ತೆಲಂಗಾಣಕ್ಕೆ ನೀರು ಬಿಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ: ಬಿಜೆಪಿಯಿಂದ ವಿರೋಧ!
ಕರ್ನಾಟಕ ಸರ್ಕಾರವು ಇದೀಗ ತೆಲಂಗಾಣ ರಾಜ್ಯಕ್ಕೆ ನೆರವು ನೀಡುವ ಮೂಲಕ ಮತ್ತೆ ವಿವಾದಕ್ಕೆ ಗುರಿಯಾಗಿದೆ. ಕರ್ನಾಟಕ ಹಾಗೂ ತೆಲಂಗಾಣ ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರದಲ್ಲಿ ಇದೆ. ಇನ್ನು ಇಂಡಿಯಾ ಮೈತ್ರಿಕೂಟ ಅಧಿಕಾರದಲ್ಲಿ ಇರುವ ರಾಜ್ಯಗಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರವು ನೆರವು ನೀಡುತ್ತಿದೆ. ಈ ಮೂಲಕ ಕನ್ನಡಿಗರು ಹಾಗೂ ಕರ್ನಾಟಕಕ್ಕೆ ಅನ್ಯಾಯ ಮಾಡಲಾಗುತ್ತಿದೆ ಎಂದು ಇದೀಗ ಬಿಜೆಪಿ ಆರೋಪಿಸಿದೆ. ಕರ್ನಾಟಕ ಸರ್ಕಾರದ ನೀರು ಬಿಡುವ ನಿರ್ಧಾರಕ್ಕೆ ತೀವ್ರ ಆಕ್ಷೇಪಣೆ ವ್ಯಕ್ತವಾಗಿದೆ. ಅದೇನು ಎನ್ನುವ ವಿವರ ಇಲ್ಲಿದೆ.
ಕರ್ನಾಟಕ ಸರ್ಕಾರವು ತೆಲಂಗಾಣ ರಾಜ್ಯಕ್ಕೆ ನೀರು ಬಿಟ್ಟಿದ್ದು. ಈ ವಿಷಯ ಇದೀಗ ವಿವಾದಕ್ಕೆ ಕಾರಣವಾಗಿದೆ. ಕರ್ನಾಟಕದಲ್ಲಿ ಬಿಸಿಲಿನ ಝಳ ಹೆಚ್ಚಳವಾಗುತ್ತಿದ್ದು. ಮುಂದಿನ ದಿನಗಳಲ್ಲಿ ನೀರಿನ ಸಮಸ್ಯೆ ಹೆಚ್ಚಳವಾಗುವ ಕರ್ನಾಟಕದಲ್ಲಿ ಆತಂಕ ಎದುರಾಗಿದೆ. ಅಲ್ಲದೆ ಕರ್ನಾಟಕದಲ್ಲಿ ಶಾಖದ ಅಲೆ ಹೆಚ್ಚಾಗುತ್ತಿದ್ದು ಮುಂದಿನ ದಿನಗಳಲ್ಲಿ ಬಿಸಿಲ ಝಳ ಹೆಚ್ಚಳವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಮುಂದಿನ ದಿನಗಳಲ್ಲಿ ರೈತರ ಬೆಳೆಗಳಿಗೆ ನೀರಿನ ಕೊರತೆ ಆಗುವ ಆತಂಕ ಇದೆ. ಈ ರೀತಿ ಇರುವಾಗಲೇ ಕರ್ನಾಟಕ ಸರ್ಕಾರವು ತೆಲಂಗಾಣ ರಾಜ್ಯಕ್ಕೆ ನೀರು ಬಿಟ್ಟಿದೆ.

ಈ ಸಂಬಂಧ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿಯು ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ. ಅಧಿಕಾರಕ್ಕೆ ಬಂದ ಆರಂಭದಲ್ಲಿ ಇಂಡಿಯಾ ಮೈತ್ರಿಕೂಟ ಮನವೊಲಿಸಲು ತಮಿಳುನಾಡು ಸರ್ಕಾರಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರವು ಕಾವೇರಿ ನೀರು ಬಿಟ್ಟು ಕನ್ನಡಿಗರಿಗೆ ದ್ರೋಹ ಬಗೆದಿತ್ತು. ಇದೀಗ ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಅವರು, ತೆಲಂಗಾಣ ಕಾಂಗ್ರೆಸ್ ಸರ್ಕಾರಕ್ಕೆ ನಾರಾಯಣಪುರ ಡ್ಯಾಂನಿಂದ ರಾತ್ರೋ ರಾತ್ರಿ ಕದ್ದು ಮುಚ್ಚಿ 1 ಟಿಎಂಸಿಗೂ ಅಧಿಕ ನೀರನ್ನು ಬಿಡುಗಡೆ ಮಾಡಿದ್ದಾರೆ ಎಂದು ಆರೋಪ ಮಾಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಕನ್ನಡಿಗರಿಗೆ ಖಾಲಿ ಚೊಂಬು ಕೊಟ್ಟು ಕೇರಳ, ತಮಿಳುನಾಡು ಹಾಗೂ ತೆಲಂಗಾಣಕ್ಕೆ ಅಕ್ಷಯಪಾತ್ರೆ ನೀಡುತ್ತಿದೆ ಎಂದು ದೂರಲಾಗಿದೆ.
ಇನ್ನು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ನಮ್ಮ ಪರಿಸ್ಥಿತಿಯನ್ನು ನೋಡಿಕೊಂಡೇ ತೆಲಂಗಾಣಕ್ಕೆ ನೀರು ಬಿಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ನೀರಾವರಿ ಸಚಿವ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.
ತೆಲಂಗಾಣಕ್ಕೆ ನೀರು ಬಿಡಲು ಮನವಿ: ಇನ್ನು ಕರ್ನಾಟಕದ ನಾರಾಯಣಪುರ (ಬಸವಸಾಗರ)ಡ್ಯಾಂನಿಂದ ತೆಲಂಗಾಣದ ಪ್ರಿಯದರ್ಶಿನಿ ಜುರಾಲಾ ಯೋಜನೆಗೆ ನೀರು ಬಿಡುವಂತೆ ಈಚೆಗೆ ಮನವಿ ಮಾಡಲಾಗಿತ್ತು. ನಾರಾಯಣಪುರ ಜಲಾಶಯದಿಂದ ಜುರಾಲಾ ಯೋಜನೆಗೆ 4 ಟಿಎಂಸಿ ನೀರು ಬಿಡುಗಡೆ ಮಾಡಲು ಕರ್ನಾಟಕ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.
ತೆಲಂಗಾಣದ ಮಹಬೂಬ್ ನಗರ ಜಿಲ್ಲೆಯ ಕಾಂಗ್ರೆಸ್ ನಾಯಕರು ಈ ಸಂಬಂಧ ಈಚೆಗೆ ಮನವಿ ಮಾಡಿದ್ದರು. ನಾರಾಯಣಪುರ ಜಲಾಶಯದಿಂದ ಜುರಾಲಾ ಯೋಜನೆಗೆ 5 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಕೆ ಮಾಡಲಾಗಿತ್ತು. ಆದರೆ 5 ಟಿಎಂಸಿ ನೀರು ಬಿಡುವ ಬದಲಾಗಿ 4 ಟಿಎಂಸಿ ನೀರು ಬಿಡುವುದಕ್ಕೆ ಒಪ್ಪಿಗೆ ಸೂಚಿಸಲಾಗಿತ್ತು.












Click it and Unblock the Notifications