Weather: ಎಲ್ಕೆಜಿ-ಪಿಯುಸಿ ತರಗತಿ ಬೆಳಗ್ಗೆ 9.30ಕ್ಕೆ ಆರಂಭಿಸಲು ಮನವಿ: ಮಕ್ಕಳ ರಕ್ಷಣಾ ಆಯೋಗ
ಬೆಂಗಳೂರು, ಡಿಸೆಂಬರ್ 17: ರಾಜ್ಯಾದ್ಯಂತ ಒಳನಾಡು ಜಿಲ್ಲೆಗಳಲ್ಲಿ ಅತ್ಯಧಿಕ ಚಳಿ ದಾಖಲಾತಿ ಮುಂದುವರಿದಿದೆ. ಒಂದು ವಾರದಿಂದ ದಟ್ಟ ಮಂಜಿನ ವಾತಾವರಣ ಅನುಭವಿಸುತ್ತಿರುವ ಜನರು ಮೈಕೊರೆವ ಚಳಿಗೆ ನಡುಗಿದ್ದಾರೆ. ದೊಡ್ಡವರಿಗೇ ಚಳಿ ತಡೆದುಕೊಳ್ಳಲು ಕಷ್ಟವಾಗುತ್ತಿದ್ದು, ಮಕ್ಕಳು ಚಳಿ ಸಂಕಷ್ಟ ಹೇಳತೀರದಾಗಿದೆ. ಈ ಕಾರಣದಿಂದ ರಾಜ್ಯದಲ್ಲಿ ಎಲ್ಕೆಜಿಯಿಂದ ಪಿಯುಸಿವರೆಗಿನ ತರಗತಿಗಳ ಸಮಯ ಬದಲಾವಣೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ಬರೆಯಲಾಗಿದೆ.
ರಾಜ್ಯದಲ್ಲಿ ಕನಿಷ್ಠ ತಾಪಮಾನ ಕುಸಿಯುತ್ತಿದೆ. ಈ ಹಿನ್ನೆಲೆಯಲ್ಲಿ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಅಗತ್ಯ ಕ್ರಮಗಳನ್ನು ಸರ್ಕಾರ ಕೈಗೊಳ್ಳಬೇಕು ಎಂದು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ ಅವರು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಬೆಳಗ್ಗೆ 9.30ಕ್ಕೆ ತರಗತಿ ಆರಂಭಕ್ಕೆ ಒತ್ತಾಯ
ಎಲ್ಕೆಜಿಯಿಂದ ಪಿಯುಸಿವರೆಗಿನ ಶಾಲಾ ಮಕ್ಕಳ ತರಗತಿಗಳನ್ನು ಬೆಳಗ್ಗೆ 9.30 ಗಂಟೆಯಿಂದ ಆರಂಭಿಸುವಂತೆ ಶಶಿಧರ್ ಕೋಸಂಬೆ ಅವರು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಬರೆದ ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ. ಚಳಿಗಾಲ ಮುಗಿಯುವವರೆಗೂ ಪ್ರತಿದಿನ 9.30 ಗಂಟೆ ತರಗತಿಗಳನ್ನು ಆರಂಭಿಸಬೇಕು. ಇಲ್ಲವಾದರೆ ಮಕ್ಕಳು ಈಗಿನ ಚಳಿಯಿಂದಾಗಿ ಅನಾರೋಗ್ಯಕ್ಕೆ ತುತ್ತಾಗುವ ಸಾಧ್ಯತೆ ಇದೆ. ಅದನ್ನು ತಪ್ಪಿಸಲು ತಡವಾಗಿ ತರಗತಿ ಆರಂಭಿಸಲು ಕ್ರಮ ಕೈಗೊಳ್ಳುವ ಅಗತ್ಯತೆ ಇದೆ ಎಂದು ಅವರು ತಿಳಿಸಿದ್ದಾರೆ.
ಕನಿಷ್ಠ ತಾಪಮಾನ 3-5 ಡಿ.ಸೆ ಕುಸಿತ, ಚಳಿ ಏರಿಕೆ
ಕರ್ನಾಟಕದ ಸುಮಾರು 14ಕ್ಕೂ ಅಧಿಕ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನದಲ್ಲಿ ಇಳಿಕೆ ಆಗಿದೆ. ಅದರಲ್ಲೂ ಉತ್ತರ ಕರ್ನಾಟಕದ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 3-5ಡಿಗ್ರಿ ಸೆಲ್ಸಿಯಸ್ ನಷ್ಟು ಕುಸಿದಿದೆ. ಇಲ್ಲಿ ದಟ್ಟ ಮಂಜು, ತೀವ್ರ ಚಳಿ ವಾತಾವರಣ ಮುಂದುವರಿದಿದೆ. ಹಗಲು ಹೊತ್ತು ಇದೇ ಭಾಗಗಳಲ್ಲಿ ನಿರೀಕ್ಷಿತ ಗರಿಷ್ಠ ತಾಪಮಾನ ದಾಖಲಾಗುವ ಮೂಲಕ ಒಣಹವೆ ಸೃಷ್ಟಿಯಾಗಿದೆ. ಉತ್ತರ ಒಳನಾಡಿನಲ್ಲಿ ಬೆಳಗ್ಗೆ ಚಳಿಯಲ್ಲಿಯೇ ಸಣ್ಣ ಸಣ್ಣ ಮಕ್ಕಳು ಶಾಲೆಗೆ ಹೋಗುವ ಅನಿವಾರ್ಯತೆ ಇದೆ ಎಂಬ ಕಳವಳ ವ್ಯಕ್ತವಾಗಿದೆ.
ರಾಜ್ಯದ ತೀವ್ರ ಚಳಿಯ ಜಿಲ್ಲೆಗಳು
ಕಳೆದ 24 ಗಂಟೆಗಳಲ್ಲಿ ಬೀದರ್ನಲ್ಲಿ ಕನಿಷ್ಠ ತಾಪಮಾನ 10.8 ಡಿಗ್ರಿ ಸೆಲ್ಸಿಯಸ್, ಹಾಸನದಲ್ಲಿ 10 ಡಿಗ್ರಿ ಸೆಲ್ಸಿಯಸ್, ವಿಜಯಪುರ 12.6 ಡಿಗ್ರಿ ಸೆಲ್ಸಿಯಸ್, ಹಾವೇರಿ 12 ಡಿಗ್ರಿ ಸೆಲ್ಸಿಯಸ್, ಚಿಂತಾಮಣಿ 12.6 ಡಿಗ್ರಿ ಸೆಲ್ಸಿಯಸ್, ಧಾರವಾಡ 14.3 ಡಿಗ್ರಿ ಸೆಲ್ಸಿಯಸ್, ಗದಗ 15 ಡಿಗ್ರಿ ಸೆಲ್ಸಿಯಸ್, ಡಿಗ್ರಿ ರಾಯಚೂರು 15 ಡಿಗ್ರಿ ಸೆಲ್ಸಿಯಸ್, ಕಲಬುರಗಿ16, ಡಿಗ್ರಿ ಸೆಲ್ಸಿಯಸ್ ಕಲಬುರಗಿ 16, ಬೆಳಗಾವಿ ಏರ್ಪೋರ್ಟ್ 17 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ.
ಉತ್ತರ ಕರ್ನಾಟಕಕ್ಕೆ ಹೋಲಿಕೆ ಮಾಡಿದರೆ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅಷ್ಟಾಗಿ ಚಳಿ ಇಲ್ಲ, ಕಡಿಮೆ ಇದೆ. ಒಟ್ಟಾರೆ ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಚಳಿ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆ ಇದೆ. ಇದೆಲ್ಲ ಗಮನದಲ್ಲಿಟ್ಟುಕೊಂಡು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ












Click it and Unblock the Notifications