಆಗಸ್ಟ್ 3ರ ಗುರುವಾರ ಬೆಳಗ್ಗೆ 11 ಗಂಟೆಗೆ ನವದೆಹಲಿಯಲ್ಲಿ ಪ್ರಧಾನಿ ಮೋದಿ ಅವರನ್ನು ಸಿಎಂ ಸಿದ್ದರಾಮಯ್ಯ ಭೇಟಿ ಮಾಡಲಿದ್ದಾರೆ. ಮೇ ತಿಂಗಳಲ್ಲಿ ( ಎರಡನೇ ಬಾರಿಗೆ ) ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಇದೇ ಮೊದಲ ಬಾರಿಗೆ ಸಿದ್ದರಾಮಯ್ಯ ಅವರು ಮೋದಿ ಅವರನ್ನು ಭೇಟಿಯಾಗುತ್ತಿದ್ದಾರೆ. ಉಭಯ ನಾಯಕರ ಭೇಟಿ ಭಾರೀ ಕುತೂಹಲ ಕೆರಳಿಸಿದೆ.

ಭಾರತೀಯ ಆಹಾರ ನಿಗಮ (ಎಫ್‌ಸಿಐ) ರಾಜ್ಯಕ್ಕೆ ಅಕ್ಕಿ ನಿರಾಕರಿಸುವುದು ಸೇರಿದಂತೆ ಹಲವು ವಿಷಯಗಳನ್ನು ಮುಖ್ಯಮಂತ್ರಿ ಪ್ರಸ್ತಾಪಿಸುವ ನಿರೀಕ್ಷೆಯಿದೆ ಎಂದು ತಿಳಿದುಬಂದಿದೆ.

Karnataka CM Siddaramaiah to meet PM Modi in Delhi on August 3- What is special?

ಆಗಸ್ಟ್ 3 ರಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನೂ ಸಹ ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ.

ಸರಕು ಮತ್ತು ಸೇವಾ ತೆರಿಗೆಯ (ಜಿಎಸ್‌ಟಿ) ವರ್ಗಾವಣೆ ಪ್ರಕ್ರಿಯೆಯನ್ನು ತ್ವರಿತಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಅವರು ಹಣಕಾಸು ಸಚಿವರಿಗೆ ಮನವಿ ಮಾಡುವ ಸಾಧ್ಯತೆ ಇದೆ. ನಮ್ಮ ರಾಜ್ಯದ ಪಾಲಿನ ತೆರಿಗೆಯನ್ನು ಕೇಂದ್ರ ಸರ್ಕಾರ ಆದಷ್ಟು ಬೇಗನೇ ವರ್ಗಾವಣೆ ಮಾಡಬೇಕೆಂಬುದನ್ನು ಸಿದ್ದರಾಮಯ್ಯ ಹೇಳುತ್ತಲೇ ಬಂದಿದ್ದಾರೆ.

ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಸಿಎಂ ಸಭೆ ನಡೆಸಲಿದ್ದು, ರಾಜ್ಯಕ್ಕೆ ಸಂಬಂಧಿಸಿದ ವಿವಿಧ ಯೋಜನೆಗಳ ಸ್ಥಿತಿಗತಿ ಕುರಿತು ಚರ್ಚೆ ನಡೆಸಲಿದ್ದಾರೆ ಎಂದು ವರದಿಯಾಗಿದೆ.

Karnataka CM Siddaramaiah to meet PM Modi in Delhi on August 3- What is special?

ದೆಹಲಿ ಪ್ರವಾಸದ ವೇಳೆ, ಕೇಂದ್ರ ಸಚಿವರೊಂದಿಗೆ ಬೆಂಗಳೂರು-ಮೈಸೂರು ಹೆದ್ದಾರಿಯ ಸುರಕ್ಷತೆಯ ವಿಷಯವನ್ನು ಪ್ರಸ್ತಾಪಿಸುವುದಾಗಿ ಸಿಎಂ ಹೇಳಿದ್ದಾರೆ. ಈ ವರ್ಷದ ಮಾರ್ಚ್‌ನಲ್ಲಿ ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ ಹೈವೇ ಉದ್ಘಾಟನೆಯಾಗಿದೆ. ಆವಾಗಿಂದ ಇಲ್ಲಿಯವರೆಗೆ 120 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್ ಸಭೆಯಲ್ಲಿ ಪಾಲ್ಗೊಳ್ಳಲು ಸಿಎಂ ಸಿದ್ದರಾಮಯ್ಯ ಆಗಸ್ಟ್ 2 ರಂದು ದೆಹಲಿಗೆ ಆಗಮಿಸಲಿದ್ದಾರೆ. ಇದರ ಮರುದಿನವೇ ಪ್ರಧಾನಿ ಹಾಗೂ ಕೇಂದ್ರ ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ.

ಮುಖ್ಯಮಂತ್ರಿ ಆದ ಬಳಿಕ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿ ಅವರನ್ನು ಭೇಟಿ ಆಗಿರಲಿಲ್ಲ. ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಭಾರತೀಯ ಆಹಾರ ಇಲಾಖೆಯಿಂದ ರಾಜ್ಯಕ್ಕೆ ಅಕ್ಕಿ ನೀಡಬೇಕೆಂದು ಕೇಳಿಕೊಂಡಿದ್ದರು. ಆದರೆ, ಸಿದ್ದರಾಮಯ್ಯ ಮನವಿಗೆ ಕೇಂದ್ರ ಸರ್ಕಾರ ಸೊಪ್ಪು ಹಾಕಿರಲಿಲ್ಲ. ಇದೀಗ ಪ್ರಧಾನಿ ಮೋದಿ ಬಳಿ ಇದೇ ಪ್ರಸ್ತಾಪವನ್ನು ಸಿದ್ದರಾಮಯ್ಯ ಇರಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

Karnataka CM Siddaramaiah to meet PM Modi in Delhi on August 3- What is special?

ಬಿಪಿಎಲ್‌ ಕಾರ್ಡ್‌ ಹೊಂದಿದ ಪ್ರತಿ ವ್ಯಕ್ತಿಗೆ ಪ್ರತಿ ತಿಂಗಳಿಗೆ 10 ಕೆಜಿ ಅಕ್ಕಿಯನ್ನು ನೀಡುವುದಾಗಿ ಸಿದ್ದರಾಮಯ್ಯ ಸರ್ಕಾರ ಘೋಷಣೆ ಮಾಡಿದೆ. ಆದರೆ, ಇದೀಗ ಐದು ಕೆಜಿಯಷ್ಟನ್ನೇ ಕೊಡಲು ನಿರ್ಧರಿಸಿದೆ. ಇನ್ನುಳಿದ ಐದು ಕೆಜಿ ಅಕ್ಕಿ ಬದಲಾಗಿ ದುಡ್ಡನ್ನು ನೀಡಲು ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ಇದು ಸಿದ್ದರಾಮಯ್ಯನವರ ಕನಸಿನ ಯೋಜನೆಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+