ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪದವಿ, ಸ್ನಾತಕೋತ್ತರ ಕೋರ್ಸ್: ಇಡೀ ರಾಜ್ಯಕ್ಕೆ ಒಂದೇ ಟೈಮ್‌ಟೇಬಲ್

|
Google Oneindia Kannada News

ಬೆಂಗಳೂರು, ಜೂ.9: ರಾಜ್ಯದಲ್ಲಿ 2022-23ನೇ ಶೈಕ್ಷಣಿಕ ವರ್ಷಕ್ಕೆ ಸಂಬಂಧಿಸಿದಂತೆ ಪದವಿ ಮತ್ತು ಸ್ನಾತಕೋತ್ತರ ಕೋರ್ಸುಗಳಿಗೆ ಇಡೀ ರಾಜ್ಯಕ್ಕೆ ಅನ್ವಯಿಸುವ ಹಾಗೆ ಏಕರೂಪದ ವೇಳಾಪಟ್ಟಿಯನ್ನು ಇದೇ ಮೊದಲ ಬಾರಿಗೆ ಸಿದ್ಧಪಡಿಸಲಾಗಿದೆ.

ಇದುವರೆಗೂ ರಾಜ್ಯದಲ್ಲಿ ಒಂದೊಂದು ವಿ.ವಿ.ಯೂ ತಮ್ಮ ಅನುಕೂಲಕ್ಕೆ ತಕ್ಕಂತೆ ಶೈಕ್ಷಣಿಕ ವೇಳಾಪಟ್ಟಿ ರೂಪಿಸಿ ಕೊಳ್ಳುತ್ತಿದ್ದವು. ಇದರಿಂದಾಗಿ ವಿದ್ಯಾರ್ಥಿಗಳಿಗೆ ಗೊಂದಲ ಮತ್ತು ಅನನುಕೂಲ ಆಗುತ್ತಿತ್ತು. ಇದನ್ನು ಗಮನಿಸಿ ಈ ಏಕರೂಪದ ವೇಳಾಪಟ್ಟಿಯನ್ನು ತರಲಾಗಿದೆ.

ರಾಜಕೀಯ ಲಾಭಕ್ಕಾಗಿ ವೈದ್ಯಕೀಯ ಕಾಲೇಜು ನಿರ್ಮಿಸಿಲ್ಲ: ಸಚಿವ ಡಾ.ಕೆ.ಸುಧಾಕರ್ರಾಜಕೀಯ ಲಾಭಕ್ಕಾಗಿ ವೈದ್ಯಕೀಯ ಕಾಲೇಜು ನಿರ್ಮಿಸಿಲ್ಲ: ಸಚಿವ ಡಾ.ಕೆ.ಸುಧಾಕರ್

"ರಾಜ್ಯದ ಎಲ್ಲಾ ವಿ.ವಿ.ಗಳು ಮತ್ತು ಕಾಲೇಜುಗಳು ಏಕರೂಪದ ವೇಳಾಪಟ್ಟಿಯನ್ನು ಈ ವರ್ಷದಿಂದಲೇ ಜಾರಿಗೆ ತರಬೆಕು. ಇದನ್ನು ಕಡ್ಡಾಯವಾಗಿ ಪಾಲಿಸಬೇಕು," ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ತಿಳಿಸಿದ್ದಾರೆ.

Karnataka: Common calendar of events for all universities and colleges

ಜುಲೈ 11ರಿಂದ ಪ್ರವೇಶಾತಿ:

ಶನಿವಾರ ಈ ಬಗ್ಗೆ ಮಾತನಾಡಿರುವ ಅವರು, ಈ ಏಕರೂಪದ ಕಾರ್ಯಕ್ರಮ ಪಟ್ಟಿಯಂತೆ, ರಾಜ್ಯದ ಉದ್ದಗಲಕ್ಕೂ ಪದವಿ ತರಗತಿಗಳಿಗೆ ಜುಲೈ 11ರಿಂದ ಪ್ರವೇಶಾತಿ ಆರಂಭವಾಗಲಿದ್ದು, ಆಗಸ್ಟ್ 17ರಿಂದ 22ರ ನಡುವೆ ತರಗತಿಗಳು ಆರಂಭವಾಗಲಿವೆ. ಇದೇ ರೀತಿಯಲ್ಲಿ, ಸ್ನಾತಕೋತ್ತರ ಕೋರ್ಸುಗಳಿಗೆ ಅಕ್ಟೋಬರ್ 15ರಿಂದ ಪ್ರವೇಶ ಪ್ರಕ್ರಿಯೆ ಆರಂಭವಾಗಲಿದ್ದು, ನವೆಂಬರ್ 2ರಿಂದ 14ರ ನಡುವೆ ತರಗತಿಗಳಿಗೆ ಚಾಲನೆ ಸಿಗಲಿದೆ ಎಂದಿದ್ದಾರೆ.

ಈ ವೇಳಾಪಟ್ಟಿಯಲ್ಲಿ ಪ್ರತೀ ಸೆಮಿಸ್ಟರುಗಳ ಆರಂಭ, ದಂಡರಹಿತ ಮತ್ತು ದಂಡ ಸಹಿತ ಪ್ರವೇಶಾತಿ ಅವಧಿ, ಪ್ರತಿ ಸೆಮಿಸ್ಟರುಗಳಿಗೆ ಬೋಧನಾ ತರಗತಿಗಳು ಆರಂಭವಾಗುವ ಮತ್ತು ಮುಗಿಯುವ ದಿನ, ಪರೀಕ್ಷೆ ಆರಂಭವಾಗುವ ದಿನ, ಮೌಲ್ಯಮಾಪನ ಆರಂಭ ಮತ್ತು ಫಲಿತಾಂಶ ಪ್ರಕಟಣೆಯ ದಿನ, ರಜೆ ಆರಂಭದ ದಿನಗಳನ್ನೆಲ್ಲ ಸ್ಪಷ್ಟವಾಗಿ ಸೂಚಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.

ಈ ಪಟ್ಟಿಯಲ್ಲಿ ಪದವಿಯ 6, ಸ್ನಾತಕೋತ್ತರ ಮಟ್ಟದ 4 ಮತ್ತು ವೃತ್ತಿಪರ ಕೋರ್ಸುಗಳ 8 ಸೆಮಿಸ್ಟರುಗಳನ್ನೂ ಗಣನೆಗೆ ತೆಗೆದುಕೊಳ್ಳಲಾಗಿದೆ. ಸೆಮಿಸ್ಟರ್ ಮುಗಿದ ನಂತರದ ರಜೆ ಅವಧಿಯಲ್ಲಿ ಪರೀಕ್ಷಾ ಕರ್ತವ್ಯ ಬಂದರೆ, ಉಪನ್ಯಾಸಕರು ಆ ಕರ್ತವ್ಯಗಳನ್ನು ನಿರ್ವಹಿಸಬೇಕು ಎಂದು ಅವರು ಹೇಳಿದರು.

Recommended Video

ಕ್ರಿಕೆಟ್ ಇತಿಹಾಸದಲ್ಲಿ ಈ ದಾಖಲೆಗಳನ್ನು ಬ್ರೇಕ್ ಮಾಡೋರು ಹುಟ್ಟೇ ಇಲ್ಲ! ಹುಟ್ಟೋದು ಇಲ್ಲ | *Cricket | OneIndia

ಉನ್ನತ ಶಿಕ್ಷಣ ಪರಿಷತ್ ಮುಖ್ಯಸ್ಥರಾದ ಬಿ.ತಿಮ್ಮೇಗೌಡರ ಅಧ್ಯಕ್ಷತೆಯಲ್ಲಿ ಈ ಸಂಬಂಧ ಇದೇ 7ರಂದು ಎಲ್ಲಾ ವಿ.ವಿ.ಗಳ ಕುಲಪತಿಗಳು ಮತ್ತು ರಿಜಿಸ್ಟ್ರಾರ್ಸ್ ಜತೆ ವರ್ಚುಯಲ್ ಸಭೆ ನಡೆಸಿ, ಸಮಾಲೋಚನೆ ನಡೆಸಲಾಗಿತ್ತು ಎಂದು ಸಚಿವರು ವಿವರಿಸಿದ್ದಾರೆ.

English summary
State Higher Education Council (SHEC) has prepared a common calendar of events for academic activities in universities and degree colleges for the first time. This calendar of events worked out for the academic year 2022-23.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X