ಇದು 'ಪಾಪದ ಯಾತ್ರೆ-ಭ್ರಷ್ಟರ ಜಾತ್ರೆ': ದೋಸ್ತಿ ನಾಯಕರಿಗೆ ಕಾಂಗ್ರೆಸ್‌ ತಿರುಗೇಟು

ಬೆಂಗಳೂರು, ಆಗಸ್ಟ್ 09: ಮುಡಾ ಹಗರಣ ಪ್ರಕರಣ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಪಕ್ಷದ ನಾಯಕರು ಬೆಂಗಳೂರು-ಮೈಸೂರು ಪಾದಯಾತ್ರೆ ಕೈಗೊಂಡಿದ್ದಾರೆ. ಇವರಿಗೆ ಟಕ್ಕರ್ ಕೊಡಲು ಸಮಾವೇಶ ನಡೆಸಿರುವ ಕಾಂಗ್ರೆಸ್ ಇದು 'ಪಾಪದ ಯಾತ್ರೆ' ಭ್ರಷ್ಟರ ಜಾತ್ರೆ' ಎಂದು ಸರಣಿ ಟ್ವೀಟ್‌ಗಳ ಮೂಲಕ ದೋಸ್ತಿ ಪಕ್ಷಗಳಿಗೆ ಕಾಲೆಳೆದಿದೆ. ಅಲ್ಲದೇ ಸಾಲು ಸಾಲು ಪ್ರಶ್ನೆಗಳನ್ನು ಮುಂದಿಟ್ಟಿದೆ.

ಮುಡಾ ಹಗರಣ, ವಾಲ್ಮೀಕಿ ಹಗರಣ ಸಂಬಂಧ ರಾಜ್ಯ ಬಿಜೆಪಿ ಸಾಲು ಸಾಲು ಆರೋಪಗಳನ್ನು ರಾಜ್ಯ ಸರ್ಕಾರದ ಮೇಲೆ ಮಾಡಿತ್ತು. ಆರ್. ಅಶೋಕ್ ಅವರು ಇತ್ತೀಚೆಗೆ ಸಿಎಂ ವಿರುದ್ಧ ಸಾಕ್ಷ್ಯಾಧಾರಗಳನ್ನು ಬಿಡುಗಡೆ ಮಾಡಿದ್ದರು. ಇದೀಗ ಅಂತಹದ್ದ ಪ್ರಶ್ನೆಗಳನ್ನು ಬಿಜೆಪಿ ಮುಂದಿಟ್ಟಿದೆ. ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯಾವಾಗುತ್ತಿದೆ ಎಂದು ಆರೋಪಿಸಿದೆ.

Karnataka Congress Hits Back with Criticized Against BJP and JDS Allegations of MUDA Scam

ಬಿಜೆಪಿಯೇತರ ರಾಜ್ಯ ಸರ್ಕಾರಗಳನ್ನು ಅಸ್ಥಿರಗೊಳಿಸಲು ಕೇಂದ್ರ ಬಿಜೆಪಿ ಸರ್ಕಾರ ಆಪರೇಷನ್ ಕಮಲ, ಶಾಸಕರ ಕುದುರೆ ವ್ಯಾಪಾರ, ಐಟಿ, ಇಡಿ ಬಳಸಿಕೊಳ್ಳುತ್ತಿದೆ. ಇದೀಗ ಹೊಸ ಶೈಲಿ ಆರಂಭಿಸಿದ್ದು, ರಾಜ್ಯಪಾಲರನ್ನು ಅಸ್ತ್ರವಾಗಿ ಕೇಂದ್ರ ಬಳಸಿಕೊಳ್ಳುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ದೋಸ್ತಿ ಪಕ್ಷಗಳ ಮೌನವೇಕೆ?

ಕಾಂಗ್ರೆಸ್ ವಿರುದ್ಧ ಮಾತನಾಡಿರುವ ಬಿಜೆಪಿ ಹಾಗೂ ಜೆಡಿಎಸ್ ನಾಯಕರು, ಬ್ಯಾಂಕ್, ಬ್ಯಾಂಕಿಂಗ್ ಸೇರಿದಂತೆ ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವ ನೇಮಕಾತಿ ಪರೀಕ್ಷೆಗಳಲ್ಲಿ ಕನ್ನಡಕ್ಕೆ ಅವಕಾಶ ವಂಚಿಸಿದ್ದರ ಬಗ್ಗೆ ಯಾಕೆ ಮೌನವೇಕೆ?

Karnataka Congress Hits Back with Criticized Against BJP and JDS Allegations of MUDA Scam

ಕೇಂದ್ರ ಸರ್ಕಾರದ ಇತ್ತೀಚೆಗೆ ಮಂಡಿಸಿದ ಬಜೆಟ್ 2024 ನಲ್ಲಿ ಕರ್ನಾಟಕಕ್ಕೆ ನಯಾಪೈಸೆ ಅನುದಾನ ಕೊಡದೇ ಅನ್ಯಾಯ ಮಾಡಿದೆ. ಈ ಕುರಿತು ಬಿಜೆಪಿ ಜೆಡಿಎಸ್ ನವರ ದನಿ ಹೊರಬರಲಿಲ್ಲ. ಇನ್ನೂ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿಯವರ ವಿರುದ್ಧ ಗಣಿ ಹಗರಣದ ತನಿಖೆಗೆ ಲೋಕಾಯುಕ್ತ ಅನುಮತಿ ಕೇಳಿದರೂ ಇದೇ ರಾಜ್ಯ ರಾಜ್ಯಪಾಲರು ಕಣ್ಮುಚ್ಚಿ ಕುಳಿತಿದ್ದೇಕೆ? ಎಂದು ಕಾಂಗ್ರೆಸ್ ಕಿಡಿ ಕಾರಿದೆ.

ಬಿಜೆಪಿ-ಜೆಡಿಎಸ್ ಅವಧಿಯಲ್ಲಿ ಭ್ರಷ್ಟಾಚಾರಗಳ ವಿರುದ್ಧ, ಎನ್ ಡಿಎ ಸರ್ಕಾರದ ಕರ್ನಾಟಕದ ವಿಚಾರದಲ್ಲಿ ಎಸಗುತ್ತಿರುವ ತಾರತಮ್ಯದ ವಿರುದ್ಧ, ರಾಜ್ಯ ಸರ್ಕಾರವನ್ನು ಬುಡಮೇಲು ಮಾಡುವ ಬಿಜೆಪಿ-ಜೆಡಿಎಸ್ ಪ್ರಯತ್ನಗಳ ವಿರುದ್ಧ ಜನಾಂದೋಲನ ಸಮಾವೇಶ ನಡೆಯುತ್ತಿದೆ ಎಂದು ಕಾಂಗ್ರೆಸ್ ತಿಳಿಸಿದೆ.

ಕಾಂಗ್ರೆಸ್ ನಾಯಕರ ಅಭಿಪ್ರಾಯದ ವಿಡಿಯೋ

ಈ ಕುರಿತು ಕಾಂಗ್ರೆಸ್ ನಾಯಕರು ತಮ್ಮ ಅಭಿಪ್ರಾಯ ಹಂಚಿಕೊಂಡ ವಿಡಿಯೋ ಹೇಳಿಕೆಯನ್ನು ಟ್ವೀಟ್ ಮಾಡಲಾಗಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಾತನಾಡಿದ್ದು, ಬಿಜೆಪಿಯವರ ಸಾಲು-ಸಾಲು ಭ್ರಷ್ಟಾಚಾರಗಳ ಕಾರಣಕ್ಕೆ ರಾಜ್ಯದ ಜನರು ಅವರನ್ನು ವಿರೋಧ ಪಕ್ಷದ ಸ್ಥಾನದಲ್ಲಿ ಕೂರಿಸಿದ್ದಾರೆ.

ಆದರೆ ಕೇಂದ್ರ ಸರ್ಕಾರ ರಾಜ್ಯಪಾಲರ ಮೂಲಕ ಪ್ರಜಾಪ್ರಭುತ್ವವನ್ನ ಕಗ್ಗೊಲೆ ಮಾಡುವಂತ ಪ್ರಯತ್ನ ಮಾಡುತ್ತಿದೆ ಎಂದು ದೂರದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಸುಳ್ಳು ಆರೋಪ ಮಾಡಲಾಗಿದೆ. ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ಇದಾಗಿದ್ದು, ಇದನ್ನು ನಾವು ಒಕ್ಕೋರಲಿನಿಂದ ಖಂಡಿಸುತ್ತೇವೆ ಎಂದರು.

ಸರ್ಕಾರ ಅಸ್ಥಿರಗೊಳಿಸಲು ಪಿತೂರಿ

ಮತ್ತೊಬ್ಬ ನಾಯಕ ಶರಣ ಪ್ರಕಾಶ್ ಪಾಟೀಲ್ ಅವರು ಮಾತನಾಡಿ, ಕೇಂದ್ರ ಬಿಜೆಪಿ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡುತ್ತಾ ಬಂದಿದೆ. ನೀರಾವರಿ ಯೋಜನೆಗಳಿಗೆ ಅನುದಾನ, 15 ನೇ ಹಣಕಾಸು ಆಯೋಗದ ಪಾಲು, ಬರಗಾಲದ ಪರಿಹಾರ ಹಣ ಬಿಡುಗಡೆ ಮಾಡುವುದರಲ್ಲಿ ರಾಜ್ಯಕ್ಕೆ ಅನ್ಯಾಯ ಮಾಡಿದೆ.

ಜನರ ಆಶೀರ್ವಾದದಿಂದ 136 ಸ್ಥಾನಗಳನ್ನು ನಮಗೆ ಕೊಟ್ಟಿದ್ದಾರೆ. ಕೊಟ್ಟ ಮಾತಿನಂತೆ 5 ಗ್ಯಾರಂಟಿ ಯೋಜನೆಗಳು ಜಾರಿ ಮಾಡಿದ್ದೇವೆ. ಇದನ್ನು ಸಹಿಸಲು ಆಗದೇ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಪಿತೂರಿ ಮಾಡುತ್ತಿದೆ ಎಂದು ಹೇಳಿದರು.

ಮೂಡಾ ಪ್ರಕರಣದಲ್ಲಿ ಮುಖ್ಯಮಂತ್ರಿಗಳ ಹೆಸರು ಇಲ್ಲದಿದ್ದರೂ ಉದ್ದೇಶಪೂರ್ವಕವಾಗಿ ಅವರ ಹೆಸರನ್ನು ಎಳೆದು ತರುತ್ತಿದ್ದಾರೆ. ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಅವರ ಪ್ರಯತ್ನ ಫಲಿಸುವುದಿಲ್ಲ ಎಂದು ಭವಿಷ್ಯ ನುಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+