ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ: ಪ್ರಾಧ್ಯಾಪಕರ ವರ್ಗ ಶುರು, ಜು.16ಕ್ಕೆ ತಾತ್ಕಾಲಿಕ ಪಟ್ಟಿ ಬಿಡುಗಡೆ

|
Google Oneindia Kannada News

ಬೆಂಗಳೂರು, ಜುಲೈ 15: ಕಾಲೇಜು ಶಿಕ್ಷಣ ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಾಧ್ಯಾಪಕರ ವರ್ಗಾವಣೆ ಪ್ರಕ್ರಿಯೆ ಆರಂಭಿಸಲಾಗಿದ್ದು, ಜು.16ಕ್ಕೆ ಸಾಮಾನ್ಯ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿ ಪ್ರಕಟವಾಗಲಿದ್ದು, ಜು.27ರಿಂದ 3 ದಿನಗಳ ಕಾಲ ಸಾಮಾನ್ಯ ಕೌನ್ಸೆಲಿಂಗ್ ನಡೆಯಲಿದೆ ಎಂದು ಉಪ ಮುಖ್ಯಮಂತ್ರಿ ಡಾ. ಸಿಎನ್ ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ವರ್ಗಾವಣೆ ಕೋರಿ ಅರ್ಜಿ ಸಲ್ಲಿಸಲು ಜು.14 ಕೊನೆಯ ದಿನವಾಗಿತ್ತು, ಜು.16ರಂದು ಆದ್ಯತಾ ಪಟ್ಟಿ ಪ್ರಕಟಿಸಲಾಗುವುದು, ಜು.20ರಂದು ವಿಶೇಷ ಪ್ರಕಟಣಗಳ ಆದ್ಯತಾ ಪಟ್ಟಿ ಪ್ರಕಟವಾಗಲಿದೆ.

ರಾಜ್ಯದಲ್ಲಿ ಇಂದಿನಿಂದ ದ್ವಿತೀಯು ಪಿಯುಗೆ ಆನ್‌ಲೈನ್ ತರಗತಿ ಶುರುರಾಜ್ಯದಲ್ಲಿ ಇಂದಿನಿಂದ ದ್ವಿತೀಯು ಪಿಯುಗೆ ಆನ್‌ಲೈನ್ ತರಗತಿ ಶುರು

ಜು.22ರಂದು ವಿಶೇಷ ಪ್ರಕರಣಗಳ ವರ್ಗಾವಣೆ ಕೌನ್ಸೆಲಿಂಗ್ ಹಾಗೂ 27 ರಿಂದ 29ರವರೆಗೆ ಸಾಮಾನ್ಯ ಅಭ್ಯರ್ಥಿಗಳ ಕೌನ್ಸೆಲಿಂಗ್ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.

Karnataka College Teachers Transfer Procedure To Starts From July 16; Details And Guidelines

ಬೆಂಗಳೂರು ಮಹಾನಗರ ವ್ಯಾಪ್ತಿಯನ್ನು ವಲಯ ಎ ಎಂದು, ಇತರೆ ಎಲ್ಲಾ ಮಹಾನಗರ ಪಾಲಿಕೆಗಳನ್ನು ಹೊಂದಿರುವ ನಗರಗಳ ವ್ಯಾಪ್ತಿಯನ್ನು( ಮೈಸೂರು, ಮಂಗಳೂರು, ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ವಿಜಯಪುರ, ಕಲಬುರಗಿ, ಬಲ್ಳಾರಿ, ದಾವಣಗೆರೆ, ಶಿವಮೊಗ್ಗ ಮತ್ತು ತುಮಕೂರು)- ವಲಯ ಬಿ, ಜಿಲ್ಲಾ ಕೇಂದ್ರಗಳು ಹಾಗೂ ನಗರಸಭೆಗಳನ್ನು ಹೊಂದಿರುವ ನಗರಗಳು ವಲಯ ಸಿ, ಎಲ್ಲ ತಾಲೂಕು ಕೇಂದ್ರಗಳು ಹಾಗೂ ಪುರಸಭೆಯನ್ನು ಹೊಂದಿರುವ ನಗರಗಳು ವಲಯ ಡಿ ಹಾಗೂ ಉಳಿದ ಎಲ್ಲಾ ಪ್ರದೇಶಗಳು ವಲಯ ಇ ಎಂದು ವಿಂಗಡಿಸಲಾಗಿದೆ.

Recommended Video

ಇಂಗ್ಲೆಂಡ್ ಟೂರ್ ಯಿಂದ ರಿಷಬ್ ಹೊರಗುಳಿತಾರ ! | Oneindia Kannada

ಪ್ರಸ್ತುತ ರೂಪಿಸಿರುವ ನಿಯಮಗಳಲ್ಲಿ ಬೋಧಕರ ಕಡ್ಡಾಯ ವರ್ಗಾವಣೆ ಪ್ರಮುಖ ಅಂಶವಾಗಿದೆ. ಒಟ್ಟು ಬೋಧಕ ಹುದ್ದೆಗಳ ಪೈಕಿ ಶೇ.15ರಷ್ಟು ವರ್ಗಾವಣೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದ್ದಾರೆ.

English summary
Karnataka College Teachers Transfer Procedure to Starts from July 16; Details and Guidelines in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X