ನಿಗಮ ಮಂಡಳಿ ಪಟ್ಟಿ ಇಂದೇ ಫೈನಲ್? ಅಧಿಕೃತ ಘೋಷಣೆ ಒಂದೇ ಬಾಕಿ; ಯಾರಿಗೆಲ್ಲ ಪಟ್ಟ?
ಬೆಂಗಳೂರು, ನವೆಂಬರ್ 21: 2024 ರ ಲೋಕಸಭಾ ಚುನಾವಣೆಯಲ್ಲಿ 28 ಕ್ಷೇತ್ರಗಳ ಪೈಕಿ ಕನಿಷ್ಠ 20 ಕ್ಷೇತ್ರಗಳನ್ನ ಗೆಲ್ಲಲು ಟಾರ್ಗೆಟ್ ಹಾಕಿಕೊಂಡಿರುವ ಕರ್ನಾಟಕ ಕಾಂಗ್ರೆಸ್ ನಾಯಕರಿಗೆ ಸದ್ಯ ಕೈ ಪಾಳಯದಲ್ಲಿ ಸಚಿವ ಸ್ಥಾನ ಕೈ ತಪ್ಪಿದ ಹಿನ್ನಲೆ ಹೊತ್ತಿಕೊಂಡ ಅಸಮಾಧಾನದ ಕಿಚ್ಚನ್ನ ಶಮನಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮುಂದಾಗಿದ್ದು, ರಾಜ್ಯ ಕಾಂಗ್ರೆಸ್ ಉಸ್ತುವಾರ ರಣದೀಪ್ ಸಿಂಗ್ ಸುರ್ಜೆವಾಲಾ ರಾಜ್ಯಕ್ಕೆ ಆಗಮಿಸಲಿದ್ದಾರೆ.
ಹೌದು, ಲೋಕಸಭಾ ಚುನಾವಣೆ ದೃಷ್ಠಿಯಿಂದಾಗಿ ಶಾಸಕರು ಹಾಗೂ ಕಾರ್ಯಕರ್ತರನ್ನ ವಿಶ್ವಾಸಕ್ಕೆ ತೆಗೆದುಕೊಳ್ಳುವ ದೃಷ್ಟಿಯಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನಿಗಮ ಮಂಡಳಿ ನೇಮಕಕ್ಕೆ ಮುಂದಾಗಿದ್ದಾರೆ.

ಈಗಾಗಲೇ ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವ ಸ್ಥಾನ ಕೈ ತಪ್ಪಿದ ಹಿನ್ನಲೆ ಬಹಿರಂಗವಾಗಿ ಅಸಮಾಧಾನ ಹೊರ ಹಾಕಿದ್ದ ನಾಯಕರಿಗೆ ಪ್ರಭಾವಿ ನಿಗಮ ಮಂಡಳಿ ಸ್ಥಾನಮಾನಗಳನ್ನು ನೀಡುವ ಮೂಲಕ ಶಾಸಕರನ್ನು ಸಮಾಧಾನ ಪಡಿಸುವ ತಂತ್ರಯನ್ನ ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ಹೆಣೆಯುತ್ತಿದ್ದರೆ ಎನ್ನಲಾಗಿದೆ.
ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕಕ್ಕೆ ಆಗ್ರಹ ಕೇಳಿಬರುತ್ತಿದ್ದು, ಈ ವಿಚಾರವಾಗಿ ಉಂಟಾಗಿರುವ ಗೊಂದಲಕ್ಕೆ ಪರಿಹಾರ ಕಂಡುಕೊಳ್ಳಲು ಕಾಂಗ್ರೆಸ್ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಮಂಗಳವಾರ ನಗರಕ್ಕೆ ಆಗಮಿಸಲಿದ್ದಾರೆ.
ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ನಿಗಮ ಮಂಡಳಿಯಲ್ಲಿ ಯಾರಿಗೆ ಸ್ಥಾನ ನೀಡಬೇಕು ಎಂಬ ಬಗ್ಗೆ ಪಟ್ಟಿಯನ್ನ ಸಿದ್ದಪಡಿಸಿದ್ದು, ಈ ಪಟ್ಟಿಯಲ್ಲಿ ಶಾಸಕರಿಗೆ ಹೆಚ್ಚಿನ ಮಣೆ ಹಾಕಬೇಕಾ ಅಥವಾ ಕಾರ್ಯಕರ್ತರಿಗೆ ಹೆಚ್ಚಿನ ಮಣೆ ಹಾಕಬೇಕಾ ಎಂಬ ಬಗ್ಗೆ ಸುರ್ಜೇವಾಲ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೊಂದಿಗೆ ಸಭೆ ನಡೆಸಿ ನಿರ್ಣಾಯಕ ಹುದ್ದೆಗಳ ಹೆಸರನ್ನು ಅಂತಿಮಗೊಳಿಸಲಿದ್ದಾರೆ.

ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಗಸ್ಟ್‌ನಲ್ಲಿ ಹೆಸರುಗಳನ್ನು ಅಂತಿಮಗೊಳಿಸಲು ಸಭೆ ನಡೆಸಿದ್ದರು. ಆದರೆ ಇಬ್ಬರೂ ನಾಯಕರು ಒಮ್ಮತಕ್ಕೆ ಬರಲು ವಿಫಲವಾದ ಹಿನ್ನಲೆ ರಾಜ್ಯಕ್ಕೆ ಸುರ್ಜೆವಾಲಾ ಅವರು ಆಗಮಿಸಿ ಚರ್ಚಿಸಿ ಇವತ್ತೇ ಪಟ್ಟಿಯನ್ನ ಫೈನಲ್ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ನೇಮಕಾತಿಗಾಗಿ ಪಕ್ಷದ ಹೈಕಮಾಂಡ್‌ಗೆ ಶಿಫಾರಸು ಮಾಡಲು ಸುಮಾರು 25 ಹೆಸರುಗಳನ್ನು ಅಂತಿಮಗೊಳಿಸಿದ್ದಾರೆ ಎಂದು ಹೇಳಲಾಗಿದೆ.
ಸಿಎಂ, ಡಿಸಿಎಂ ಸಿದ್ಧಪಡಿಸಿದ ನಿಗಮ ಮಂಡಳಿ ಪಟ್ಟಿ ಲಭ್ಯ?
ಬಸವರಾಜ ರಾಯರೆಡ್ಡಿ
ನರೇಂದ್ರಸ್ವಾಮಿ
ವಿನಯ್ ಕುಲಕರ್ಣಿ
ವಿಜಯಾನಂದ ಕಾಶಪ್ಪನವರ್
ಬಂಗಾರಪೇಟೆ ನಾರಾಯಣಸ್ವಾಮಿ
ಗಣೇಶ್ ಹುಕ್ಕೇರಿ
ಕೋಲಾರ ನಂಜೇಗೌಡ
ಬಿ.ಕೆ.ಸಂಗಮೇಶ್
B.R.ಪಾಟೀಲ್
ಎಂ.ವೈ.ಪಾಟೀಲ್
ಬಿ.ಜಿ.ಗೋವಿಂದಪ್ಪ
ರಾಘವೇಂದ್ರ ಹಿಟ್ನಾಳ್
ಪ್ರಸಾದ್ ಅಬ್ಬಯ್ಯ
ಎ.ಆರ್.ಕೃಷ್ಣಮೂರ್ತಿ
ಶಿವಲಿಂಗೇಗೌಡ
ರೂಪ ಶಶಿಧರ್
ರಾಜೇಗೌಡ
ರಘುಮೂರ್ತಿ ಅನಿಲ್ ಚಿಕ್ಕಮಾದು
ಮಾಗಡಿ ಬಾಲಕೃಷ್ಣ












Click it and Unblock the Notifications