ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜುಲೈ 26ರಿಂದ ಕಾಲೇಜುಗಳು ಶುರು: ಲಸಿಕೆ ಪಡೆದವರಿಗೆ ಮಾತ್ರ ಪ್ರವೇಶ

|
Google Oneindia Kannada News

ಬೆಂಗಳೂರು, ಜುಲೈ 22: ರಾಜ್ಯದಲ್ಲಿ ಜುಲೈ 26ರಿಂದ ಕಾಲೇಜುಗಳು ಶುರುವಾಗಲಿದ್ದು, ಲಸಿಕೆ ಪಡೆದ ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ಎಂದು ಸರ್ಕಾರ ಹೇಳಿದೆ.

ಈ ಕುರಿತು ರಾಜ್ಯ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಚಿವರ ಜತೆ ಸಭೆ ನಡೆಸಿ ನಿರ್ಧಾರ ಕೈಗೊಂಡಿದ್ದಾರೆ.

ರಾಜ್ಯದಲ್ಲಿ ಕೇವಲ 4 ತಿಂಗಳಲ್ಲಿ 1.88 ಲಕ್ಷ ಮಕ್ಕಳಿಗೆ ಕೊರೊನಾ ಸೋಂಕುರಾಜ್ಯದಲ್ಲಿ ಕೇವಲ 4 ತಿಂಗಳಲ್ಲಿ 1.88 ಲಕ್ಷ ಮಕ್ಕಳಿಗೆ ಕೊರೊನಾ ಸೋಂಕು

ಶೇ.65 ವಿದ್ಯಾರ್ಥಿಗಳು ಲಸಿಕೆ ಪಡೆದಿದ್ದಾರೆ: ಉಪಮುಖ್ಯಮಂತ್ರಿ ಡಾ. ಸಿ.ಎನ್ ಅಶ್ವತ್ಥ ನಾರಾಯಣ ಜುಲೈ 16ರಂದು ನೀಡಿರುವ ಮಾಹಿತಿ ಪ್ರಕಾರ ಈಗಾಗಲೇ ರಾಜ್ಯದಲ್ಲಿ ಶೇ.65 ರಷ್ಟು ಮಂದಿ ಲಸಿಕೆ ಪಡೆದಿದ್ದಾರೆ.ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳು ಲಸಿಕೆಗಳನ್ನು ನೀಡಿವೆ ಎಂದಿದ್ದಾರೆ.

Karnataka Colleges To Reopen From July 26, Only Vaccinated Students To Be Allowed Entry

ಈಗಾಗಲೇ ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ಕಾರ್ಯಕ್ರಮ ವೇಗವಾಗಿ ಸಾಗುತ್ತಿದೆ. ಸರ್ಕಾರಿ ಮತ್ತು ಅನುದಾನಿತ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ 18 ವರ್ಷಕ್ಕೂ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತಿದೆ. ಜತೆಗೆ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೂ ಕೂಡ ಲಸಿಕೆ ನೀಡಲಾಗುತ್ತಿದೆ ಎಂದು ತಿಳಿಸಿದರು.

ಲಭ್ಯವಿರುವ, ಲಭ್ಯವಾಗುತ್ತಿರುವ ಲಸಿಕೆಯನ್ನು ನ್ಯಾಯೋಚಿತವಾಗಿ ಎಲ್ಲರಿಗೂ ಹಂಚಲಾಗುತ್ತಿದೆ., ಭೌತಿಕವಾಗಿ ಹಾಜರಾಗುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಮೊದಲ ಡೋಸ್ ಲಸಿಕೆ ಪಡೆದಿರಲೇಬೇಕು ಎಂದರು.

Recommended Video

ಕೊರೋನ ಸಂದರ್ಭದಲ್ಲಿ ರ್ಯಾಲಿ ಮತ್ತು ಪ್ರತಿಭಟನೆ ಬೇಕಾ!! | Oneindia Kannada

ಕೋವಿಡ್ ಹಿನ್ನೆಲೆಯಲ್ಲಿ ಉತ್ತನ ಶಿಕ್ಷಣ ಇಲಾಖೆಯಲ್ಲಿ ಹಲವು ಸುಧಾರಣೆಗಳನ್ನು ಜಾರಿಗೆ ತರಲಾಗಿದೆ. ನಗರ ಮತ್ತು ಗ್ರಾಮೀಣ ವಿದ್ಯಾರ್ಥಿಗಳ ನಡುವೆ ಡಿಜಿಟಲ್ ಅಂತರ ಅಳಿಸಿ ಹಾಕುವ ಉದ್ದೇಶದಿಂದ ಕಲಿಕಾ ನಿರ್ವಹಣಾ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಅದನ್ನು ಕಲಿಯಲು ಲ್ಯಾಪ್‌ಟಾಪ್ ಮತ್ತು ಟ್ಯಾಬ್ಲೆಟ್ ಪಿಸಿಗಳನ್ನು ವಿದ್ಯಾರ್ಥಿಗಳಿಗೆ ನೀಡಲಾಗುವುದು ಎಂದು ಅಶ್ವತ್ಥನಾರಾಯಣ ತಿಳಿಸಿದರು.

English summary
Karnataka colleges will be reopening from July 26 and only those who are vaccinated will be allowed to attend, the state government has decided. The government is yet to released detailed SOPs and guidelines on the matter. Higher educational institutions will be reopening partially or fully, keeping in place the Covid-19 safety norms.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X