ಬಸವನಗೌಡ ಪಾಟೀಲ್ ಯತ್ನಾಳ್ ಅವರ ಬುದ್ಧಿಭ್ರಮಣೆಗೆ ಉಚಿತ ಚಿಕಿತ್ಸೆ ಕೊಡಿಸುವ ಗ್ಯಾರಂಟಿ ನೀಡಿದ ಕಾಂಗ್ರೆಸ್
ಬೆಂಗಳೂರು, ಏಪ್ರಿಲ್ 07: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಕುಟುಂಬದ ಬಗ್ಗೆ ವೈಯಕ್ತಿಕ ನಿಂದನೆಯ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರಿಗೆ ರಾಜ್ಯ ಕಾಂಗ್ರೆಸ್ ತಿರುಗೇಟು ನೀಡಿದೆ. ಯತ್ನಾಳ್ ಅವರ ಮಾನಸಿಕ ಹಾಗೂ ಬಾಯಿ ಚಿಕಿತ್ಸೆಗೆ ಕಾಂಗ್ರೆಸ್ ಸರ್ಕಾರ ಉಚಿತ ಚಿಕೆತ್ಸೆ ವ್ಯವಸ್ಥೆ ಕಲ್ಪಿಸಲು ಸಿದ್ಧ. ಇದು ಕಾಂಗ್ರೆಸ್ ನ ಗ್ಯಾರಂಟಿ ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ಹೇಳಿದೆ.
ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ಬಸವನಗೌಡ ಪಾಟೀಲ್ ಯತ್ನಾಳ್ ಅವರನ್ನ ಸ್ವತಃ ಬಿಜೆಪಿಯೇ ಎತ್ತಿ ಮೂಲೆಗೆ ಎಸೆದಿದೆ. ಬಸವನಗೌಡ ಅವರ ಬಾಯಿ ಬಚ್ಚಲು ಎಂದು ಬಿಎಸ್ ವೈ ಬಣದ ನಾಯಕರೇ ಹೇಳುತ್ತಿದ್ದಾರೆ ಎಂದು ಹೇಳಿದರು.

ಮುಸ್ಲಿಂಮರೆಲ್ಲರನ್ನು ಪಾಕಿಸ್ತಾನ ದೃಷ್ಟಿಯಿಂದ ನೋಡುವ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಸ್ವತಃ ಮೌಲ್ವಿ ಕುಟುಂಬದೊಂದಿಗೆ ವ್ಯವಹಾರಿಕ ಸಂಬಂಧ ಇಟ್ಟುಕೊಂಡಿರಲಿಲ್ಲವೇ. ಹಾಗಾದರೆ ಯತ್ನಾಳ್ ಅವರಿಗೂ ಪಾಕಿಸ್ತಾನದ ಜೊತೆ ಸಂಬಂಧವಿದೆ ಎನ್ನೋಣವೇ ಎಂದು ಬಸವನಗೌಡ ಯತ್ನಾಳ್ ಅವರನ್ನ ಕಾಂಗ್ರೆಸ್ ಪ್ರಶ್ನಿಸಿದೆ. ಪಾಕಿಸ್ತಾನದ ಜಪ ಮಾಡುವುದನ್ನ ಬಿಟ್ಟು ಬಿಜೆಪಿಯಲ್ಲಿ ನಿಮ್ಮ ಅಸ್ಥಿತ್ವ ಏನು ಎಂಬುದನ್ನ ಚಿಂತಿಸಿ ಎಂದು ಕಾಂಗ್ರೆಸ್ ತಿರುಗೇಟು ನೀಡಿದೆ.
ಬಿಜೆಪಿಯಲ್ಲಿ ಬದಿಗೆ ಸರಿದು ಬೀದಿಗೆ ಬಿದ್ದಿರುವ ಯತ್ನಾಳ್ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಮತಿಭ್ರಮಣೆಯಲ್ಲಿ ಕೀಳು ಅಭಿರುಚಿಯ ಹೇಳಿಕೆಗಳನ್ನ ನೀಡುವ ಮೂಲಕ ಸಮಾಜದಲ್ಲಿ ಬೆಂಕಿ ಹಚ್ಚುವ ಕೆಲಸ ಮಾಡ್ತಿದ್ದಾರೆ. ಬಸವನಗೌಡ ಯತ್ನಾಳ್ ಅವರಿಗೆ ಒಳ್ಳೆಯ ಟ್ರೀಟ್ ಮೆಂಟ್ ನ ಅಗತ್ಯತೆ ಇದೆ ಎಂದು ಕಾಂಗ್ರೆಸ್ ಅಭಿಪ್ರಾಯ ವ್ಯಕ್ತಪಡಿಸಿದೆ.
ಈ ನಿಟ್ಟಿನಲ್ಲಿ ಯತ್ನಾಳ್ ಅವರಿಗೆ ಉಚಿತ ಮಾನಸಿಕ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಲು ಕಾಂಗ್ರೆಸ್ ಸರ್ಕಾರ ಸಿದ್ಧವಿದೆ. ಯತ್ನಾಳ್ ಅವರ ಬಾಯಿ ಚಿಕಿತ್ಸೆ ಹಾಗೂ ಮಾನಸಿಕ ಚಿಕಿತ್ಸೆ ಉಚಿತವಾಗಿ ಕಲ್ಪಿಸಿಕೊಡಲಿದ್ದು, ಇದು ಕಾಂಗ್ರೆಸ್ ನ ಗ್ಯಾರಂಟಿ ಎಂದು ತಿರುಗೇಟು ನೀಡಿದೆ.
ಯತ್ನಾಳ್ ಅವರೇ,
— Karnataka Congress (@INCKarnataka) April 6, 2024
ಮೌಲ್ವಿಯೊಂದಿಗೆ ವ್ಯಾವಹಾರಿಕ ಸಂಬಂಧ ಇಟ್ಟುಕೊಂಡಿದ್ದು ನೀವಲ್ಲವೇ?
ಅದನ್ನು ಪಾಕಿಸ್ತಾನದ ಜೊತೆಗೆ ಸಂಬಂಧವಿದೆ ಎನ್ನೋಣವೇ?
ಬಿಜೆಪಿಯಲ್ಲಿ ಎತ್ತಿ ಮೂಲೆಗೆ ಎಸೆಯಲ್ಪಟ್ಟ ಯತ್ನಾಳ್ ಅವರದ್ದು ಬಚ್ಚಲು ಬಾಯಿ ಎಂದು BSY ಬಣ ಮಾತಾಡಿಕೊಳ್ಳುತ್ತಿದೆಯಂತೆ ನಿಜವೇ?
ಪಾಕಿಸ್ತಾನದ ಜಪ ಮಾಡುವುದನ್ನು ಬಿಟ್ಟು, ಸಮಾಜಕ್ಕೆ ಬೆಂಕಿ…
ಇನ್ನು ಕುಟುಂಬದ ಬಗ್ಗೆ ವಯಕ್ತಿಕ ನಿಂದನೆ ಮಾಡಿರುವ ಯತ್ನಾಳ್ ಅವರ ಹೇಳಿಕೆ ಕೀಳು ಅಭಿರುಚಿಯದ್ದು.. ನಾನು ಮುಸ್ಲಿಂ ಕುಟುಂಬದಲ್ಲಿ ಜನಿಸಿದ ಮಾತ್ರಕ್ಕೆ ನನ್ನ ಭಾರತೀಯತೆಯನ್ನ ಯಾರು ಪ್ರಶ್ನೆ ಮಾಡಲಾಗದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಪತ್ನಿ ಟಬಸು ರಾವ್ ಟ್ವೀಟ್ ಮಾಡಿದ್ದಾರೆ. ಇಂಥಹವರ ವಿರುದ್ಧ ಬಿಜೆಪಿ ಕ್ರಮ ಕೈಗೊಳ್ಳಲಿದೆಯೇ ಎಂದು ಹೇಳಿದೆ.












Click it and Unblock the Notifications