ಯಡಿಯೂರಪ್ಪನವರ ಮಗನ ರಾಜ್ಯಾಧ್ಯಕ್ಷ ಹುದ್ದೆ ಕೇವಲ ಲೋಕಸಭೆ ಚುನಾವಣೆವರೆಗೆ ಮಾತ್ರ
ಬೆಂಗಳೂರು, ನವೆಂಬರ್ 11: ನೂತನವಾಗಿ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಜಿ ಮುಖ್ಯಮಂತ್ರಿ ಹಾಗೂ ಪ್ರಭಾವಿ ಲಿಂಗಾಯತ ನಾಯಕ ಬಿ ಎಸ್ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ ಅವರನ್ನ ಬಿಜೆಪಿ ಹೈಕಮಾಂಡ್ ಆಯ್ಕೆ ಮಾಡಿದೆ. ಆದರೆ, ಬಿ ವೈ ವಿಜಯೇಂದ್ರ ಅವರಿಗೆ ಹೈಕಮಾಂಡ್ ಮಣೆ ಹಾಕಿದಕ್ಕೇ ಬಿಜೆಪಿ ಹಿರಿಯ ನಾಯಕರು ಪರೋಕ್ಷವಾಗಿ ಅಸಮಾಧಾನಗೊಂಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್, ಯಡಿಯೂರಪ್ಪನವರ ಮಗನ ರಾಜ್ಯಾಧ್ಯಕ್ಷ ಹುದ್ದೆ ಕೇವಲ ಲೋಕಸಭೆ ಚುನಾವಣೆವರೆಗೆ ಮಾತ್ರ ಎಂಬ ಗುಸುಗುಸು ಪಿಸುಪಿಸು ಜಗನ್ನಾಥ ಭವನದಲ್ಲಿ ಕೇಳಿ ಬರುತ್ತಿದೆಯಂತೆ! ಇದು ಸಿ ಟಿ ರವಿ, ಬಸವನಗೌಡ ಪಾಟೀಲ್ ಯತ್ನಾಳ್, ಹಾಗೂ ಬಿ ಎಲ್ ಸಂತೋಷ್ ಅವರುಗಳು ಸಮಾಧಾನ ಮಾಡಿಕೊಳ್ಳುತ್ತಿರುವುದೋ ಅಥವಾ ನೈಜತೆ ಇದೆಯೋ ರಾಜ್ಯ ಬಿಜೆಪಿ ಸ್ಪಷ್ಟಪಡಿಸಬೇಕು ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಸಿ ಟಿ ರವಿ ಅವರೇ, ಈಗ ಯಡಿಯೂರಪ್ಪನವರ ಕಿಚನ್ ಕ್ಯಾಬಿನೆಟ್ ನಲ್ಲೇ ಎಲ್ಲವೂ ನಿರ್ಧಾರವಾಗಲಿದೆ, ಅವರ ಕಿಚನ್ ಕ್ಯಾಬಿನೆಟ್ ಗೆ ತಾವು ಹೋಗುವಿರಾ ಅಥವಾ ತಾವೂ ರಾಜಕೀಯ ನಿವೃತ್ತಿ ಪಡೆಯುವಿರಾ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ಬಸವನಗೌಡ ಪಾಟೀಲ್ ಅವರೇ, ಇದೆಂತಹಾ ತಾವು ತಮ್ಮ ಅಸ್ತಿತ್ವಕ್ಕಾಗಿ ವಿಜಯೇಂದ್ರರ ಮುಂದೆ ಕೈಕಟ್ಟಿ ತಲೆಬಾಗಿಸಿ ನಿಲ್ಲುವಿರಾ ಅಥವಾ ರಾಜಕೀಯಕ್ಕೆ ಗುಡ್ ಬೈ ಹೇಳುವಿರಾ? ಎಂದು ರಾಜ್ಯ ಕಾಂಗ್ರೆಸ್ ಪ್ರಶ್ನಿಸಿದೆ.
ಯಡಿಯೂರಪ್ಪನವರ ಮಗನ ರಾಜ್ಯಾಧ್ಯಕ್ಷ ಹುದ್ದೆ ಕೇವಲ ಲೋಕಸಭೆ ಚುನಾವಣೆವರೆಗೆ ಮಾತ್ರ ಎಂಬ ಗುಸುಗುಸು ಪಿಸುಪಿಸು ಜಗನ್ನಾಥ ಭವನದಲ್ಲಿ ಕೇಳಿ ಬರುತ್ತಿದೆಯಂತೆ!
— Karnataka Congress (@INCKarnataka) November 11, 2023
ಇದು @CTRavi_BJP @BasanagoudaBJP @blsanthosh ಅವರುಗಳು ಸಮಾಧಾನ ಮಾಡಿಕೊಳ್ಳುತ್ತಿರುವುದೋ, ಅಥವಾ ನೈಜತೆ ಇದೆಯೋ @BJP4Karnataka ಸ್ಪಷ್ಟಪಡಿಸಬೇಕು.#FamilyJanataParty
#FamilyJanataParty ಯಲ್ಲಿ ಇನ್ಮುಂದೆ ನಿವೃತ್ತಿ ಪರ್ವ ಶುರುವಾದರೂ ಆಶ್ಚರ್ಯವಿಲ್ಲ! ಯಡಿಯೂರಪ್ಪನವರ ಮಗನನ್ನು ರಾಜ್ಯಾಧ್ಯಕ್ಷನನ್ನಾಗಿ ಮಾಡುವ ಮೂಲಕ ಬಿಜೆಪಿ ಲೀಡರ್ ಲೆಸ್ ಪಕ್ಷ ಎಂಬುದನ್ನು ಮತ್ತೊಮ್ಮೆ ಸಾಬೀತು ಮಾಡಿದೆ. ದಶಕಗಳ ಕಾಲ ಪಕ್ಷದಲ್ಲಿ ದುಡಿದವರು ಹಲವರಿದ್ದರೂ "ಎಳೆ ಹುಡುಗ"ನಿಗೆ ಪಟ್ಟ ಕಟ್ಟುವ ಮೂಲಕ ಉಳಿದವರೆಲ್ಲ ಅನರ್ಹರು ಎಂಬ ಸಂದೇಶ ನೀಡಿದ್ದೇ ಅಥವಾ ಕುಟುಂಬ ರಾಜಕಾರಣಕ್ಕೆ ಮಣಿದಿದ್ದೇ ? ರಾಜ್ಯ ಬಿಜೆಪಿ ಉತ್ತರಿಸುವುದೇ? ಎಂದು ರಾಜ್ಯ ಕಾಂಗ್ರೆಸ್ ಕೇಳಿದೆ.












Click it and Unblock the Notifications