ಅನೈತಿಕ ಪೊಲೀಸ್‌ಗಿರಿ, ಕಾನೂನು ಕೈಗೆತ್ತಿಕೊಂಡರೆ ಹುಷಾರ್: ಸಿಎಂ!

ಬೆಂಗಳೂರು: ನಗರದ ಶಿವಾಜಿನಗರದಲ್ಲಿನ ಸೇಂಟ್ ಮೇರಿ ಬೆಸಿಲಿಕಾ ಚರ್ಚ್‌ಗೆ ಸಿಎಂ ಇಂದು ಭೇಟಿ ನೀಡಿ, ಜಯಂತ್ಯುತ್ಸವ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಸಿದ್ದರಾಮಯ್ಯ, ಸೇಂಟ್ ಮೇರಿಯಮ್ಮನವರ ಬೆಸಿಲಿಕಾ ಚರ್ಚ್ ಅತ್ಯಂತ ದೊಡ್ಡ ಭಾವೈಕ್ಯತಾ ಕೇಂದ್ರ ಎಂದು ಪ್ರತಿಪಾದಿಸಿದರು.

ಬೆಸಿಲಿಕಾ ಪ್ರಾರ್ಥನಾ ಮಂದಿರಕ್ಕೆ ಎಲ್ಲಾ ಜಾತಿ, ಧರ್ಮದವರು ಬರುತ್ತಾರೆ. ಹೀಗೆ ಇದೊಂದು ಭಾವೈಕ್ಯತಾ ಕೇಂದ್ರವಾಗಿ ರೂಪುಗೊಂಡಿದೆ. ಹೀಗಾಗಿಯೆ ನಾನು ಈ ಜಯಂತ್ಯುತ್ಸವಕ್ಕೆ ಮತ್ತು ಹಬ್ಬಕ್ಕೆ ಪ್ರತಿ ವರ್ಷ ತಪ್ಪದೆ ಹಾಜರಾಗುತ್ತೇನೆ. ಇದು ನನಗೆ ಬಹಳ ಖುಷಿಯ ಸಂಗತಿ ಅಂತಾ ಸಂತಸ ಹಂಚಿಕೊಂಡರು. ಹಾಗೇ ಇದೇ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅನೈತಿಕ ಪೊಲೀಸ್‌ಗಿರಿ ಹಾಗೂ ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಎಚ್ಚರಿಕೆ ಸಂದೇಶವನ್ನೂ ರವಾನಿಸಿದರು.

karnataka-cm-siddaramaiah

ಅನೈತಿಕ ಪೊಲೀಸ್‌ಗಿರಿಗೆ ಎಚ್ಚರಿಕೆ ಸಂದೇಶ

ಭಾರತ ಒಂದು ಭಾವೈಕ್ಯ ಕೇಂದ್ರ. ಇಲ್ಲಿ ಜಾತಿ-ಧರ್ಮದ ಹೆಸರಿನಲ್ಲಿ ಮನುಷ್ಯ ದ್ವೇಷಕ್ಕೆ ಜಾಗ ಇಲ್ಲ. ಕೆಲವರು ಮನುಷ್ಯ ದ್ವೇಷವನ್ನೇ ಸಂಸ್ಕೃತಿಯನ್ನಾಗಿ ಆಚರಿಸಲು ಪ್ರಯತ್ನಿಸುತ್ತಿದ್ದಾರೆ. ನಮ್ಮ ಸರ್ಕಾರ ದ್ವೇಷದ ವಾತಾವರಣ ಹರಡಿಸುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮವನ್ನ ಕೈಗೊಂಡು ಭಾರತದ ಭಾವೈಕ್ಯತಾ ಪರಂಪರೆ ಕಾಪಾಡಲು ಬದ್ದವಾಗಿದೆ ಎಂದು ಸಿಎಂ ಇದೇ ವೇಳೆ ಪರೋಕ್ಷವಾಗಿ ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಗುಡಿಗಿದ್ದಾರೆ.

ಯಾವ ಧರ್ಮವೂ ಮನುಷ್ಯ ದ್ವೇಷವನ್ನು ಹೇಳುವುದಿಲ್ಲ. ಆದರೆ ಕೆಲವು ಕಪಟಿಗಳು ಧರ್ಮದ ಹೆಸರಲ್ಲಿ ಮನುಷ್ಯರನ್ನ, ಸಮಾಜವನ್ನ ವಿಭಜಿಸುವ ಕೆಲಸ ಮಾಡುತ್ತಿದ್ದಾರೆ. ನಮ್ಮ ಸರ್ಕಾರ ಇಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಿದೆ. ಅನೈತಿಕ ಪೊಲೀಸ್ ಗಿರಿ ನೆಪದಲ್ಲಿ ಯಾರಾದರೂ ಕಾನೂನು ಕೈಗೆತ್ತಿಕೊಂಡರೆ ಅವರ ವಿರುದ್ಧ ಕಾನೂನು ಕ್ರಮ ಗ್ಯಾರಂಟಿ ಎಂದು ಎಚ್ಚರಿಕೆ ಸಂದೇಶ ನೀಡಿದರು ಸಿಎಂ.

karnataka-cm-siddaramaiah

ಕ್ರೈಸ್ತ ಸಮುದಾಯ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಅಪಾರ ಪ್ರಗತಿ ಸಾಧಿಸಿ ನಾಡಿಗೆ ಸೇವೆ ಸಲ್ಲಿಸಿದೆ. ಶಿವಾಜಿನಗರ ಮೆಟ್ರೋ ನಿಲ್ದಾಣಕ್ಕೆ ಸೇಂಟ್ ಮೇರೀಸ್ ನಿಲ್ದಾಣ ಎಂದು ಹೆಸರನ್ನು ಇಡಬೇಕು ಎನ್ನುವುದೂ ಸೇರಿದಂತೆ, ಸಮುದಾಯದ ಮುಖಂಡರು ಮುಂದಿಟ್ಟಿರುವ ಮೂರು ಬೇಡಿಕೆಗಳ ಬಗ್ಗೆ ಪರಿಶೀಲಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು. ಈ ವೇಳೆ ಶಾಸಕ ರಿಜ್ವಾನ್ ಅರ್ಷದ್ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಆರ್ಚ್ ಬಿಷಪ್ ಡಾ.ಪೀಟರ್ ಮಚಾದೋ ಸೇರಿ ಹಲವು ಧರ್ಮಗುರುಗಳು ಉಪಸ್ಥಿತರಿದ್ದರು.

ಸದ್ಯದಲ್ಲೇ ಕ್ರೈಸ್ತ ಅಭಿವೃದ್ಧಿ ನಿಗಮ

ಸಿಎಂ ಸಿದ್ದರಾಮಯ್ಯ ಸೇಂಟ್ ಮೇರಿ ಬೆಸಿಲಿಕಾ ಚರ್ಚ್‌ಗೆ ಭೇಟಿ ನೀಡಿದ ವೇಳೆ ಮತ್ತೊಂದು ಸಿಹಿಸುದ್ದಿ ನೀಡಿದ್ದಾರೆ. ಕ್ರೈಸ್ತ ಅಭಿವೃದ್ಧಿ ನಿಗಮ ಸ್ಥಾಪನೆಯನ್ನು ನಾವು ಇದೇ ಬಜೆಟ್‌ನಲ್ಲೇ ಘೋಷಿಸಿದ್ದೇವೆ. ಇದಕ್ಕಾಗಿ ನೂರು ಕೋಟಿ ರೂಪಾಯಿಗಳನ್ನು ಮೀಸಲಿಟ್ಟು, ಆದಷ್ಟು ಬೇಗ ನಿಗಮ ಸ್ಥಾಪಿಸಿ ಅದಕ್ಕೆ ಅರ್ಹ ಅಧ್ಯಕ್ಷರನ್ನು ನೇಮಿಸಲಾಗುವುದು ಎಂದು ಸಿಎಂ ಇದೇ ವೇಳೆ ಭರವಸೆ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+