ಸಿಎಂ ಕುರ್ಚಿ ಕಿತ್ತಾಟ ನಿಲ್ಲಿಸಲು ದೆಹಲಿಯಲ್ಲಿ ಮುಹೂರ್ತ ಫಿಕ್ಸ್, ಹೈಕಮಾಂಡ್ ಮುಂದಿನ ಪ್ಲ್ಯಾನ್ ಏನು?
ರಾಜ್ಯ ಕಾಂಗ್ರೆಸ್‌ನ ಸಿಎಂ ಕುರ್ಚಿ ಕಿತ್ತಾಟವು ತೀವ್ರ ಸ್ವರೂಪ ಪಡೆದುಕೊಂಡಿದೆ. ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರನ್ನು ಬ್ರೇಕ್‌ಫಾಸ್ಟ್‌ಗೆ ಆಹ್ವಾನಿಸಿ ಮಹತ್ವದ ಚರ್ಚೆ ನಡೆಸಿದ್ದು, ಕಾಂಗ್ರೆಸ್ ಪಾಳಯದಲ್ಲಿ ಹೊಸ ಚರ್ಚೆಗಳು ಶುರುವಾಗಿದೆ. ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ಈಗಾಗಲೇ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಇದಕ್ಕೂ ಮುನ್ನ ಇಬ್ಬರೂ ಸೇರಿ ಒಮ್ಮತದ ನಿರ್ಧಾರಕ್ಕೆ ಬರುವಂತೆ ಸಿದ್ದರಾಮಯ್ಯ ಹಾಗೂ ಡಿಕೆಶಿಗೆ ಸೂಚನೆ ನೀಡಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಶೀಘ್ರವೇ ದೆಹಲಿಯಿಂದ ಮಹತ್ವದ ಸಂದೇಶವೊಂದು ಬರಲಿದೆ ಎಂದು ಹೇಳಲಾಗುತ್ತಿದೆ.
ಇತ್ತೀಚಿನ ಕಾಂಗ್ರೆಸ್ ಪಾಳಯದ ಬೆಳವಣಿಗೆ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ ಅವರು, ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ಪಕ್ಷದ ವರಿಷ್ಠರು ಹೇಳಿದಂತೆ ನಡೆದುಕೊಳ್ಳುವುದಾಗಿ ಈಗಾಗಲೇ ತಿಳಿಸಿದ್ದೇನೆ. ಈಗಲೂ ಮತ್ತು ನಾಳೆಯೂ ಅದನ್ನೇ ಹೇಳುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ. ಅಲ್ಲದೆ ಪಕ್ಷದ ವರಿಷ್ಠರು ನನಗೆ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಕರೆ ಮಾಡಿ, ನೀವಿಬ್ಬರೂ ಭೇಟಿ ಮಾಡಿ ಎಂದು ತಿಳಿಸಿದ್ದಾರೆ. ಹಾಗಾಗಿ ಅವರನ್ನು ನಾನು ಉಪಹಾರಕ್ಕಾಗಿ ಕರೆದಿದ್ದೇನೆ ಅಲ್ಲಿ ಚರ್ಚೆ ಮಾಡುತ್ತೇವೆ ಎಂದಿದ್ದರು.

ಅದರಂತೆ ಇಂದು ಸಿದ್ದರಾಮಯ್ಯ ಅವರ ನಿವಾಸಕ್ಕೆ ಡಿ.ಕೆ.ಶಿವಕುಮಾರ್ ಆಗಮಿಸಿ ಉಪಹಾರ ಸೇವಿಸುತ್ತಾ ತಮ್ಮ ಮುಂದಿನ ನಡೆಗಳ ಬಗ್ಗೆ ಮಹತ್ವದ ತೀರ್ಮಾನ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಇಬ್ಬರ ಹೊಂದಾಣಿಕೆ ಬಳಿಕ ದೆಹಲಿಯಲ್ಲಿ ಈ ಕುರ್ಚಿ ಕಿತ್ತಾಟಕ್ಕೆ ಬ್ರೇಕ್ ಬೀಳುವ ಸಾಧ್ಯತೆ ಇದೆ. ಇಬ್ಬರೂ ನಾಯಕರು ಯಾವ ಕ್ಷಣದಲ್ಲಾದರೂ ದೆಹಲಿಗೆ ಹಾರಲಿದ್ದು, ಕಾಂಗ್ರೆಸ್‌ನಲ್ಲಿ ಮಹತ್ವದ ಬದಲಾವಣೆಗಳಾಗುವ ಲಕ್ಷಣಗಳೂ ದಟ್ಟವಾಗಿದೆ.
ಇನ್ನು ಡಿ.ಕೆ.ಶಿವಕುಮಾರ್ ಅವರು ಹೈಕಮಾಂಡ್ ಹೇಳಿದ್ದನ್ನು ಒಪ್ಪುವುದಾಗಿ ಹೇಳಿದ್ದಾರೆ. ಹೈಕಮಾಂಡ್‌ನವರು ನವದೆಹಲಿಗೆ ಕರೆದರೆ ಹೋಗುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದು, ಈ ಕುರ್ಚಿ ಫೈಟ್ ಬಗೆಹರಿಸುವುದೇ ಹೈಕಮಾಂಡ್ ಮುಂದಿರುವ ದೊಡ್ಡ ಸವಾಲಾಗಿದೆ. ಈಗಾಗಲೇ ಡಿ.ಕೆ.ಶಿವಕುಮಾರ್ ಬಣದ ಶಾಸಕರು ದೆಹಲಿಗೆ ತೆರಳಿ ಶಕ್ತಿಪ್ರದರ್ಶನ ಮಾಡಿಬಂದಿದ್ದಾರೆ. ಅಲ್ಲದೆ ಒಕ್ಕಲಿಗ ಸಮುದಾಯ ಕೂಡ ಡಿಕೆ.ಶಿವಕುಮಾರ್ ಅವರ ಬೆನ್ನಿಗೆ ನಿಂತಿದ್ದು, ಸಿಎಂ ಸ್ಥಾನ ನೀಡದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡುವ ಎಚ್ಚರಿಕೆ ನೀಡಿದೆ.

ಕಾಂಗ್ರೆಸ್ ಪಾಳಯದ ಚರ್ಚೆಗಳ ಪ್ರಕಾರ ಸಿದ್ದರಾಮಯ್ಯ ಅವರು ಸಿಎಂ ಸ್ಥಾನ ಬಿಟ್ಟು ಕೊಡಲು ಸಿದ್ಧರಿಲ್ಲ. ಅಲ್ಲದೆ ಡಿ.ಕೆ.ಶಿವಕುಮಾರ್ ಅವರಿಗೆ ಹೆಚ್ಚಿನ ಶಾಸಕರ ಬೆಂಬಲವೂ ಇಲ್ಲ. ಒಂದು ವೇಳೆ ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಟ್ಟರೆ ಸಿದ್ದರಾಮಯ್ಯ ಬಣದ ನಾಯಕರು ಒಪ್ಪುವುದಿಲ್ಲ. ಇದರಿಂದ ಕಾಂಗ್ರೆಸ್‌ನಲ್ಲಿ ಒಡಕು ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರಲು ಸಾಕಷ್ಟು ಶ್ರಮ ಹಾಕಲಾಗಿದ್ದು, ಈಗ ಈ ವಿಚಾರದಲ್ಲಿ ಸ್ವಲ್ಪ ಎಡವಟ್ಟಾದರೂ ಸರ್ಕಾರ ಅಲುಗಾಡುವ ಸ್ಥಿತಿ ತಲುಪಿದೆ. ಇದನ್ನು ಅರಿತಿರುವ ಹೈಕಮಾಂಡ್ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಇಬ್ಬರನ್ನೂ ತಣಿಸುವ ಕೆಲಸಕ್ಕೆ ಮುಂದಾಗಿದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಸದ್ಯದಲ್ಲೇ ಇಬ್ಬರೂ ನಾಯಕರು ದೆಹಲಿಗೆ ಹಾರಲಿದ್ದಾರಂತೆ.
-
ಮಾರ್ಚ್ 20ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
Samarth Shamanur: ದಾವಣಗೆರೆ ಉಪಚುನಾವಣೆ ಕಾಂಗ್ರೆಸ್ ಟಿಕೆಟ್ ಫೈಟ್ ಅಂತ್ಯ: ಶಾಮನೂರು ಕುಟುಂಬದ ಕುಡಿ ಸಮರ್ಥ್ ಕಣಕ್ಕೆ -
ಕೇರಳ ವಿಧಾನಸಭೆ ಚುನಾವಣೆ: ಸಿಎಂ ಪಿಣರಾಯಿ ವಿಜಯನ್ ನಾಮಪತ್ರ ಸಲ್ಲಿಕೆ, ಒಟ್ಟು ಆಸ್ತಿ ಮೌಲ್ಯ 1,00,00,000 ರೂಪಾಯಿಗೂ ಅಧಿಕ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ











Click it and Unblock the Notifications