''Siddaramaiah: ಅಕ್ಟೋಬರ್‌ ಅಥವಾ ನವೆಂಬರ್‌ನಲ್ಲಿ ಸಿಎಂ ಬದಲಾವಣೆ ಗ್ಯಾರಂಟಿ''

ಬೆಂಗಳೂರು, ಜುಲೈ 02: ಕರ್ನಾಟಕ ಕಾಂಗ್ರೆಸ್ ಪಕ್ಷದಲ್ಲಿ ಮನೆಯೊಂದು ಮೂರು ಬಾಗಿಲು ಆಗಿದೆ. ಎಲ್ಲರೂ ರಾಜ್ಯದ ಮುಖ್ಯಮಂತ್ರಿ ಆಗಲು ಮುಂದಾಗಿದ್ದಾರೆ ಎಂದಿರುವ ಪ್ರತಿಪಕ್ಷ ನಾಯಕ ಆರ್‌.ಅಶೋಕ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ನಾಯಕತ್ವ ಬದಲಾವಣೆ ಕುರಿತು ಭವಿಷ್ಯ ನುಡಿದಿದ್ದಾರೆ. ಕಳೆದ ಒಂದು ವಾರದಿಂದ ನಡೆಯುತ್ತಿರುವ ಬೆಳವಣಿಗೆ ನೋಡಿದರೆ ಸರ್ಕಾರದಲ್ಲಿ ಸಾಕಷ್ಟು ಭಿನ್ನಾಭಿಪ್ರಾಯಗಳು ಎದ್ದು ಕಾಣುತ್ತಿವೆ.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯದಲ್ಲಿ ಇದೇ ವರ್ಷ ಅಕ್ಟೋಬರ್‌ ಅಥವಾ ನವೆಂಬರ್‌ನಲ್ಲಿ ಖಚಿತವಾಗಿ ಸಿಎಂ ಬದಲಾಗಲಿದ್ದಾರೆ. ಸಿಎಂ ಸ್ಥಾನ ಬದಲಾವಣೆ ಖಚಿತ. ಕಾಂಗ್ರೆಸ್‌ ಪಕ್ಷ ಮನೆಯೊಂದು ಮೂರು ಬಾಗಿಲು ಆಗಿದ್ದು, ಎಲ್ಲ ಶಾಸಕರು ಮುಖ್ಯಮಂತ್ರಿಯಾಗಲು ಹೊರಟಿದ್ದಾರೆ. ಸಿದ್ದರಾಮಯ್ಯನವರು ಸಿಎಂ ಆಗಿಯೇ ಇರುತ್ತಾರೆಂದು ಪಕ್ಷದ ವರಿಷ್ಠರು ಹೇಳಬೇಕು. ಆದರೆ ಭಯದಿಂದ ಸ್ವತಃ ಸಿದ್ದರಾಮಯ್ಯನವರೇ ಅದನ್ನು ಪದೇ ಪದೆ ಹೇಳುತ್ತಿದ್ದಾರೆ ಎಂದು ಲೇವಡಿ ಮಾಡಿದರು.

Karnataka CM Siddarmaiah Will Change in October or November 2025 for This Reason

ಅಧಿಕಾರವನ್ನು ಒದ್ದು ಕಿತ್ತುಕೊಳ್ಳುತ್ತೇನೆ ಎನ್ನುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರೇ ಈ ರೀತಿಯ ಸಂದೇಶ ನೀಡುತ್ತಿದ್ದಾರೆ. ಸರ್ಕಾರದಲ್ಲಿ ಹಣವಿಲ್ಲದೆ, ಅಭಿವೃದ್ಧಿ ಶೂನ್ಯವಾಗಿ ಶಾಸಕರು ಬೇಸರಗೊಂಡಿದ್ದಾರೆ. ಜನರಿಗೆ ವಿಶ್ವಾಸ ಹೊರಟುಹೋಗಿದೆ. 2028 ರವರೆಗೆ ಸಿದ್ದರಾಮಯ್ಯನವರೇ ಸಿಎಂ ಎಂದು ಡಿ.ಕೆ.ಶಿವಕುಮಾರ್‌ ಹೇಳಲಿ. ಅದನ್ನು ಆರನೇ ಗ್ಯಾರಂಟಿ ಎಂದು ಅಂದುಕೊಂಡು ಸುಮ್ಮನಾಗುತ್ತೇವೆ ಎಂದರು.

ವಿಶ್ವವಿದ್ಯಾಯಲಕ್ಕೆ ಮಾಜಿ ಪ್ರಧಾನಿ ಹೆಸರು ಸೂಕ್ತವಲ್ಲ

ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಮನಮೋಹನ್‌ ಸಿಂಗ್‌ ಹೆಸರು ಸೂಕ್ತವಲ್ಲ. ಜಿಲ್ಲೆಗಳ ಹೆಸರನ್ನು ಬದಲಿಸಿದಂತೆಯೇ ಏಕಾಏಕಿ ಹೆಸರು ಬದಲಿಸುತ್ತಿದ್ದಾರೆ. ಪೂರ್ವಿಕರು ಇಟ್ಟ ಹೆಸರನ್ನು ಹೀಗೆ ಬದಲಿಸಬಾರದು. ಬೆಂಗಳೂರನ್ನು ಈಗಾಗಲೇ ಒಡೆದುಹಾಕಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಬೆಂಗಳೂರನ್ನು ಒಂದಾಗಿಸಲಿದೆ. ಬೆಂಗಳೂರು ಅಭಿವೃದ್ಧಿ ಮಾಡುವುದು ಬಿಟ್ಟು, ನಾಮಫಲಕ ಬದಲಿಸುವುದರಿಂದ ಕೋಟ್ಯಂತರ ರೂಪಾಯಿ ವ್ಯರ್ಥವಾಗಲಿದೆ. ದಕ್ಷಿಣ, ಉತ್ತರ ಎಂದು ಹೆಸರು ನೀಡುವುದರಿಂದ ಅಭಿವೃದ್ಧಿ ಸಾಧ್ಯವಿಲ್ಲ ಎಂದರು.

ಜಾತಿ ಗಣತಿ ವರದಿ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯನವರಿಗೆ ಮುಖಭಂಗವಾಗಿದೆ. ಕೇಂದ್ರ ಸರ್ಕಾರ ಮಾಡುವಾಗ ಇವರು ಮತ್ತೆ ಗಣತಿ ಮಾಡಿದರೆ ಅದಕ್ಕೆ ಕಿಮ್ಮತ್ತಿನ ಬೆಲೆ ಇಲ್ಲ. ಗಣತಿ ಮಾಡಲು ರಾಜ್ಯ ಸರ್ಕಾರಕ್ಕೆ ಯಾವುದೇ ಅಧಿಕಾರವಿಲ್ಲ ಎಂದರು.

ಬಿಜೆಪಿ ಹೋರಾಟಕ್ಕೆ ಜಯ

ವಾಲ್ಮೀಕಿ ನಿಗಮದ ಹಗರಣವನ್ನು ಸಿಬಿಐಗೆ ನೀಡಿರುವುದರಿಂದ ಬಿಜೆಪಿಯ ಹೋರಾಟಕ್ಕೆ ಜಯ ಸಿಕ್ಕಿದೆ. ಕೋರ್ಟ್‌ ನಮಗೆ ನಿಜವಾದ ನ್ಯಾಯ ನೀಡಿದೆ. ಆರ್‌ಎಸ್‌ಎಸ್‌ ನಿಷೇಧ ಮಾಡಿದರೆ, ಮತ್ತೆ ಸಂಘಟನೆ ಪುಟಿದೇಳುತ್ತದೆ. ನಾನು, ಪ್ರಧಾನಿ ನರೇಂದ್ರ ಮೋದಿ, ಅನೇಕ ರಾಜ್ಯಗಳ ರಾಜ್ಯಪಾಲರು, ಹಲವಾರು ಸಂಸದರು, ಶಾಸಕರು ಆರ್‌ಎಸ್‌ಎಸ್‌ನಲ್ಲಿದ್ದಾರೆ. ಸಂಘಟನೆಯಲ್ಲಿ ಶಿಸ್ತನ್ನು ಕಲಿಸಲಾಗುತ್ತದೆ. ಆರ್‌ಎಸ್‌ಎಸ್‌ ಬಗ್ಗೆ ತಿಳಿದು ಮಾತನಾಡಬೇಕು. ಅದು ದೇಶಭಕ್ತ ಸಂಘಟನೆಯಾಗಿದ್ದು, ಅದರ ಬಗ್ಗೆ ಮಾತನಾಡುವಾಗ ಸ್ವಲ್ಪ ಅರಿವು ಇರಬೇಕು.

ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್‌ ಬರೆದ ಸಂವಿಧಾನದಲ್ಲಿ ಜಾತ್ಯತೀತ, ಸಮಾಜವಾದ ಪದ ಇಲ್ಲ. ಈ ಬಗ್ಗೆ ಕಾಂಗ್ರೆಸ್‌ ನಾಯಕರು ಉತ್ತರಿಸಲಿ. ಈ ಬಗ್ಗೆ ಸಂಸತ್ತಿನಲ್ಲಿ ಚರ್ಚೆಯಾಗಬೇಕಿದೆ. ಇವೆರಡೂ ಪದಗಳು ಸಂವಿಧಾನದ ಪುಸ್ತಕಕ್ಕೆ ಸೇರ್ಪಡೆಯಾಗುವಾಗ ಕೂಡ ಸಂಸತ್ತಿನಲ್ಲಿ ಚರ್ಚೆಯಾಗಿಲ್ಲ ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+