• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಲಾಕ್ ಡೌನ್: ಬಡವರಿಗೆ ಇಂದಿರಾ ಕ್ಯಾಂಟೀನ್ ನಲ್ಲಿ ಉಚಿತ ಊಟದ ವ್ಯವಸ್ಥೆ

|

ಬೆಂಗಳೂರು, ಮಾರ್ಚ್ 23: ಮಾರಣಾಂತಿಕ ಕೊರೊನಾ ವೈರಸ್ ಸೋಂಕು ಹರಡದಂತೆ ತಡೆಗಟ್ಟಲು ಕರ್ನಾಟಕ ಸರ್ಕಾರ ತುರ್ತು ಕ್ರಮಗಳನ್ನು ಕೈಗೊಂಡಿದ್ದು, ರಾಜ್ಯದ 9 ಜಿಲ್ಲೆಗಳನ್ನು ಲಾಕ್ ಡೌನ್ ಮಾಡಿದೆ. ಕೊರೊನಾ ಭೀತಿಯಿಂದಾಗಿ ಇಡೀ ರಾಜ್ಯವೇ ಸ್ತಬ್ಧವಾಗುವ ಸಾಧ್ಯತೆಯೂ ಇದೆ.

ಇದರಿಂದ ದಿನಗೂಲಿ ಕಾರ್ಮಿಕರು, ಬೀದಿಬದಿ ವ್ಯಾಪಾರಿಗಳು, ಬಡವರು ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಲಾಕ್ ಡೌನ್ ವೇಳೆ ಸಂಕಷ್ಟಕ್ಕೆ ಸಿಲುಕುವ ಬಡವರಿಗೆ ಉಚಿತ ಆಹಾರ ನೀಡಲು ಸರ್ಕಾರ ನಿರ್ಧರಿಸಿದೆ.

Lockdown ಸಂದರ್ಭದಲ್ಲಿ ಏನೇನು Open ಇರುತ್ತೆ?

ರಾಜ್ಯದ ಎಲ್ಲಾ ಇಂದಿರಾ ಕ್ಯಾಂಟೀನ್ ಗಳಲ್ಲಿ ಉಚಿತವಾಗಿ ಊಟ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶಿಸಿದ್ದಾರೆ.

''ಜೀವನೋಪಾಯಕ್ಕೆ ದೈನಂದಿನ ಆದಾಯದ ಮೇಲೆ ಅವಲಂಬಿತರಾಗಿರುವ ಜನರಿಗೆ ರಾಜ್ಯದ ಎಲ್ಲಾ ಇಂದಿರಾ ಕ್ಯಾಂಟೀನ್ ಗಳಲ್ಲಿ ಉಚಿತವಾಗಿ ಊಟದ ವ್ಯವಸ್ಥೆ ಮಾಡಲಾಗಿದೆ. ಇಡೀ ದಿನ ಆಹಾರ ಲಭ್ಯವಿರುತ್ತದೆ'' ಎಂದು ಸಿ.ಎಂ ಯಡಿಯೂರಪ್ಪ ತಿಳಿಸಿದ್ದಾರೆ.

ಕೋವಿಡ್19ಗಾಗಿ ಕ್ರಮ: ಫುಲ್ ಶಟ್ ಡೌನ್, 30 ಫೀವರ್ ಕ್ಲಿನಿಕ್ ಸ್ಥಾಪನೆ

ಲಾಕ್ ಡೌನ್ ವೇಳೆ ಹೋಟೆಲ್ ಗಳು ತೆರೆಯಬಹುದು. ಆದ್ರೆ ಹೋಟೆಲ್ ಗಳಲ್ಲಿ ಉಪಹಾರ ಸೇವಿಸಲು ಜನರಿಗೆ ಅವಕಾಶವಿಲ್ಲ. ಪಾರ್ಸೆಲ್ ತೆಗೆದುಕೊಂಡ ಮನೆಗೆ ಹೋಗಿ ತಿನ್ನಬೇಕು. ಇತ್ತ ಇಂದಿರಾ ಕ್ಯಾಂಟೀನ್ ಗಳಲ್ಲಿ ಮಾತ್ರ ಅಲ್ಲೇ ಸೇವಿಸಲು ಅವಕಾಶ ಕಲ್ಪಿಸಲಾಗಿದೆ.

English summary
Coronavirus Scare: Amidst Lock Down Free food will be provided for poor in Indira Canteen.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X