ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲೋಕಸಭೆ ಚುನಾವಣೆ : ಕರ್ನಾಟಕ ಕಾಂಗ್ರೆಸ್‌ ತೆಗೆದುಕೊಂಡ ನಿರ್ಧಾರಗಳು

By Gururaj
|
Google Oneindia Kannada News

ಬೆಂಗಳೂರು, ಜುಲೈ 22 : ಜಿಲ್ಲಾ ಮತ್ತು ಬ್ಲಾಕ್ ಕಾಂಗ್ರೆಸ್ ಸಮಿತಿಗಳನ್ನು ಪುನಾರಚನೆ ಮಾಡಿ ಯುವಕರಿಗೆ ಆದ್ಯತೆ ನೀಡಲು ಕರ್ನಾಟಕ ಕಾಂಗ್ರೆಸ್‌ ತೀರ್ಮಾನ ಕೈಗೊಂಡಿದೆ. 2019ರ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಸಮಿತಿಗಳನ್ನು ಪುನರ್‌ ರಚನೆ ಮಾಡಲಾಗುತ್ತಿದೆ.

ಬೆಂಗಳೂರಿನಲ್ಲಿ ಶನಿವಾರ ಕರ್ನಾಟಕ ಕಾಂಗ್ರೆಸ್ ನಾಯಕರ ಮಹತ್ವದ ಸಭೆ ನಡೆಯಿತು. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಮತ್ತು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಹಲವಾರು ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.

ಲೋಕಸಭೆ ಚುನಾವಣೆಗೆ ತಯಾರಿ ಆರಂಭಿಸಿದ ಕೆಪಿಸಿಸಿ ಅಧ್ಯಕ್ಷರುಲೋಕಸಭೆ ಚುನಾವಣೆಗೆ ತಯಾರಿ ಆರಂಭಿಸಿದ ಕೆಪಿಸಿಸಿ ಅಧ್ಯಕ್ಷರು

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಮುಂತಾದ ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದರು. 'ಕಾಂಗ್ರೆಸ್-ಜೆಡಿಎಸ್ ಒಟ್ಟಾಗಿ ಲೋಕಸಭೆ ಚುನಾವಣೆಯನ್ನು ಎದುರಿಸಬೇಕು' ಎಂದು ಒಮ್ಮತದ ನಿರ್ಧಾರವನ್ನು ಕೈಗೊಳ್ಳಲಾಯಿತು.

ಲೋಕಸಭೆ ಚುನಾವಣೆಗೆ ಯುವ ಪಡೆ ಕಟ್ಟುತ್ತಿದ್ದಾರೆ ದಿನೇಶ್ ಗುಂಡೂರಾವ್ಲೋಕಸಭೆ ಚುನಾವಣೆಗೆ ಯುವ ಪಡೆ ಕಟ್ಟುತ್ತಿದ್ದಾರೆ ದಿನೇಶ್ ಗುಂಡೂರಾವ್

ಸಭೆಯಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್, 'ಅವಧಿಗೂ ಮೊದಲೇ ಅಂದರೆ ಡಿಸೆಂಬರ್‌ನಲ್ಲಿ ಲೋಕಸಭೆ ಚುನಾವಣೆ ನಡೆಯುವ ಸಾಧ್ಯತೆ ಇದೆ. ಆದ್ದರಿಂದ, ಪಕ್ಷದ ಎಲ್ಲಾ ಕಾರ್ಯಕರ್ತರು ಸಿದ್ದರಾಗಬೇಕು. ಹೆಚ್ಚಿನ ಸ್ಥಾನಗಳನ್ನು ಗೆಲ್ಲಬೇಕು' ಎಂದು ಕರೆ ನೀಡಿದರು.

ಜಿಲ್ಲಾ ಕಾಂಗ್ರೆಸ್ ಸಮಿತಿ ಪುನಾರಚನೆ

ಜಿಲ್ಲಾ ಕಾಂಗ್ರೆಸ್ ಸಮಿತಿ ಪುನಾರಚನೆ

ಲೋಕಸಭೆ ಚುನಾವಣೆಯನ್ನು ಗಮನದಲ್ಲಿ ಇಟ್ಟುಕೊಂಡು ಜಿಲ್ಲಾ ಮತ್ತು ಬ್ಲಾಕ್ ಕಾಂಗ್ರೆಸ್ ಸಮಿತಿಗಳನ್ನು ಪುನಾರಚನೆ ಮಾಡಲಾಗುತ್ತದೆ. ಜಿಲ್ಲಾ ಸಮಿತಿಗಳು ನೀಡುವ ವರದಿಯ ಅನ್ವಯ ಪುನಾರಚನೆ ಮಾಡಿ, ಯುವಕರಿಗೆ ಆದ್ಯತೆ ನೀಡಲಾಗುತ್ತದೆ.

ಜಿಲ್ಲಾ ಸಮಿತಿಗಳಿಗೆ ವರದಿ ನೀಡುವಂತೆ ಸೂಚನೆ ನೀಡಲಾಗಿದೆ. ಆಗಸ್ಟ್‌ 15ರೊಳಗೆ ಸಮಿತಿಗಳು ವರದಿಯನ್ನು ನೀಡಲಿವೆ. ಆಗಸ್ಟ್‌ ಅಂತ್ಯದ ವೇಳೆಗೆ ಸಮಿತಿಗಳು ಪುನಾರಚನೆ ಆಗುವ ನಿರೀಕ್ಷೆ ಇದೆ.

ಡಿಸೆಂಬರ್‌ನಲ್ಲಿ ಚುನಾವಣೆ

ಡಿಸೆಂಬರ್‌ನಲ್ಲಿ ಚುನಾವಣೆ

ಸಭೆಯ ಬಳಿಕ ಮಾತನಾಡಿದ ದಿನೇಶ್ ಗುಂಡೂರಾವ್ ಅವರು, 'ಬಿಜೆಪಿ ಹಲವಾರು ಉಪ ಚುನಾವಣೆಗಳಲ್ಲಿ ಸೋಲು ಕಂಡಿದೆ. ಅವಧಿಗೂ ಮೊದಲು ಅಂದರೆ ಡಿಸೆಂಬರ್‌ನಲ್ಲಿ ಲೋಕಸಭೆ ಚುನಾವಣೆ ನಡೆಯುವ ಸಾಧ್ಯತೆ ಇದೆ' ಎಂದರು.

'ಆಗಸ್ಟ್ 3ರಂದು ಹಿರಿಯ ನಾಯಕರು ಬೆಂಗಳೂರಿನಲ್ಲಿ ಪುನಃ ಸಭೆ ನಡೆಸಲಿದ್ದೇವೆ. ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಅಭ್ಯರ್ಥಿಗಳ ಆಯ್ಕೆ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ' ಎಂದು ದಿನೇಶ್ ಗುಂಡೂರಾವ್ ಹೇಳಿದರು.

ಜಿಲ್ಲಾವಾರು ಸಮಾವೇಶಗಳು

ಜಿಲ್ಲಾವಾರು ಸಮಾವೇಶಗಳು

'ಲೋಕಸಭೆ ಚುನಾವಣೆಗೆ ಸಿದ್ಧತೆಗಳನ್ನು ನಡೆಸಲು ಜಿಲ್ಲಾ ಮಟ್ಟದಲ್ಲಿ ಪಕ್ಷದ ಸಮಾವೇಶಗಳನ್ನು ನಡೆಸಲಾಗುತ್ತದೆ. ರಾಮನಗರ, ಜಮಖಂಡಿ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುತ್ತದೆ' ಎಂದು ದಿನೇಶ್ ಗುಂಡೂರಾವ್ ಹೇಳಿದರು.

ಲೋಕಸಭೆ ಚುನಾವಣೆಗೆಗಿಂತ ಮೊದಲು ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಬರಲಿವೆ. ಅದಕ್ಕಾಗಿ ಪಕ್ಷ ತಯಾರಿ ಆರಂಭಿಸಿದೆ. ಅಭ್ಯರ್ಥಿಗಳನ್ನು ಶೀಘ್ರದಲ್ಲಿಯೇ ಅಂತಿಮಗೊಳಿಸಲು ಕಾಂಗ್ರೆಸ್ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಸರ್ಕಾರವನ್ನು ಉಳಿಸಿಕೊಳ್ಳಬೇಕು

ಸರ್ಕಾರವನ್ನು ಉಳಿಸಿಕೊಳ್ಳಬೇಕು

ಸಭೆಯಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್ ಅವರು, 'ಅನಿವಾರ್ಯ ಸಂದರ್ಭದಲ್ಲಿ ಸಮ್ಮಿಶ್ರ ಸರ್ಕಾರ ರಚನೆಗೆ ಒಪ್ಪಿಕೊಳ್ಳಬೇಕಾಯಿತು. ಮೈಸೂರು, ಮಂಡ್ಯ, ಹಾಸನದಲ್ಲಿ ನಮಗೆ ಹಿನ್ನಡೆಯಾಗಿದೆ. ಕಾರ್ಯಕರ್ತರಿಗೆ ತೊಂದರೆಯಾಗುತ್ತಿದೆ' ಎಂದರು.

'ಸಮ್ಮಿಶ್ರ ಸರ್ಕಾರವನ್ನು ಉಳಿಸಿಕೊಳ್ಳುವ ಅನಿವಾರ್ಯತೆ ಇದೆ. ಜೊತೆಗೆ ಪಕ್ಷವನ್ನು ಬಲಪಡಿಸುವ ಅಗತ್ಯವಿದೆ. ಮುಖಂಡರು ಈ ಬಗ್ಗೆ ಹೆಚ್ಚು ಗಮನ ಕೊಡಬೇಕು' ಎಂದು ಕರೆ ನೀಡಿದರು.

ಸರ್ಕಾರದ ಬಗ್ಗೆ ಬಹಿರಂಗ ಹೇಳಿಕೆ ಬೇಡ

ಸರ್ಕಾರದ ಬಗ್ಗೆ ಬಹಿರಂಗ ಹೇಳಿಕೆ ಬೇಡ

ಸಭೆಯಲ್ಲಿ ಮಾತನಾಡಿದ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು, 'ಸಮ್ಮಿಶ್ರ ಸರ್ಕಾರದ ವಿರುದ್ಧ ಯಾರೂ ಬಹಿರಂಗ ಹೇಳಿಕೆಗಳನ್ನು ನೀಡಬಾರದು. ಯಾವುದೇ ಆಕ್ಷೇಪಣೆಗಳು ಇದ್ದರೆ ಪಕ್ಷದ ವೇದಿಕೆಯಲ್ಲಿಯೇ ಚರ್ಚೆ ಮಾಡಿ. ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್ ಅವರ ಗಮನಕ್ಕೆ ತನ್ನಿ. ಬಹಿರಂಗವಾಗಿ ಮಾತನಾಡಬೇಡಿ' ಎಂದು ಖಡಕ್ ಎಚ್ಚರಿಕೆ ನೀಡಿದರು.

English summary
Congress and JD(S) agreed to fight Lok sabha elections 2019 together. Karnataka Congress decided to revamp its District Congress Committees (DCC) and Block Congress Committees in the month of August 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X