ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

''ನಾರಾಯಣ ಗುರುಗಳ ಅಪಮಾನ ಖಂಡನೀಯ, ಕೇಂದ್ರ ಕ್ಷಮೆ ಕೇಳಲಿ''

|
Google Oneindia Kannada News

ಬೆಂಗಳೂರು ಜನವರಿ 17: ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಮೆರವಣಿಗೆಯಲ್ಲಿ ಸಮಾಜ ಸುಧಾರಕ ನಾರಾಯಣ ಗುರುಗಳ ಸ್ತಬ್ದ ಚಿತ್ರಕ್ಕೆ ಅವಕಾಶ ನೀಡದೇ ಕೇಂದ್ರ ಸರ್ಕಾರ ದೊಡ್ಡ ತಪ್ಪು ಮಾಡಿದೆ, ಈ ಕುರಿತಂತೆ ಕ್ಷಮೆಯಾಚಿಸಬೇಕು ಎಂದು ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಶತಮಾನದ ಹಿಂದೆಯೇ ಅಸ್ಪೃಶ್ಯತೆ ಹಾಗೂ ಪುರೋಹಿತಶಾಹಿ ವ್ಯವಸ್ಥೆ ವಿರುದ್ಧ ಸಿಡಿದೆದ್ದು, ಹಿಂದೂ ಧರ್ಮ ಸುಧಾರಣೆಯಲ್ಲಿ ತೊಡಗಿಸಿಕೊಂಡಿದ್ದ ಗುರುಗಳಿಗೆ ಬಿಜೆಪಿ ಹಾಗೂ ಕೇಂದ್ರ ಸರ್ಕಾರಕ್ಕೆ ಅವಮಾನಿಸಿದ್ದು, ಹಿಂದೂ ಧರ್ಮದ ಬಗ್ಗೆ ಮಾತನಾಡುವ ನೈತಿಕತೆ ಕಳೆದುಕೊಂಡಿದೆ ಎಂದು

ರಾಷ್ಟ್ರಕವಿ ರವೀಂದ್ರನಾಥ ಠ್ಯಾಗೂರ್, ಮಹಾತ್ಮಾಗಾಂಧಿ ಮತ್ತು ಭಾರತಕ್ಕೆ ಸಂವಿಧಾನ ನೀಡಿದ ಡಾಕ್ಟರ್ ಬಿ. ಆರ್. ಅಂಬೇಡ್ಕರ್ ಅವರಿಂದ ಗೌರವಿಸಲ್ಪಟ್ಟ ಶ್ರೀ ನಾರಾಯಣ ಗುರುಗಳನ್ನು ಇಂದಿನ ಸಂಘ ಪರಿವಾರ ನಿಯಂತ್ರಿತ ಕೇಂದ್ರ ಸರ್ಕಾರ ಅಪಮಾನಿಸಿರುವುದು ಖಂಡನೀಯ ಎಂದು ಕಾಂಗ್ರೆಸ್‌ ಹಿರಿಯ ಮುಖಂಡರು ಹಾಗೂ ವಿಧಾನಪರಿಷತ್‌ ಸದಸ್ಯರಾದ ಬಿ ಕೆ ಹರಿಪ್ರಸಾದ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Karnataka Congress condemned Centres Rejection of Narayana Guru Tableau

ಬೆಂಗಳೂರಿನಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕರು, ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಮೆರವಣಿಗೆಯಲ್ಲಿ ದೇಶದ ಸಾಂಸ್ಕೃತಿಕ, ಧಾರ್ಮಿಕ ಐತಿಹಾಸಿಕ, ಅಭಿವೃದ್ದಿ ಮತ್ತು ಮಿಲಿಟರಿ ಸಾಮರ್ಥ್ಯವನ್ನು ಪ್ರತಿ ಬಿಂಬಿಸುವ ಸ್ತಬ್ದ ಚಿತ್ರಗಳ ಪ್ರದರ್ಶನವನ್ನ ಏರ್ಪಡಿಸಲಾಗುತ್ತದೆ. ಹಾಗೆಯೇ, ರಾಜ್ಯಗಳು ತಮ್ಮ ನೆಲದ ಹೆಮ್ಮೆಯನ್ನು ಪ್ರತಿಬಿಂಬಿಸುವ ಸ್ಥಬ್ದ ಚಿತ್ರಗಳನ್ನು ಕಳುಹಿಸುವ ಪರಿಪಾಠವಿದೆ.

ಅದರಂತೆ, ಕೇರಳ ರಾಜ್ಯ ಕಳುಹಿಸಿದ್ದ ತನ್ನ ನೆಲದ ಹೆಮ್ಮೆಯನ್ನು ಪ್ರತಿಬಿಂಬಿಸುವ ಕ್ರಾಂತಿಕಾರಿ ಸಮಾಜ ಸುಧಾರಕ ಶ್ರೀ ನಾರಾಯಣ ಗುರುಗಳ ಸ್ತಬ್ಧಚಿತ್ರವನ್ನು ಕೇಂದ್ರ ಸರಕಾರ ತಿರಸ್ಕರಿಸಿದೆ. ಈ ಮೂಲಕ ಭಾರತದ ಚಾರಿತ್ರಿಕ, ಮಹತ್ವದ ಕ್ರಾಂತಿಕಾರಿ ಸಮಾಜ ಸುಧಾರಕನಿಗೆ ಅಪಮಾನಿಸಿದೆ. ಜೊತೆಗೆ ಶೋಷಣೆ, ಮಹಿಳಾ ಅಸಮಾನತೆ, ಜಾತಿ ಪ್ರತಿಪಾದನೆಯನ್ನು ಪರೋಕ್ಷವಾಗಿ ಕೇಂದ್ರ ಸರ್ಕಾರ ಉತ್ತೇಜಿಸಿದಂತಾಗಿದೆ ಎಂದು ಆಕ್ರೋಶವ್ಯಕ್ತಪಡಿಸಿದ್ದಾರೆ.

ನಾರಾಯಣ ಗುರುಗಳು ಮೂಲತಃ ಕೇರಳ ರಾಜ್ಯದವರು ಎಂಬುದಕ್ಕೆ ಪರಿಪೂರ್ಣವಾದ ದಾಖಲೆ ಲಭ್ಯವಿದೆ. ಅಲ್ಲದೆ, ಶತಮಾನಗಳ ಹಿಂದಿನ ಅವರ ಸಮಾಜ ಸುಧಾರಣೆಯ ಬಗ್ಗೆ ನೂರಾರು ದಾಖಲೆಗಳು ಲಭ್ಯವಿವೆ. ಶೋಷಣೆ, ಜಾತೀಯತೆ, ಅಸಮಾನತೆ ನಿಮ್ನ ವರ್ಗದವರ ಅಪಮಾನಿಸುವುದರ ವಿರುದ್ದ ಸಿಡಿದು ನಿಂತು ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂದು ಸಾರಿದ್ದಲ್ಲದೆ ಸಮಾಜದಲ್ಲಿ ಸಮಾನತೆಗಾಗಿ ಬದುಕಿನುದ್ದಕ್ಕೂ ಶ್ರೀ ನಾರಾಯಣ ಗುರುಗಳು ಶ್ರಮಿಸಿದ್ದಾರೆ.

ನಾರಾಯಣ ಗುರುಗಳ ಕ್ರಾಂತಿಕಾರಿ ಸುಧಾರಣೆಯ ಮಾಹಿತಿ ತಿಳಿದಂತಹ ಮಹಾತ್ಮಾಗಾಂಧಿ ಅವರು ಕೇರಳದ ಶಿವಗಿರಿ ಮಠಕ್ಕೆ ಭೇಟಿ ನೀಡಿ ನಾರಾಯಣಗುರುಗಳ ವೈಕಂ ಹೋರಾಟವನ್ನು ಬೆಂಬಲಿಸಿ ಗೌರವಿಸಿದ್ದರು. ಭಾರತಕ್ಕೆ ರಾಷ್ಟ್ರಗೀತೆ ಯನ್ನು ನೀಡಿದ ರಾಷ್ಟ್ರಕವಿ ರವೀಂದ್ರನಾಥ ಠ್ಯಾಗೂರ್ ಮತ್ತು ಭಾರತಕ್ಕೆ ಸಂವಿಧಾನ ನೀಡಿದ ಡಾಕ್ಟರ್ ಬಿ. ಆರ್. ಅಂಬೇಡ್ಕರ್ ಅವರಿಂದ ಶ್ರೀ ನಾರಾಯಣ ಗುರುಗಳು ಗೌರವಿಸಲ್ಪಟ್ಟಿದ್ದಾರೆ. ಆದರೆ, ಇಂದಿನ ಸಂಘ ಪರಿವಾರದ ನಿಯಂತ್ರಣದಲ್ಲಿರುವ ಕೇಂದ್ರ ಸರಕಾರ ಅವರ ಸ್ತಬ್ದ ಚಿತ್ರವನ್ನು ತಿರಸ್ಕರಿಸುವ ಮೂಲಕ ಅವರನ್ನು ಅಪಮಾನಿಸಿರುವುದು ತೀವ್ರ ಖಂಡನೀಯ ಎಂದರು.

ಇಂತಹ ಸಮ ಸಮಾಜದ ಹೋರಾಟಗಾರನಿಗೆ ಕೇಂದ್ರ ಬಿಜೆಪಿ ಸರ್ಕಾರ ರಚಿಸಿರುವ ಆಯ್ಕೆ ಸಮಿತಿ ಅಪಮಾನ ಮಾಡಿದೆ. ಈ ತಿರಸ್ಕಾರ ನಾರಾಯಣ ಗುರುಗಳಿಗೆ ಮಾತ್ರವಲ್ಲ ದೇಶದ ಕೋಟ್ಯಂತರ ಶೋಷಿತ ಸಮಾಜಕ್ಕೆ ಮಾಡಿರುವ ಅವಮಾನ ಆಗಿದೆ ಎಂದು ಬಿ ಕೆ ಹರಿಪ್ರಸಾದ್‌ ಆಕ್ರೋಶವ್ಯಕ್ತಪಡಿಸಿದರು.

Recommended Video

Virat Kohli ಕ್ಯಾಪ್ಟೆನ್ಸಿ ನಿರ್ಗಮನದ ಹಿಂದೆಯೇ ಟೀಮ್ ಇಂಡಿಯಾಗೆ ಬಿಗ್ ಶಾಕ್ ಕೊಟ್ಟ ICC | Oneindia Kannada

ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ತಕ್ಷಣ ತನ್ನ ಪ್ರಮಾದ ಮತ್ತು ತಪ್ಪಿಗೆ ದೇಶದ ಜನತೆಯ ಕ್ಷಮೆ ಕೋರುವುದರ ಜೊತೆಗೆ ನಾರಾಯಣಗುರುಗಳ ಸ್ತಬ್ಧಚಿತ್ರವನ್ನು ಈ ಬಾರಿಯ ಗಣರಾಜ್ಯೋತ್ಸವ ಮೆರವಣಿಗೆಯಲ್ಲಿ ಸೇರ್ಪಡೆ ಗೊಳಿಸಬೇಕೆಂದು ಬಿ ಕೆ ಹರಿಪ್ರಸಾದ್‌ ಒತ್ತಾಯಿಸಿದ್ದಾರೆ.

English summary
Karnataka Congress leaders condemned Centre government's Rejection of Social reformer Narayana Guru Tableau. The tableau was proposed by Kerala.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X