Waqf Property: 'ಕಂದಾಯ ಕಾನೂನು ಕಡೆಗಣನೆ, ವಕ್ಫ್ ಕಾನೂನು ದುರ್ಬಳಕೆ'
ಹಾವೇರಿ, ಅಕ್ಟೋಬರ್ 31: ಕರ್ನಾಟಕ ರಾಜ್ಯದಲ್ಲಿ ವಕ್ಫ್ ಜಮೀನು ಕುರಿತು ಗೊಂದಲ ಮುಂದುವರಿದಿದೆ. ರಾಜ್ಯ ಸರ್ಕಾರ ಸ್ಪಷ್ಟನೆ ನೀಡಿದ ಹೊರತಾಗಿಯೂ ರೈತರಲ್ಲಿ ಆತಂಕ ಮುಂದುವರಿದಿದೆ ಎನ್ನಲಾಗಿದೆ. ಕಂದಾಯ ಕಾನೂನು ಕಡೆಗಣಿಸಿ ವಿನಾಕಾರಣ ಇಡೀ ರಾಜ್ಯದ ರೈತರ ಸಾಗುವಳಿ ಜಮೀನುಗಳನ್ನು ವಕ್ಪ್ ಆಸ್ತಿಯನ್ನಾಗಿ ಹೊರಟಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗಂಭೀರ ಆರೋಪ ಮಾಡಿದ್ದಾರೆ.
ರಾಜ್ಯ ಸರ್ಕಾರವು ರಾಜ್ಯದಲ್ಲಿ ವಕ್ಪ್ ಕಾನೂನು ದುರುಪಯೋಗ ಮಾಡುತ್ತಿದೆ. ರೈತರ ಸಾಗುವಳಿ ಜಮೀನುಗಳಿಗೆ ವಕ್ಪ್ ಆಸ್ತಿಗಳನ್ನಾಗಿ ಮಾಡಲು ಮುಂದಾಗಿದೆ. ಕೂಡಲೇ ರಾಜ್ಯ ಸರ್ಕಾರ ರೈತರಿಗೆ ನೀಡಿರುವ ನೋಟಿಸ್ ವಾಪಸ್ ಪಡೆಯಬೇಕು. ಎಲ್ಲ ದಾಖಲೆಗಳನ್ನು ಸಮಗ್ರವಾಗಿ ಪರಿಶೀಲನೆ ಮಾಡಿ ರೈತರಿಗೆ ನ್ಯಾಯ ಒದಗಿಸಿಕೊಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಜಿಲ್ಲೆಯ ಶಿಗ್ಗಾವಿಯಲ್ಲಿ ಗುರುವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಭೂಮಿ ವಿಚಾರದಲ್ಲಿ ಕಂದಾಯ ಕಾನೂನು ದಾಖಲೆಗಳೇ ಅಂತಿಮ. ಹೀಗಿದ್ದರೂ ಕಂದಾಯ ಇಲಾಖೆಯು ಕಾನೂನು ಕಡೆಗಣಿಸಲಾಗಿದೆ. ರೈತರಿಗೆ ಅನ್ಯಾಯ ಮಾಡಲಗುತ್ತಿದೆ. ಕಂದಾಯ ಕಾನೂನು ಕಡೆಗಣಿಸಿ ಅದಾಲತ್ ಪ್ರಕಾರ ಆಗಿದ್ದೇ ಅಂತಿಮ ಎಂದು ಹೇಳುತ್ತಿದ್ದಾರೆ. ಹಿಂದೆ ಇಂತ ಪ್ರಕರಣ ಆದಾಗ ಯಾರೆಲ್ಲ ನ್ಯಾಯಾಲಯಕ್ಕೆ ಹೋಗಿದ್ದಾರೆ ಅವರಿಗೆಲ್ಲ ನ್ಯಾಯ ಸಿಕ್ಕಿದೆ.
ಯಾರೋ ಒಬ್ಬರು ಅರ್ಜಿ ಹಾಕಿದರೆ ಇಡೀ ರಾಜ್ಯದ ರೈತರ ಆಸ್ತಿಗೆ ವಕ್ಪ್ ಆಸ್ತಿಯೆಂದು ರೈತರಿಗೆ ನೊಟೀಸ್ ನೀಡುವ ಮೂಲಕ ಸರ್ಕಾರದಿಂದ ಅರಾಜಕತೆ ಸೃಷ್ಟಿಸಿದೆ. ರೈತರಲ್ಲಿ ಆತಂಕ ಉಂಟು ಮಾಡಿದೆ. ಇದೊಂದು ಬೇಜವಾಬ್ದಾರಿ ಸರ್ಕಾರ ಎಂದು ಅವರು ವಾಗ್ದಾಳಿ ನಡೆಸಿದರು.
ಜನರ ಮೇಲೆ ಕಾನೂನು ಹೇರಲು ಯತ್ನ
ಗೆಜೆಟ್ ನೋಟಿಫಿಕೇಶನ್ ಆದ ಬಳಿಕ ತರಾತುರಿಯಲ್ಲಿ ಜಿಲ್ಲಾಡಳಿಗಳು ಕಾರ್ಯ ಪೃವೃತ್ತವಾಗಿವೆ ಎಂದು ದೂರಿದರು. ಜಿಲ್ಲಾಧಿಕಾರಿಗಳಿಗೆ ಕನಿಷ್ಠ ಜ್ಞಾನವಾದರೂ ಇರಬೇಕಲ್ವಾ? ಮೊದಲು ಇದರ ಬಗ್ಗೆ ಸಮಗ್ರವಾಗಿ ಪರಿಶೀಲನೆ ಆಗಬೇಕು. ಸವಣೂರು ತಾಲೂಕಿನ ಕಡಕೋಳ ಗ್ರಾಮದಲ್ಲಿ ನಡೆದ ಗಲಾಟೆಗೆ ಸರ್ಕಾರವೇ ನೇರ ಕಾರಣ. ಜನರ ಮೇಲೆ ಕಾನೂನು ಹೇರುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿ ಕಾರಿದರು.

ನೋಟಿಸ್ ವಾಪಾಸ್ ಪಡೆದಿಲ್ಲ: ಸಿಎಂ ಮಧ್ಯ ಪ್ರವೇಶಿಸಿ
ಗ್ರಾಮೀಣ ಪ್ರದೇಶದಲ್ಲಿ ಎಲ್ಲರೂ ಸೌಹಾರ್ದತೆಯಿಂದ ಜೀವನ ನಡೆಸುತ್ತಾರೆ. ಸೌಹಾರ್ದತೆ ಕಲುಕುವ ಕೆಲಸ ನಡೆದಿದೆ, ಈ ಸರ್ಕಾರ ಬಂದಾಗಿನಿಂದ ತುಷ್ಟೀಕರಣ ನಡೆದಿದೆ. ಮುಖ್ಯಮಂತ್ರಿಗಳು ರೈತರಿಗೆ ನೀಡಿರುವ ನೊಟೀಸ್ ವಾಪಸ್ ಪಡೆಯುವುದಾಗಿ ಹೇಳಿದ್ದಾರೆ. ಆದರೆ, ಇನ್ನೂ ವಾಪಸ್ ಪಡೆಯುವ ಕೆಲಸ ಆಗಿಲ್ಲ. ಸಿಎಂ ನೇರವಾಗಿ ಮದ್ಯ ಪ್ರವೇಶ ಮಾಡಿ ಸಮಸ್ಯೆ ಬಗೆಹರಿಸುಂತೆ ಅವರು ಮನವಿ ಮಾಡಿದರು.
ಈಗ ಒಂದು ಕಡೆ ಎಲ್ಲಿಯಾದರೂ ಪೂಜೆ ಮಾಡಿ ನಮ್ಮದೇ ಭೂಮಿ ಅಂದರೆ ಹೇಗೆ? ಇಲ್ಲಿಯ ಕೃಷ್ಣಾ ನಗರ ತಾಂಡಾ ವಕ್ಪ್ ಪ್ರಾಪರ್ಟಿ ಅಂತ ಮಾಡಿದ್ದಾರೆ. ಸರ್ಕಾರಕ್ಕೆ ಕನಿಷ್ಟ ತಿಳುವಳಿಕೆಯೂ ಇಲ್ಲ ಎಂದು ವಾಗ್ದಾಳಿ ನಡೆಸಿದರು.
ಸಿಎಂ ಸಿದ್ದರಾಮಯ್ಯಗೆ ಮಾಜಿ ಸಿಎಂ ಚಾಟಿ
ನಾಯಕತ್ವ ಭಪಡಿಸಿಕೊಳ್ಳಲು ಸಿಎಂ ಸಿದ್ದರಾಮಯ್ಯ ಅವರು ತುಷ್ಟೀಕರಣ ರಾಜಕೀಯ ಮಾಡುತ್ತಿದ್ದಾರಾ? ಎಂಬ ಪ್ರಶ್ನೆಗೆ ಉತ್ತರಿಸಿದರು. ಚುನಾವಣೆಗಳು ಇರಲಿ, ಇಲ್ಲದಿರಲಿ ತುಷ್ಟೀಕರಣ ನಡೆಯುತ್ತಲೇ ಇದೆ. ಈಗ ಉಪ ಚುನಾವಣೆಯಲ್ಲಿ ಲಾಭ ಪಡೆಯುವ ಯತ್ನ ಮಾಡುತ್ತಿದ್ದಾರೆ ಎಂದು ನೇರವಾಗಿ ಚಾಟಿ ಬೀಸಿದರು.
ಶಕ್ತಿ ಯೋಜನೆ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಗ್ಯಾರಂಟಿ ಯೋಜನೆಗಳು ಅವತ್ತು ಚುನಾವಣೆಗಾಗಿ ರಾಜಕೀಯ ಲಾಭಕ್ಕಾಗಿ ಮಾಡಿಲಾಗಿದ್ದೇ ವಿನಃ, ಇದಕ್ಕಾಗಿ ಪೂರ್ವ ತಯಾರಿ ಇರಲಿಲ್ಲ. ಜನಪ್ರಿಯತೆಗೆ ಮಾಡಿದ್ದಾರೆ. ಈಗ ಅವರ ಹಣಕಾಸಿ ಪರಿಸ್ಥಿತಿ ಸರಿಯುಲ್ಲ. ಅವರ ಶಾಸಕರೇ ಅವರನ್ನು ದೂರುತ್ತಿದ್ದಾರೆ. ಈಗ ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಗ್ಯಾರೆಂಟಿ ಪರಿಷ್ಕರಣೆ ಮಾಡುವುದಾಗಿ ಹೇಳುತ್ತಿದ್ದಾರೆ ಎಂದು ರಾಜ್ಯ ಸರ್ಕಾರದ ಆಡಳಿತ ವಿರುದ್ಧ ಅವರು ಅಸಮಾಧಾನ ಹೊರ ಹಾಕಿದರು.












Click it and Unblock the Notifications