ತರಗತಿಯಲ್ಲಿ ಹಿಜಬ್ ಧರಿಸಲು ಅನುಮತಿ: ವಿದ್ಯಾರ್ಥಿಗಳಿಂದ ಪ್ರೊಟೆಸ್ಟ್
ಚಿಕ್ಕಮಗಳೂರು ಜನವರಿ 5: ಮೂರು ವರ್ಷದ ಹಿಂದೆ ಹಿಜಬ್ ವಿರುದ್ಧ ಧ್ವನಿ ಎತ್ತಿದ್ದ ಕರ್ನಾಟಕದ ಕೊಪ್ಪದಲ್ಲಿರುವ ಸರ್ಕಾರಿ ಪದವಿ ಕಾಲೇಜು ವಿದ್ಯಾರ್ಥಿಗಳು ಮತ್ತದೇ ವಿಚಾರವನ್ನು ಪ್ರಸ್ತಾಪಿಸಿ ಪ್ರತಿಭಟನೆ ನಡೆಸಿದ್ದಾರೆ. ಮುಸ್ಲಿಂ ಮಹಿಳೆಯರು ಹಿಜಬ್ ಧರಿಸುವುದನ್ನು ವಿರೋಧಿಸಿ ಕೆಲವು ವಿದ್ಯಾರ್ಥಿಗಳು ಕೇಸರಿ ಬಣ್ಣದ ಶಾಲು ಧರಿಸಿ ಪ್ರತಿಭಟನೆ ನಡೆಸಿದ್ದಾರೆ. ಸದ್ಯ ಇದು ಆಡಳಿತ ಮಂಡಳಿಯನ್ನು ಇಕ್ಕಟ್ಟಿಗೆ ಸಿಲುಕಿಸಿದೆ.
ಕರ್ನಾಟಕದ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿರುವ ಬಾಳಗಡಿ ಗ್ರಾಮದ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಲು ಅನುಮತಿ ಕೋರಿದ್ದಾರೆ. ವಿದ್ಯಾರ್ಥಿಗಳು ಪ್ರತಿಭಟನೆಯ ನಂತರ ಪ್ರಾಂಶುಪಾಲರು ಜನವರಿ 10 ರವರೆಗೆ ಡ್ರೆಸ್ ಕೋಡ್ ಅನ್ನು ಅಮಾನತುಗೊಳಿಸಿದ್ದಾರೆ. ವಿದ್ಯಾರ್ಥಿಗಳ ಡ್ರೆಸ್ ಕೋಡ್ ಬಗ್ಗೆ ನಿರ್ಧರಿಸಲು ಜನವರಿ 10 ರಂದು ಪೋಷಕರ ಸಭೆಗೆ ಹಾಜರಾಗುವಂತೆ ಪ್ರಾಂಶುಪಾಲ, ಪ್ರೊಫೆಸರ್ ಎಸ್ ಅನಂತ ತಿಳಿಸಿದ್ದಾರೆ.
ಕೊಪ್ಪ ತಾಲೂಕಿನ ಬಾಳಗಡಿಯ ಕಾಲೇಜು ಅಧಿಕಾರಿಗಳು ತರಗತಿಯಲ್ಲಿ ಹೊರತುಪಡಿಸಿ ಕ್ಯಾಂಪಸ್‌ನಲ್ಲಿ ಎಲ್ಲಿ ಬೇಕಾದರೂ ಹಿಜಬ್ ಧರಿಸಬಹುದು ಎಂದು ಸ್ಪಷ್ಟಪಡಿಸಿದ್ದಾರೆ. ಅದಾಗ್ಯೂ ಮುಸ್ಲಿಂ ಹುಡುಗಿಯರು ತರಗತಿಯಲ್ಲಿ ಹಿಜಬ್ ಧರಿಸಲು ಅನುಮತಿಸಿರುವುದರಿಂದ ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗುವಾಗ ಕೇಸರಿ ಶಾಲುಗಳನ್ನು ಧರಿಸಲು ಅನುಮತಿ ನೀಡಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ. ಕಾಲೇಜಿನಲ್ಲಿ 850 ವಿದ್ಯಾರ್ಥಿಗಳು ಇದ್ದಾರೆ. ಇದರಲ್ಲಿ ಸುಮಾರು 50 ವಿದ್ಯಾರ್ಥಿಗಳ ಗುಂಪು ಜನವರಿ 4 ರಂದು ಪ್ರತಿಭಟನೆ ನಡೆಸಿದೆ.

ಹೀಗಾಗಿ ಪ್ರಾಂಶುಪಾಲ ಅನಂತ್ ಅವರು ಜನವರಿ 10 ರಂದು ಪೋಷಕರ ಸಭೆ ಕರೆದಿದ್ದು ಅಲ್ಲಿವರೆಗೂ ಡ್ರೆಸ್ ಕೋಡ್ ಅನ್ನು ಅಮಾನತುಗೊಳಿಸಿದ್ದಾರೆ. ಜನವರಿ 10 ರವರೆಗೆ ಅವರು ಏನು ಬೇಕಾದರೂ ಧರಿಸಲಿ. ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರೂ ಆದ ಶಾಸಕ ಟಿ.ಡಿ.ರಾಜೇಗೌಡ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಸುತ್ತೇವೆ. ಸಭೆಗೆ ಪಾಲಕರು ಹಾಗೂ ಜನಪ್ರತಿನಿಧಿಗಳನ್ನು ಆಹ್ವಾನಿಸಿದ್ದೇವೆ' ಎಂದು ಅವರು ತಿಳಿಸಿದರು.

ಇದಲ್ಲದೆ, ಕಾಲೇಜು ಆಡಳಿತವು ಮುಸ್ಲಿಂ ಮಹಿಳೆಯರಿಗೆ ಕ್ಯಾಂಪಸ್‌ನಲ್ಲಿ ಹಿಜಬ್ ಧರಿಸದಂತೆ ಪದೇ ಪದೇ ಕೇಳಿಕೊಂಡಿದ್ದರೂ ಅವರು ನಿರಾಕರಿಸಿದರು ಎಂದು ಅವರು ಹೇಳಿದ್ದಾರೆ. ಹೀಗಾಗಿ ಸಮಸ್ಯೆ ಬಗೆಹರಿಸದಿದ್ದರೆ ಮುಂದಿನ ದಿನಗಳಲ್ಲಿ ಪ್ರತಿಭಟನೆಯನ್ನು ತೀವ್ರಗೊಳಿಸುವುದಾಗಿ ವಿದ್ಯಾರ್ಥಿಗಳು ಎಚ್ಚರಿಸಿದ್ದಾರೆ.












Click it and Unblock the Notifications