ಕಾಂಗ್ರೆಸ್ ಗ್ಯಾರಂಟಿ ಅಧಿಕೃತ ಘೋಷಣೆ: ಇಲ್ಲಿದೆ ಮಾಹಿತಿ!
ಬೆಂಗಳೂರು: 2023ರ ಕರ್ನಾಟಕ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಭರ್ಜರಿ ಜಯ ತಂದುಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ 5 ಗ್ಯಾರಂಟಿಗಳ ಬಗ್ಗೆ ಸಿದ್ದರಾಮಯ್ಯ ಸರ್ಕಾರ ನುಡಿದಂತೆ ನಡೆದಿದೆ. ಮೊದಲ ಕ್ಯಾಬಿನೆಟ್ ಸಭೆಯಲ್ಲೇ ಐದೂ ಯೋಜನೆಗೆ ತಾತ್ವಿಕ ಒಪ್ಪಿಗೆ ಸಿಕ್ಕಿದ್ದು, ಕರ್ನಾಟಕ ಸಿಎಂ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಈ ಬಗ್ಗೆ ಮಾಹಿತಿ ನೀಡಲಾಗಿದೆ.
ಬೆಳಗ್ಗೆ ಸಿದ್ದರಾಮಯ್ಯ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡುತ್ತಿದ್ದಂತೆಯೇ ಹೊಸ ಆಸೆ ಚಿಗುರಿತ್ತು. ಅದರಲ್ಲೂ ಕಾಂಗ್ರೆಸ್ ಚುನಾವಣೆ ಸಮಯದಲ್ಲಿ ಘೋಷಣೆ ಮಾಡಿದ್ದ 5 ಗ್ಯಾರಂಟಿ ಬಗ್ಗೆ ಜನರಿಗೆ ಕುತೂಹಲ ಡಬಲ್ ಆಗಿತ್ತು. ಇದೀಗ ತಾನು ಹೇಳಿದಂತೆ ಸಿದ್ದರಾಮಯ್ಯ ನಡೆದುಕೊಂಡಿದ್ದು, ತಮ್ಮ ಮೊದಲ ಸಂಪುಟ ಸಭೆಯಲ್ಲಿ ತಾತ್ವಿಕ ಒಪ್ಪಿಗೆ ನೀಡಿದ್ದಾರೆ. ಹಾಗಾದ್ರೆ ಕಾಂಗ್ರೆಸ್ ನೀಡಿದ್ದ 5 ಗ್ಯಾರಂಟಿ ಯೋಜನೆಗಳು ರಾಜ್ಯದ ಜನಕ್ಕೆ ತಲುಪಲು ಇನ್ನೂ ಎಷ್ಟು ದಿನ ಬೇಕು? ಬನ್ನಿ ತಿಳಿಯೋಣ.

ಅನ್ನಭಾಗ್ಯ ಯೋಜನೆಗೆ ಹೊಸ ರೂಪ?
2ನೇ ಬಾರಿಗೆ ಸಿಎಂ ಆಗಿ ಅಧಿಕಾರ ವಹಿಸಿಕೊಂಡ ಸಿಎಂ ಸಿದ್ದರಾಮಯ್ಯ, ಜನಪ್ರಿಯ ಅನ್ನಭಾಗ್ಯ ಯೋಜನೆಗೆ ಹೊಸ ಹುರುಪು ತುಂಬುವ ನಿರೀಕ್ಷೆ ಇದೆ. ಹೀಗಾಗಿ ತಮ್ಮ ಮೊದಲ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ಘೋಷಣೆ ಮಾಡಿದ್ದು, ಅನ್ನಭಾಗ್ಯ ಯೋಜನೆಯಡಿ ರಾಜ್ಯದ ಬಡಕುಟುಂಬದ ಪ್ರತಿ ವ್ಯಕ್ತಿಗೆ ಮಾಸಿಕ 10 ಕೆ.ಜಿ ಅಕ್ಕಿ ಉಚಿತವಾಗಿ ನೀಡಲು ಇಂದು ಮುಖ್ಯಮಂತ್ರಿ @siddaramaiah ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆ ತಾತ್ವಿಕ ಅನುಮೋದನೆ ನೀಡಿದೆ ಎಂದು ಕರ್ನಾಟಕ ಸಿಎಂ ಅಧಿಕೃತ ಟ್ವಿಟ್ಟರ್ ಪೇಜ್ ಟ್ವೀಟ್ ಮಾಡಿದೆ.
"ಅನ್ನಭಾಗ್ಯ" ಯೋಜನೆಯಡಿ ರಾಜ್ಯದ ಬಡಕುಟುಂಬದ ಪ್ರತಿ ವ್ಯಕ್ತಿಗೆ ಮಾಸಿಕ 10 ಕೆ.ಜಿ ಅಕ್ಕಿಯನ್ನು ಉಚಿತವಾಗಿ ನೀಡಲು ಇಂದು ಮುಖ್ಯಮಂತ್ರಿ @siddaramaiah ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯು ತಾತ್ವಿಕ ಅನುಮೋದನೆ ನೀಡಿದೆ.#ನುಡಿದಂತೆ_ನಡೆದ_ಕಾಂಗ್ರೆಸ್ pic.twitter.com/YfSo44yBYI
— CM of Karnataka (@CMofKarnataka) May 20, 2023
ಶೀಘ್ರದಲ್ಲೇ ಬಡವರಿಗೆ ಉಚಿತ ವಿದ್ಯುತ್?
ಮತ್ತೊಂದ್ಕಡೆ ಕಾಂಗ್ರೆಸ್ ನೀಡಿದ್ದ 5 ಗ್ಯಾರಂಟಿಗಳಲ್ಲಿ ಒಂದಾದ ಉಚಿತ ವಿದ್ಯುತ್ ಕಲ್ಪಿಸುವ ಗೃಹಜ್ಯೋತಿಯ ಬಗ್ಗೆಯೂ ಮೊದಲ ಸಂಪುಟ ಸಭೆಯಲ್ಲಿ ಪ್ರಸ್ತಾಪವಾಗಿದೆ. "ಗೃಹಜ್ಯೋತಿ" ಯೋಜನೆಯಡಿ ರಾಜ್ಯದ ಪ್ರತಿ ಮನೆಗೆ ತಿಂಗಳಿಗೆ 200 ಯುನಿಟ್ ವಿದ್ಯುತ್ತನ್ನು ಉಚಿತವಾಗಿ ನೀಡಲು ಇಂದು ಮುಖ್ಯಮಂತ್ರಿ @siddaramaiah ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯು ತಾತ್ವಿಕ ಅನುಮೋದನೆ ನೀಡಿದೆ ಎಂದು ಕರ್ನಾಟಕ ಸಿಎಂ ಟ್ವಿಟ್ಟರ್ ಅಕೌಂಟ್ ಟ್ವೀಟ್ ಮಾಡಿದೆ.
"ಗೃಹಜ್ಯೋತಿ" ಯೋಜನೆಯಡಿ ರಾಜ್ಯದ ಪ್ರತಿ ಮನೆಗೆ ತಿಂಗಳಿಗೆ 200 ಯುನಿಟ್ ವಿದ್ಯುತ್ತನ್ನು ಉಚಿತವಾಗಿ ನೀಡಲು ಇಂದು ಮುಖ್ಯಮಂತ್ರಿ @siddaramaiah ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯು ತಾತ್ವಿಕ ಅನುಮೋದನೆ ನೀಡಿದೆ.#ನುಡಿದಂತೆ_ನಡೆದ_ಕಾಂಗ್ರೆಸ್ pic.twitter.com/dgraahyuHX
— CM of Karnataka (@CMofKarnataka) May 20, 2023
ಮಹಿಳೆಯರಿಗೆ ಶೀಘ್ರ ಉಚಿತ ಬಸ್ ಪ್ರಯಾಣ?
ಕರ್ನಾಟಕದ ಎಲ್ಲಾ ಮಹಿಳೆಯರಿಗೆ ಸರ್ಕಾರಿ ಸಾರಿಗೆ ಬಸ್ ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಲು ಇಂದು ಮುಖ್ಯಮಂತ್ರಿ @siddaramaiah ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯು ತಾತ್ವಿಕ ಅನುಮೋದನೆ ನೀಡಿದೆ ಎಂದು ಮುಖ್ಯಮಂತ್ರಿಗಳ ಅಧಿಕೃತ ಟ್ವಿಟ್ಟರ್ ಪೇಜ್‌ನಲ್ಲಿ ಮಾಹಿತಿ ನೀಡಲಾಗಿದೆ.
ಕರ್ನಾಟಕದ ಎಲ್ಲಾ ಮಹಿಳೆಯರಿಗೆ ಸರ್ಕಾರಿ ಸಾರಿಗೆ ಬಸ್ ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಲು ಇಂದು ಮುಖ್ಯಮಂತ್ರಿ @siddaramaiah ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯು ತಾತ್ವಿಕ ಅನುಮೋದನೆ ನೀಡಿದೆ.#ನುಡಿದಂತೆ_ನಡೆದ_ಕಾಂಗ್ರೆಸ್ pic.twitter.com/CdEALr5U6P
— CM of Karnataka (@CMofKarnataka) May 20, 2023
2,000 ಸಹಾಯಧನ ಭರವಸೆ
"ಗೃಹಲಕ್ಷ್ಮಿ" ಯೋಜನೆಯಡಿ ಕುಟುಂಬದ ಯಜಮಾನಿಗೆ ಪ್ರತೀ ತಿಂಗಳು ರೂ. 2,000 ಸಹಾಯಧನ ಒದಗಿಸಲು ಇಂದು ಮುಖ್ಯಮಂತ್ರಿ @siddaramaiah ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯು ತಾತ್ವಿಕ ಅನುಮೋದನೆ ನೀಡಿದೆ ಎಂದು ರಾಜ್ಯದ ಜನತೆಗೆ ಸಿದ್ದರಾಮಯ್ಯ ಸರ್ಕಾರ ಮಾಹಿತಿ ನೀಡಿದೆ.
"ಗೃಹಲಕ್ಷ್ಮಿ" ಯೋಜನೆಯಡಿ ಕುಟುಂಬದ ಯಜಮಾನಿಗೆ ಪ್ರತೀ ತಿಂಗಳು ರೂ. 2,000 ಸಹಾಯಧನ ಒದಗಿಸಲು ಇಂದು ಮುಖ್ಯಮಂತ್ರಿ @siddaramaiah ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯು ತಾತ್ವಿಕ ಅನುಮೋದನೆ ನೀಡಿದೆ.#ನುಡಿದಂತೆ_ನಡೆದ_ಕಾಂಗ್ರೆಸ್ pic.twitter.com/0QE9sIsnEg
— CM of Karnataka (@CMofKarnataka) May 20, 2023
ನಿರುದ್ಯೋಗಿ ಯುವಕ, ಯುವತಿಯರಿಗೂ ಸಿಹಿಸುದ್ದಿ
ಅಂತಿಮವಾಗಿ ರಾಜ್ಯದಲ್ಲಿ ಪದವಿ ಮತ್ತು ಡಿಪ್ಲೋಮಾ ಪಡೆದು ಉದ್ಯೋಗ ಸಿಗದಿರುವ ನಿರುದ್ಯೋಗಿ ಯುವಕ ಯುವತಿಯರಿಗೂ ಸಿಹಿಸುದ್ದಿ ಸಿಕ್ಕಿದೆ. "ಯುವನಿಧಿ" ಯೋಜನೆಯಡಿ ಪ್ರಸಕ್ತ ಸಾಲಿನಿಂದ ಎಲ್ಲಾ ಪದವೀಧರ ನಿರುದ್ಯೋಗಿಗಳಿಗೆ ಮಾಸಿಕ ರೂ. 3,000 ಹಾಗೂ ಡಿಪ್ಲೊಮಾ ಪದವೀಧರ ನಿರುದ್ಯೋಗಿಗಳಿಗೆ ರೂ. 1,500 ನಿರುದ್ಯೋಗ ಭತ್ಯೆ ನೀಡಲು ಇಂದು ಮುಖ್ಯಮಂತ್ರಿ @siddaramaiah ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯು ತಾತ್ವಿಕ ಅನುಮೋದನೆ ನೀಡಿದೆ ಎಂದು ಸರ್ಕಾರ ತಿಳಿಸಿದೆ.
"ಯುವನಿಧಿ" ಯೋಜನೆಯಡಿ ಪ್ರಸಕ್ತ ಸಾಲಿನಿಂದ ಎಲ್ಲಾ ಪದವೀಧರ ನಿರುದ್ಯೋಗಿಗಳಿಗೆ ಮಾಸಿಕ ರೂ. 3,000 ಹಾಗೂ ಡಿಪ್ಲೊಮಾ ಪದವೀಧರ ನಿರುದ್ಯೋಗಿಗಳಿಗೆ ರೂ. 1,500 ನಿರುದ್ಯೋಗ ಭತ್ಯೆ ನೀಡಲು ಇಂದು ಮುಖ್ಯಮಂತ್ರಿ @siddaramaiah ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯು ತಾತ್ವಿಕ ಅನುಮೋದನೆ ನೀಡಿದೆ.#ನುಡಿದಂತೆ_ನಡೆದ_ಕಾಂಗ್ರೆಸ್ pic.twitter.com/mu84bw2xVK
— CM of Karnataka (@CMofKarnataka) May 20, 2023
ಒಟ್ನಲ್ಲಿ ತಾನು ಅಧಿಕಾರಕ್ಕೆ ಬರುತ್ತಿದ್ದಂತೆ ಸಿದ್ದರಾಮಯ್ಯ ಸರ್ಕಾರ ನಾಡಿನ ಜನತೆಗೆ ನೀಡಿದ್ದ ಭರವಸೆಗಳನ್ನ ಈಡೇರಿಸಲು ಮುಂದಾಗಿದೆ. ಪ್ರಮುಖವಾಗಿ 5 ಗ್ಯಾರಂಟಿಗಳ ಮೂಲಕ ಬಡವರಿಗೆ ನೆರವಾಗುವ ಯೋಜನೆಯ ಬಗ್ಗೆ ಮುತುವರ್ಜಿ ವಹಿಸಲಾಗಿದ್ದು, ಅತಿ ಶೀರ್ಘದಲ್ಲೇ ಕನ್ನಡಿಗರಿಗೆ ಯೋಜನೆ ತಲುಪಿಸಲಾಗುವುದು ಎಂಬ ಬಗ್ಗೆ ಮಾಹಿತಿ ನೀಡಿದೆ.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ












Click it and Unblock the Notifications