Menstrual Leave: ಉದ್ಯೋಗಸ್ಥ ಮಹಿಳೆಯರಿಗೆ ಗುಡ್‌ನ್ಯೂಸ್: ವೇತನ ಸಹಿತ 'ಋತುಚಕ್ರ ರಜೆ'ಗೆ ಸಚಿವ ಸಂಪುಟ ಒಪ್ಪಿಗೆ!
ಬೆಂಗಳೂರು, ಅಕ್ಟೋಬರ್ 09: ದೇಶದಲ್ಲೇ ಇದೇ ಮೊದಲ ಬಾರಿಗೆ ಕರ್ನಾಟಕ ಸರ್ಕಾರವು ಉದ್ಯೋಗಸ್ಟ ಮಹಿಳೆಯವರಿಗೆ ಮಾಸಿಕ ಋತುಸ್ರಾವದ ರಜೆ ನೀತಿಯನ್ನು ಜಾರಿಗೆ ತರಲು ನಿರ್ಧರಿಸಿದ್ದು, ಈ ನೀತಿಯ ಅನ್ವಯ ಮಹಿಳಾ ನೌಕರರಿಗೆ ತಿಂಗಳಿಗೆ ಒಂದು ದಿನದ ವೇತನ ಸಹಿತ ರಜೆ ಸಿಗಲಿದೆ.
ಇಂದು(ಗುರುವಾರ) ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಸಿದ್ದು, ಈ ಸಭೆಯಲ್ಲಿ ಕರ್ನಾಟಕ ಸರ್ಕಾರ ಮಹಿಳೆಯರಿಗೆ ಸಿಹಿ ಸುದ್ದಿ ನೀಡಿದ್ದು, ಪ್ರತಿ ತಿಂಗಳು ಒಂದು ದಿನ ವೇತನ ಸಹಿತ ಮುಟ್ಟಿನ ರಜೆ ನೀಡುವ ಪ್ರಸ್ತಾವನೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಇನ್ನೂ ಈ ನಿರ್ಧಾರವು ಸರ್ಕಾರಿ, ಖಾಸಗಿ, ಗಾರ್ಮೆಂಟ್ಸ್ ಮತ್ತು ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಎಲ್ಲ ಮಹಿಳೆಯರಿಗೂ ಅನ್ವಯವಾಗಲಿದೆ. ವರ್ಷಕ್ಕೆ 12 ದಿನಗಳ ಈ ರಜೆಯನ್ನು ಸಂಬಳದೊಂದಿಗೆ ಪಡೆಯಬಹುದು ಎಂದು ಸಚಿವ ಸಂಪುಟ ಸಭೆಯ ಬಳಿಕ ಕಾನೂನು ಸಚಿವ ಹೆಚ್ ಕೆ ಪಾಟೀಲ್ ಹೇಳಿದರು.

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಉದ್ಯೋಗಸ್ಥ ಮಹಿಳೆಯರಿಗೆ ದೀಪಾವಳಿ ಹಬ್ಬಕ್ಕೂ ಮುನ್ನ ಸಿಹಿಸುದ್ದಿ ಕೊಟ್ಟಿದೆ. ಪ್ರತೀ ತಿಂಗಳು ವೇತನ ಸಹಿತ ಮುಟ್ಟಿನ ರಜೆ ನೀಡೋದಾಗಿ ಘೋಷಿಸಿದೆ. ಋತು ಚಕ್ರ ರಜೆ ನೀತಿ 2025 ಪ್ರಸ್ತಾವನೆಗೆ ಗುರುವಾರ ಸಂಪುಟ ಸಭೆ ಅನುಮೋದನೆ ನೀಡಿದೆ. ಇನ್ನ ಸಾರ್ವಜನಿಕ ಮತ್ತು ಖಾಸಗಿ ವಲಯದ ಎಲ್ಲ ಉದ್ಯೋಗದಾತರು ಈ ನೀತಿಯನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕಾಗುತ್ತದೆ ಎಂದು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
ರಾಜ್ಯ ಸರ್ಕಾರವು ಉದ್ಯೋಗಸ್ಥ ಮಹಿಳೆಯರಿಗೆ ಒಂದು ದಿನದ ವೇತನ ಸಹಿತ ಮುಟ್ಟಿನ ರಜೆ ನೀಡಲು ಸಂಪುಟ ಒಪ್ಪಿಗೆ ನೀಡಿದೆ. ಈ ನಿರ್ಧಾರವು ಸರ್ಕಾರಿ ಮತ್ತು ಖಾಸಗಿ ನೌಕರರು, ಗಾರ್ಮೆಂಟ್ಸ್ ಹಾಗೂ ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಅನ್ವಯವಾಗಲಿದೆ ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಹೇಳಿದರು.
ಋತು ಚಕ್ರ ರಜೆ ಕುರಿತು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಮಾತನಾಡಿ, ಋತು ಚಕ್ರ ರಜೆ ನೀಡಲು ಕ್ಯಾಬಿನೆಟ್ ನಲ್ಲಿ ಒಪ್ಪಿಗೆ ಆಗಿದೆ. ವರ್ಷದಲ್ಲಿ 12 ದಿನ ರಜೆ ಸಂಬಳ ಸಹಿತ ಕೊಡುವ ನಿಯಮ ಇದು. ತಿಂಗಳಲ್ಲಿ ಋತುಚಕ್ರವಾದಾಗ ಯಾವ ದಿನ ಬೇಕಾದ್ರು ಒಂದು ದಿನ ರಜೆ ತೆಗೆದುಕೊಳ್ಳಬಹುದು. ಕಾನೂನು ಇಲಾಖೆ ಜೊತೆ ಚರ್ಚೆ ಸೇರಿ ಅನೇಕ ಚರ್ಚೆಗಳು ಆಗಿದೆ. ಯಾವತ್ತು ರಜೆ ಬೇಕು ಅಂತ ಹೆಣ್ಣುಮಕ್ಕಳು ತೀರ್ಮಾನ ಮಾಡಿಕೊಳ್ಳಬೇಕು. ಹೆಣ್ಣು ಮಕ್ಕಳ ಪರ ನಮ್ಮ ರಾಜ್ಯ ಸರ್ಕಾರ ಈ ಮಹತ್ವದ ನಿರ್ಧಾರ ಮಾಡಿದೆ. ಕ್ಯಾಬಿನೆಟ್‌ನಲ್ಲಿ ಒಪ್ಪಿಗೆ ಆಗಿದೆ. ಆದಷ್ಟೂ ಬೇಗ ಬಿಲ್ ತಂದು ಅನುಷ್ಠಾನ ಮಾಡ್ತೀವಿ ಎಂದು ಹೇಳಿದರು.












Click it and Unblock the Notifications