ದೆಹಲಿಯಲ್ಲಿ ಯಡಿಯೂರಪ್ಪ; ಸಂಪುಟ ವಿಸ್ತರಣೆಗೆ ನಾಳೆ ಬಾ!
Recommended Video
ನವದೆಹಲಿ, ಜನವರಿ 30 : ನವದೆಹಲಿ ಪ್ರವಾಸದಲ್ಲಿರುವ ಕರ್ನಾಟಕದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಬಿಜೆಪಿ ಅಧ್ಯಕ್ಷ ಜೆ. ಪಿ. ನಡ್ಡಾ ಭೇಟಿ ಮಾಡಿದರು. ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲು ಯಡಿಯೂರಪ್ಪ ದೆಹಲಿಯಲ್ಲಿದ್ದಾರೆ.
ಗುರುವಾರ ರಾತ್ರಿ ಬಿಜೆಪಿ ಅಧ್ಯಕ್ಷ ಜೆ. ಪಿ. ನಡ್ಡಾರನ್ನು ಯಡಿಯೂರಪ್ಪ ಭೇಟಿ ಮಾಡಿದರು. ದೆಹಲಿ ಚುನಾವಣಾ ಪ್ರಚಾರ ಮುಗಿಸಿ ಬಂದ ಬಳಿಕ ಭೇಟಿ ಮಾಡಿ, ಶುಭಾಶಯ ಕೋರಿದರು. ಜೆ. ಪಿ. ನಡ್ಡಾ ಅಧ್ಯಕ್ಷರಾದ ಬಳಿಕ ಮೊದಲ ಬಾರಿ ಭೇಟಿಯಾದರು.
ಕೇವಲ 15 ನಿಮಿಷಗಳ ಕಾಲ ಯಡಿಯೂರಪ್ಪ ಜೆ. ಪಿ. ನಡ್ಡಾ ಜೊತೆ ಮಾತುಕತೆ ನಡೆಸಿದರು. ಸಂಪುಟ ವಿಸ್ತರಣೆ ಬಗ್ಗೆ ಅಮಿತ್ ಜೊತೆ ಚರ್ಚೆ ನಡೆಸುವಂತೆ ಜೆ. ಪಿ. ನಡ್ಡಾ ಸೂಚನೆ ನೀಡಿದರು. ಆದ್ದರಿಂದ, ಸಭೆ ಬಳಿಕ ಅಮಿತ್ ಶಾ ನಿವಾಸಕ್ಕೆ ತೆರಳಿದರು.

ಜೆ. ಪಿ. ನಡ್ಡಾ ನಿವಾಸದಿಂದ ಯಡಿಯೂರಪ್ಪ ಕೇಂದ್ರ ಗೃಹ ಸಚಿವ ಅಮಿತ್ ಶಾ ನಿವಾಸಕ್ಕೆ ತೆರಳಿದರು. ಅಮಿತ್ ಶಾ ಕೇವಲ 10 ನಿಮಿಷ ಮಾತುಕತೆ ನಡೆಸಿದರು. ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲು ಶುಕ್ರವಾರ ಬೆಳಗ್ಗೆ 9.30ಕ್ಕೆ ಆಗಮಿಸುವಂತೆ ಸೂಚಿಸಿದರು.
ಅಮಿತ್ ಶಾ ಭೇಟಿ ಬಳಿಕ ಮಾತನಾಡಿದ ಯಡಿಯೂರಪ್ಪ, "ಅಮಿತ್ ಶಾ ಮತ್ತು ಜೆ. ಪಿ. ನಡ್ಡಾ ಭೇಟಿ ಮಾಡಿದ್ದೇನೆ. ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲು ಶುಕ್ರವಾರ ಬೆಳಗ್ಗೆ 9.30ಕ್ಕೆ ಬರುವಂತೆ ಅಮಿತ್ ಶಾ ಸೂಚಿಸಿದ್ದಾರೆ" ಎಂದರು.
ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಲು ಯಡಿಯೂರಪ್ಪ ಗುರುವಾರ ಮಧ್ಯಾಹ್ನ ದೆಹಲಿಗೆ ತೆರಳಿದ್ದರು. ಅಮಿತ್ ಶಾ ಮತ್ತು ಜೆ. ಪಿ. ನಡ್ಡಾ ದೆಹಲಿ ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದ ಕಾರಣ ರಾತ್ರಿ ಉಭಯ ನಾಯಕರನ್ನು ಭೇಟಿಯಾದರು.
ಯಡಿಯೂರಪ್ಪ ಸಂಪುಟದಲ್ಲಿ 16 ಸಚಿವ ಸ್ಥಾನಗಳು ಖಾಲಿ ಇವೆ. ಉಪ ಚುನಾವಣೆಯಲ್ಲಿ ಗೆದ್ದ 11 ಶಾಸಕರು, ಮೂಲ ಬಿಜೆಪಿ ಶಾಸಕರು ಸೇರಿ ಎರಡು ಡಜನ್‌ಗೂ ಅಧಿಕ ಶಾಸಕರು ಸಂಪುಟ ಸೇರಲು ಪ್ರಯತ್ನ ನಡೆಸುತ್ತಿದ್ದಾರೆ.
ಶುಕ್ರವಾರ ಅಮಿತ್ ಶಾ ಜೊತೆ ಚರ್ಚೆ ನಡೆಸಿದ ಬಳಿಕ ಸಂಪುಟ ಸೇರುವ ಶಾಸಕರ ಪಟ್ಟಿ ಅಂತಿಮಗೊಳ್ಳುವ ನಿರೀಕ್ಷೆ ಇದೆ. ಹೈಕಮಾಂಡ್ ಯಾವ ನಾಯಕರಿಗೆ ಸಂಪುಟ ಸೇರಲು ಹಸಿರು ನಿಶಾನೆ ತೋರಿಸಲಿದೆ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.












Click it and Unblock the Notifications