ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ ಕಾಂಗ್ರೆಸ್‌ನ 14 ಮಾಜಿ ಶಾಸಕರು ಉಚ್ಛಾಟನೆ

|
Google Oneindia Kannada News

ಬೆಂಗಳೂರು, ಜುಲೈ 30 : ಕರ್ನಾಟಕ ಕಾಂಗ್ರೆಸ್ 14 ಮಾಜಿ ಶಾಸಕರನ್ನು ಪಕ್ಷದಿಂದ ಉಚ್ಛಾಟನೆ ಮಾಡಿದೆ. 2018ರ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಎಲ್ಲಾ ಶಾಸಕರನ್ನು ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿದ್ದರು.

ಮಂಗಳವಾರ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಮಾಜಿ ಶಾಸಕರನ್ನು ಉಚ್ಛಾಟನೆ ಮಾಡಿದ ಆದೇಶವನ್ನು ಬಿಡುಗಡೆ ಮಾಡಿದರು. ಎಲ್ಲಾ ಮಾಜಿ ಶಾಸಕರನ್ನು ಅನರ್ಹಗೊಳಿಸಲು ಕೆಪಿಸಿಸಿ ಎಐಸಿಸಿಗೆ ಮನವಿ ಸಲ್ಲಿಸಿತ್ತು.

ರಮೇಶ್ ಜಾರಕಿಹೊಳಿ ಮುಂದೆ 4 ಪ್ರಶ್ನೆ ಇಟ್ಟ ಅತೃಪ್ತ ಶಾಸಕರು!ರಮೇಶ್ ಜಾರಕಿಹೊಳಿ ಮುಂದೆ 4 ಪ್ರಶ್ನೆ ಇಟ್ಟ ಅತೃಪ್ತ ಶಾಸಕರು!

Karnataka Congress Expels 14 Ex MLAs

ಪಕ್ಷ ವಿರೋಧಿ ಚಟುವಟಿಕೆ ಹಿನ್ನಲೆಯಲ್ಲಿ ಎಲ್ಲಾ ಮಾಜಿ ಶಾಸಕರನ್ನು ಅನರ್ಹಗೊಳಿಸಲಾಗಿದೆ. ಈ ಮೂಲಕ ಕರ್ನಾಟಕ ಕಾಂಗ್ರೆಸ್‌ನಲ್ಲಿ ಹಲವು ದಿನಗಳಿಂದ ಉಂಟಾಗಿದ್ದ ರೆಬಲ್ ಟ್ರಬಲ್‌ಗೆ ತೆರೆ ಬಿದ್ದಿದೆ.

ರಾಜೀನಾಮೆ ಬಗ್ಗೆ ಶಾಸಕ ಶ್ರೀಮಂತ ಪಾಟೀಲ್ ಹೇಳಿದ್ದೇನು?ರಾಜೀನಾಮೆ ಬಗ್ಗೆ ಶಾಸಕ ಶ್ರೀಮಂತ ಪಾಟೀಲ್ ಹೇಳಿದ್ದೇನು?

ಉಚ್ಛಾಟನೆಗೊಂಡ ಶಾಸಕರು : ಮಹೇಶ್ ಕುಮಟಳ್ಳಿ, ಶ್ರೀಮಂತ ಪಾಟೀಲ್, ರಮೇಶ್ ಜಾರಕಿಹೊಳಿ, ಪ್ರತಾಪ್ ಗೌಡ ಪಾಟೀಲ್, ಶಿವರಾಮ್ ಹೆಬ್ಬಾರ್, ಬಿ. ಸಿ. ಪಾಟೀಲ್, ಆರ್. ಶಂಕರ್, ಆನಂದ್ ಸಿಂಗ್, ಡಾ. ಕೆ. ಸುಧಾಕರ್, ಬಿ. ಎ. ಬಸವರಾಜ್, ಎಸ್. ಟಿ. ಸೋಮಶೇಖರ್, ಮುನಿರತ್ನ, ಆರ್. ರೋಷನ್ ಬೇಗ್, ಎಂ. ಟಿ. ಬಿ. ನಾಗರಾಜ್.

ಸತೀಶ್ ಜಾರಕಿಹೊಳಿಗೆ ತಲೆಕೆಟ್ಟಿದೆ : ರಮೇಶ್ ಜಾರಕಿಹೊಳಿಸತೀಶ್ ಜಾರಕಿಹೊಳಿಗೆ ತಲೆಕೆಟ್ಟಿದೆ : ರಮೇಶ್ ಜಾರಕಿಹೊಳಿ

ಶಾಸಕ ಸ್ಥಾನಕ್ಕೆ ರಾಜೀನಾಮೆ ಜುಲೈ 6ರಂದು ರಾಜೀನಾಮೆ ನೀಡಿದ್ದ ಶಾಸಕರು ಮುಂಬೈಗೆ ಹೋಗಿದ್ದರು. ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ವಿಶ್ವಾಸಮತಯಾಚನೆ ಪ್ರಕ್ರಿಯೆಯಿಂದಲೂ ದೂರ ಉಳಿದಿದ್ದರು.

ಎಲ್ಲಾ ಶಾಸಕರನ್ನು ಅನರ್ಹಗೊಳಿಸಲು ಪಕ್ಷದ ವತಿಯಿಂದ ಸ್ಪೀಕರ್‌ಗೆ ದೂರು ನೀಡಲಾಗಿತ್ತು. ಎಲ್ಲರನ್ನೂ 15ನೇ ವಿಧಾನಸಭೆ ಅವಧಿ ಮುಗಿಯುವ ತನಕ ಚುನಾವಣಾ ಕಣಕ್ಕಿಳಿಯಂದತೆ ಸ್ಪೀಕರ್ ಅನರ್ಹಗೊಳಿಸಿ ಆದೇಶ ನೀಡಿದ್ದಾರೆ. ಈಗ ಎಲ್ಲರನ್ನೂ ಪಕ್ಷದಿಂದಲೂ ಉಚ್ಛಾಟನೆ ಮಾಡಲಾಗಿದೆ.

English summary
AICC expelled Karnataka Congress 14 Ex-MLAs for anti-party activities. All MLA's disqualified by assembly speaker K.R.Ramesh Kumar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X