ಸಂಪುಟ ಸರ್ಕಸ್: ನಟ ಶಿವರಾಜ್ ಕುಮಾರ್ ಭೇಟಿ ಮಾಡಿದ ಸುರ್ಜೇವಾಲಾ; ಮಧು ಬಂಗಾರಪ್ಪಗೆ ಸಚಿವ ಸ್ಥಾನ ಫಿಕ್ಸ್?
ಬೆಂಗಳೂರು, ಮೇ 23: ಕಾಂಗ್ರೆಸ್ ಸರ್ಕಾರ ರಚನೆಯ ಬಳಿಕ ಕಾಂಗ್ರೆಸ್ ನಾಯಕರು ಸಕ್ರಿಯರಾಗಿದ್ದು, ಮಂಗಳವಾರ ನಟ ಶಿವರಾಜ ಕುಮಾರ್ ಅವರ ನಿವಾಸಕ್ಕೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.
2023 ರ ವಿಧಾನಸಭಾ ಚುನಾವಣೆಯ ವೇಳೆ ಕಾಂಗ್ರೆಸ್ ಸೇರ್ಪಡೆಯಾಗಿದ್ದ ಗೀತಾ ಶಿವಕುಮಾರ್ ಅವರ ಜೊತೆಗೆ ನಟ ಶಿವಕುಮಾರ್ ಅವರು ಸಹ ಹಲವು ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರವನ್ನ ನಡೆಸಿದ್ರು. ಇದೀಗ ರಾಜ್ಯದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ್ದು, ಶಿವಕುಮಾರ್ ಭೇಟಿ ಮಾಡುವ ಮೂಲಕ ಧನ್ಯವಾದ ತಿಳಿಸಲು ಸುರ್ಜೆವಾಲ ಬಂದಿದ್ದು, ಉಭಯ ಕುಶಲೋಪರಿ ವಿಚಾರಿಸಿದರು.

ಇನ್ನೂ ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ ಬಳಿಯಿರುವ ಶಿವರಾಜ್ ಕುಮಾರ್ ನಿವಾಸಕ್ಕೆ ಭೇಟಿ ನೀಡಿದ ಬಗ್ಗೆ ಟ್ವೀಟ್ ಮಾಡಿರುವ ಸುರ್ಜೇವಾಲಾ, ಇಂದು ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಜ್ ಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ ಅವರಿಗೆ ಧನ್ಯವಾದಗಳನ್ನು ತಿಳಿಸಿದೆ.
ಅವರನ್ನು ಭೇಟಿ ಮಾಡಿದ್ದು ತುಂಬಾ ಖುಷಿ ಕೊಟ್ಟಿತು. ಇತ್ತೀಚೆಗಿನ ಚುನಾವಣೆಯಲ್ಲಿ ಅವರು ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವಾರು ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಿದ್ದರು. ಹಾಗಾಗಿ, ಅವರಿಗೆ ಧನ್ಯವಾದ ಅರ್ಪಿಸಲು ನಾನು ಅವರ ನಿವಾಸಕ್ಕೆ ಹೋಗಿರುವುದಾಗಿ ಹೇಳಿದ್ದಾರೆ.
Was indeed a pleasure and honour to meet with one and only Sh. Shiva Rajkumar @NimmaShivanna & Geetha Shivarajkumar at their residence.
— Randeep Singh Surjewala (@rssurjewala) May 23, 2023
Thanked one of the most popular artist and even a better human being for powering the Congress campaign and participating in the festival of… pic.twitter.com/mrkefIwfpY
ಉತ್ತಮ ಕಲಾವಿದರು ಹಾಗೂ ಮಾನವೀಯ ಮೌಲ್ಯಗಳನ್ನು ಹೊಂದಿರುವಂಥ ನಟ ಶಿವರಾಜ್ ಕುಮಾರ್ ಅವರು ಇತ್ತೀಚಿನ ಚುನಾವಣೆಯಲ್ಲಿ ಕಾಂಗ್ರೆಸ್ ಪರವಾಗಿ ಪ್ರಚಾರಕ್ಕೆ ಆಗಮಿಸುವ ಮೂಲಕ ನಮ್ಮ ಪಕ್ಷದ ಪ್ರಚಾರಕ್ಕೆ ಶಕ್ತಿ ತುಂಬಿದ್ದರು. ಅದಕ್ಕಾಗಿ ಅವರಿಗೆ ಧನ್ಯವಾದಗಳನ್ನು ಹೇಳಲು ಬಂದಿದ್ದೇನೆ ಎಂದು ಹೇಳಿದ್ದಾರೆ.
ಮಧು ಬಂಗಾರಪ್ಪ ಗೆ ಸಚಿವ ಸ್ಥಾನ ನೀಡುವ ಕುರಿತು ಚರ್ಚೆ?
ಹೌದು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದ ಬಳಿಕ ಮಂತ್ರಿ ಸ್ಥಾನಕ್ಕಾಗಿ ಹಲವು ನಾಯಕರು ಬೇಸರಗೊಂಡಿದ್ರೆ, ಇನ್ನೂ ಕೆಲವರು ಸಚಿವ ಸ್ಥಾನಕ್ಕಾಗಿ ಲಾಭಿ ನಡೆಸುತ್ತಿದ್ದಾರೆ. ಇನ್ನೂ ಸಚಿವ ಸ್ಥಾನದ ವಿಚಾರವಾಗಿ ಶಾಸಕ ಮಧು ಬಂಗಾರಪ್ಪ ಅವರು ಸಹ ಈಗಾಗಲೇ ಅಸಮಾಧಾನ ವ್ಯಕ್ತಪಡಿದ್ದಾರೆ.

ಇನ್ನೂ ಗೀತಾ ಶಿವರಾಜ್ ಕುಮಾರ್ ಹಾಗೂ ನಟ ಶಿವರಾಜ್ ಕುಮಾರ್ ಅವರನ್ನ ಸೌಹಾರ್ದಯುತವಾಗಿ ಭೇಟಿ ಮಾಡಿದ್ದರೂ, ಗೀತಾ ಶಿವರಾಜ್ ಕುಮಾರ್ ಅವರು ಶಿವಮೊಗ್ಗದ ಸೊರಬದಿಂದ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾಗಿರುವ ಮಧು ಬಂಗಾರಪ್ಪನವರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಪ್ರಸ್ತಾಪ ಮಾಡಲಾಗಿದೆ ಎನ್ನಲಾಗಿದೆ.
ಸೊರಬ ವಿಧಾನಸಭಾ ಕ್ಷೇತ್ರದಲ್ಲಿ ಸಹೋದರರ ಜಟಾಪಟಿ ಈ ಬಾರೀಯ ಚುನಾವಣೆಯಲ್ಲಿ ಜೋರಾಗಿದ್ದು, ಕುಮಾರ್ ಬಂಗಾರಪ್ಪನವರ ನಡುವೆ ಭಾರೀ ಪೈಪೋಟಿ ನಡುವೆ ಮಧು ಬಂಗಾರಪ್ಪ ಗೆಲುವು ಸಾಧಿಸಿದ್ದಾರೆ. ಇನ್ನೂ ಲೋಕಸಭಾ ಚುನಾವಣೆ ಹಿನ್ನಲೆ ಶಿವಮೊಗ್ಗ ಭಾಗಕ್ಕೆ ಒಂದು ಸಚಿವ ಸ್ಥಾನ ನೀಡುವ ಚಿಂತನೆಯನ್ನ ಹೈಕಮಾಂಡ್ ನಡೆಸಿದ್ದು, ಬಹುತೇಕ ಮಧು ಬಂಗಾರಪ್ಪ ಅವರಿಗೆ ಸಚಿವ ಸ್ಥಾನ ಒಲಿದು ಬರಲಿದೆ ಎನ್ನಲಾಗಿದೆ.
ಇನ್ನೂ ಶಿವರಾಜ್ ಕುಮಾರ್ ದಂಪತಿಗಳನ್ನ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ ಭೇಟಿ ಮಾಡಿ ಮಾತುಕತೆ ನಡೆಸಿದ್ದು, ಈ ಭೇಟಿಯ ಮೂಲಕ ಮಧು ಬಂಗಾರಪ್ಪನವರು ಸಚಿವರಾಗುವ ಹಾದಿ ಸುಗಮವಾಗಿದೆಯೇ ಎಂಬ ಮಾತುಗಳು ಕೇಳಿ ಬಂದಿದೆ.












Click it and Unblock the Notifications