ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯ ಬಿಜೆಪಿ ಸರ್ಕಾರಕ್ಕೆ ಎದುರಾಯ್ತು ಮತ್ತೊಂದು ಸಂಕಷ್ಟ!

|
Google Oneindia Kannada News

ಬೆಂಗಳೂರು, ಡಿ. 02: ಮುಖ್ಯಮಂತ್ರಿ ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ಹಾಗೂ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಅವರ ಮೇಲೆ ಮಾಜಿ ಸಚಿವ, ವಿಧಾನ ಪರಿಷತ್ ಬಿಜೆಪಿ ಸದಸ್ಯ ಎಚ್. ವಿಶ್ವನಾಥ್ ಅವರು ಮಾಡಿದ್ದ ಗಂಭೀರ ಆರೋಪ ರಾಜಕೀಯ ಬೆಳವಣಿಗೆಗೆ ಕಾರಣವಾಗಿದೆ. ಈ ಕುರಿತು ತುರ್ತು ಸುದ್ದಿಗೋಷ್ಠಿ ನಡೆಸಿರುವ ಕಾಂಗ್ರೆಸ್ ನಾಯಕರು, ಹುಣಸೂರು ಉಪಚುನಾವಣೆ ವೇಳೆ ಬಿಜೆಪಿ ಅಭ್ಯರ್ಥಿ ಹೆಚ್.ವಿಶ್ವನಾಥ್ ಅವರಿಗೆ ಪಕ್ಷದಿಂದ ದೊಡ್ಡ ಮೊತ್ತ ನೀಡಲಾಗಿತ್ತು ಎಂಬ ವಿಚಾರವನ್ನು ಸ್ವತಃ ವಿಶ್ವನಾಥ್ ಅವರೇ ಒಪ್ಪಿಕೊಂಡಿದ್ದಾರೆ. ಅವರು ಹೇಳಿರುವ ದೊಡ್ಡ ಮೊತ್ತ ಎಂದರೆ ಎಷ್ಟು? ಅದು ಬಿಳಿ ಹಣವಾ? ಕಪ್ಪು ಹಣವಾ? ಎಂದು ಪ್ರಶ್ನೆ ಮಾಡಿದ್ದಾರೆ.

ಈ ಬಗ್ಗೆ ಹೈಕೋರ್ಟ್ ಹಾಲಿ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ರಾಜ್ಯ ಬಿಜೆಪಿ ಸರ್ಕಾರವನ್ನು ಕಾಂಗ್ರೆಸ್ ನಾಯಕರು ಆಗ್ರಹಿಸಿದ್ದಾರೆ.

ಉಪಚುನಾವಣೆ ವೇಳೆಯಲ್ಲಿ ಬಿಜೆಪಿ ಪಕ್ಷದಿಂದ ತಮಗೆ ದೊಡ್ಡ ಮೊತ್ತದ ಹಣವನ್ನು ಕಳುಹಿಸಿಕೊಡಲಾಗಿತ್ತು. ಅದನ್ನು ಸಿ.ಪಿ ಯೋಗೇಶ್ವರ್ ಹಾಗೂ ಸಿಎಂ ರಾಜಕೀಯ ಸಲಹೆಗಾರ ಸಂತೋಷ್ ಅವರು ತಲುಪಿಸದೇ ನನ್ನ ಸೋಲಿಗೆ ಸಂಚು ನಡೆಸಿದರು ಎಂಬ ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಅವರ ಹೇಳಿಕೆ ಹಿನ್ನೆಲೆಯಲ್ಲಿ ಕ್ವೀನ್ಸ್ ರಸ್ತೆಯ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಮಾಜಿ ಸಂಸದ ವಿ.ಎಸ್ ಉಗ್ರಪ್ಪ, ಮಾಜಿ ಸಚಿವ ಎಚ್.ಎಂ. ರೇವಣ್ಣ, ಮಾಜಿ ಮೇಯರ್ ರಾಮಚಂದ್ರಪ್ಪ ಅವರು ತುರ್ತು ಜಂಟಿ ಸುದ್ದಿಗೋಷ್ಠಿ ನಡೆಸಿದರು.

ಉಪ ಚುನಾವಣೆಯಲ್ಲಿ ಹಣದ ಹೊಳೆ

ಉಪ ಚುನಾವಣೆಯಲ್ಲಿ ಹಣದ ಹೊಳೆ

ಆಪರೇಷನ್ ಕಮಲದ ಪರಿಣಾಮ 17 ಶಾಸಕರ ರಾಜೀನಾಮೆ ನೀಡಿದಾಗ ಮೊಸಲಿಗೆ 15 ಕ್ಷೇತ್ರಗಳ ಉಪಚುನಾವಣೆ ನಡೆಯಿತು. ಈ ವೇಳೆ ಅವರಿಗೆ ಮಂತ್ರಿ ಸ್ಥಾನದ ಆಮೀಷದ ಜತೆಗೆ ದೊಡ್ಡ ಮೊತ್ತದ ಲಂಚದ ಹಣ ನೀಡಲಾಗಿದೆ ಎಂಬುದು ಜಗಜ್ಜಾಹೀರವಾಗಿರುವ ವಿಚಾರ. ನಾವು ಕೂಡ ಉಪಚುನಾವಣೆಯಲ್ಲಿ ಬಿಜೆಪಿ 50 ಕೋಟಿ ರುಪಾಯಿಗೂ ಹೆಚ್ಚು ಹಣ ವೆಚ್ಚ ಮಾಡಿದೆ ಚುನಾವಣೆ ವೇಳೆ ಹಣದ ಹೊಳೆ ಹರಿದಿದೆ ಎಂದು ಹೇಳಿದ್ದೆವು. ಆದರೆ ಅದನ್ನು ಬಿಜೆಪಿಯವರು ನಿರಾಕರಿಸಿದ್ದರು.

ಮಾಜಿ ಸಚಿವ ಎಚ್. ವಿಶ್ವನಾಥ್ ಅವರು ನಮಗೂ ಸ್ನೇಹಿತರೇ. ಅವರು ಒಮ್ಮೊಮ್ಮೆ ಕಟು ಸತ್ಯ ಹೇಳುತ್ತಾರೆ. ನಿನ್ನೆ ಹೇಳಿದ ಸತ್ಯಕ್ಕೆ ಅವರನ್ನು ಅಭಿನಂದಿಸುತ್ತೇನೆ. ಅವರು ತಮ್ಮ ಹೇಳಿಕೆಗೆ ಬದ್ಧರಾಗಿರುತ್ತಾರೆ ಎಂದು ಭಾವಿಸಿದ್ದೇವೆ ಎಂದು ಎಂದು ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಹೇಳಿದರು.

ರಾಜ್ಯದ ಜನತೆಗೆ ಸತ್ಯ ಹೇಳಲಿ

ರಾಜ್ಯದ ಜನತೆಗೆ ಸತ್ಯ ಹೇಳಲಿ

ನಾನು ಚುನಾವಣೆಗೆ ನಿಂತಾಗ ಪಕ್ಷದಿಂದ ಬರಬೇಕಾದ ದೊಡ್ಡ ಮೊತ್ತ ನನ್ನ ಕೈ ಸೇರಲಿಲ್ಲ. ಪಕ್ಷ ಕೊಟ್ಟ ಈ ದೊಡ್ಡ ಮೊತ್ತವನ್ನು ಸಿ.ಪಿ ಯೋಗೇಶ್ವರ್ ಹಾಗೂ ಸಂತೋಷ್ ಅವರು ನನಗೆ ತಲುಪಿಸದೇ ದುರ್ಬಳಕೆ ಮಾಡಿಕೊಂಡಿದ್ದು, ನಾನು ಚುನಾವಣೆಯಲ್ಲಿ ಸೋಲುವಂತೆ ಪಿತೂರಿ ಮಾಡಿದ್ದಾರೆ ಎಂದು ವಿಶ್ವನಾಥ್ ಅವರು ಹೇಳಿದ್ದಾರೆ. ವಿಶ್ವನಾಥ್ ಅವರ ಈ ಹೇಳಿಕೆ ತಪ್ಪೊಪ್ಪಿಗೆ ಹೇಳಿಕೆಯಾಗಿದೆ.


ಅವರು ಹೇಳಿರುವ ಈ ದೊಡ್ಡ ಮೊತ್ತ ಎಂದರೆ ಎಷ್ಟು? ಅದು 10 ಕೋಟಿಯಾ? 25 ಕೋಟಿಯಾ? ಇದನ್ನು ಸ್ಪಷ್ಟಪಡಿಸಬೇಕು. ಈ ಹಣದ ಮೂಲ ಏನು? ಈ ಹಣವನ್ನು ಯಾರಾದರೂ ದೇಣಿಗೆ ರೂಪದಲ್ಲಿ ಕೊಟ್ಟಿದ್ದಾರಾ? ಅಥವಾ ಬಿಡಿಎ ಹಗರಣದಲ್ಲಿ ಆರ್ ಟಿಜಿಎಸ್ ಮೂಲಕ ಬಂದ ಭ್ರಷ್ಟ ಹಣವನ್ನು ಕೊಟ್ಟರಾ? ಎಂಬುದನ್ನು ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಮುಖ್ಯಮಂತ್ರಿಗಳು ಜನರಿಗೆ ತಿಳಿಸಬೇಕು ಎಂದು ಮಾಜಿ ಸಚಿವ ರೇವಣ್ಣ ಆಗ್ರಹಿಸಿದರು.

ನ್ಯಾಯಾಂಗ ತನಿಖೆಗೆ ಆಗ್ರಹ

ನ್ಯಾಯಾಂಗ ತನಿಖೆಗೆ ಆಗ್ರಹ

ಈ ದೇಶದಲ್ಲಿ ಚುನಾವಣಾ ಆಯೋಗ, ಜಾರಿ ನಿರ್ದೇಶನಾಲಯ, ಆದಾಯ ತೆರಿಗೆ ಇಲಾಖೆ, ಸಿಬಿಐ ಜೀವಂತವಾಗಿದ್ದರೆ, ವಿಶ್ವನಾಥ್ ಅವರ ಹೇಳಿಕೆ ಆಧಾರದ ಮೇಲೆ ಸುಮೋಟೋ ಪ್ರಕರಣ ದಾಖಲಿಸಿಕೊಳ್ಳಬೇಕಿತ್ತು. ಆದರೆ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ.

ಈ ಇಲಾಖೆಗಳು ಸುಮೋಟೋ ಪ್ರಕರಣ ದಾಖಲಿಸಿಕೊಳ್ಳಲಿವೆ ಎಂದು ಭಾವಿಸಿದ್ದೆ. ಆದರೆ ಆ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಈ ಪ್ರಕರಣದಲ್ಲಿ ಸತ್ಯಾಸತ್ಯತೆ ಹೊರ ಬರಬೇಕಿದ್ದರೆ, ಈ ಪ್ರಕರಣವನ್ನು ಕೂಡಲೇ ಹೈಕೋರ್ಟ್‌ ಹಾಲಿ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಎಂದು ಮಾಜಿ ಸಂಸದ ಉಗ್ರಪ್ಪ ಅವರು ಆಗ್ರಹಿಸಿದರು.

ಸಿಎಂ ಕಚೇರಿ ಗುರಿಯಾಗಿಸಿ ಬೆಳವಣಿಗೆ

ಸಿಎಂ ಕಚೇರಿ ಗುರಿಯಾಗಿಸಿ ಬೆಳವಣಿಗೆ

ಕಳೆದ ಒಂದು ತಿಂಗಳ ಅವಧಿಯಿಂದ ಮುಖ್ಯಮಂತ್ರಿಗಳು ಹಾಗೂ ಅವರ ಕಚೇರಿ ಗುರಿಯಾಗಿಸಿ ಅನೇಕ ಬೆಳವಣಿಗೆಗಳು ನಡೆಯುತ್ತಿವೆ. ಬಿಜೆಪಿ ಆಂತರಿಕ ವಿಚಾರ ಬೇರೆ. ನಾವು ಅದರಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ.

ಆದರೆ, ಮೊದಲು ಸಿಎಂ ಕಾರ್ಯದರ್ಶಿ ಹಠಾತ್ ವಜಾಗೊಳ್ಳುತ್ತಾರೆ, ನಂತರ ಕೆಲ ದಿನಗಳ ಹಿಂದೆ ಮಾಧ್ಯಮ ಕಾರ್ಯದರ್ಶಿ ರಾಜೀನಾಮೆ ನೀಡುತ್ತಾರೆ. ನಂತರ ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರ ಮಾತ್ರೆ ಸೇವಿಸಿ ಆಸ್ಪತ್ರೆಗೆ ದಾಖಲಾಗುತ್ತಾರೆ. ಹಿರಿಯ ನಾಯಕ ಹೆಚ್. ವಿಶ್ವನಾಥ್ ಅವರು 'ಶಾಸಕರು ಹಾಗೂ ಮುಖ್ಯಮಂತ್ರಿಗಳ ಸಲಗೆಗಾರರು ನನಗೆ ಹಣ ತಲುಪಿಸಲಿಲ್ಲ. ಆ ಮೂಲಕ ನನ್ನ ಸೋಲಿಗೆ ಸಂಚು ನಡೆಸಿದರು. ಇನ್ನು ಹೈಕೋರ್ಟ್ ನಲ್ಲಿ ನನ್ನ ಪರ ವಾದ ಮಾಡಲು ಅಡ್ವೊಕೇಟ್ ಜನರಲ್ ಅವರು ನನಗೆ ಸರಿಯಾದ ಸಹಕಾರ ನೀಡಲಿಲ್ಲ ಎಂದು ಹೇಳಿಕೆ ಕೊಟ್ಟಿದ್ದಾರೆ.

English summary
Karnataka Pradesh Congress party has demanded a judicial inquiry into Former Minister H Vishwanath's statement. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X