ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

'ಉತ್ತರ ಕೊಡ್ರಿ ಮೋದಿಯವರೇ' ಎಂದು ಗಂಟು ಬಿದ್ದ ಸಿದ್ದರಾಮಯ್ಯ...

|
Google Oneindia Kannada News

Recommended Video

'ಉತ್ತರ ಕೊಡ್ರಿ ಮೋದಿಯವರೇ' ಎಂದು ಗಂಟು ಬಿದ್ದ ಸಿದ್ದರಾಮಯ್ಯ...| MODI | SIDDARAMAIAH | KARNATAKA

ಬೆಂಗಳೂರು, ಜನವರಿ 2: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಕರ್ನಾಟಕಕ್ಕೆ ಭೇಟಿ ನೀಡಿದ್ದಾರೆ. ಆದರೆ, ಕರ್ನಾಟಕ ಕಾಂಗ್ರೆಸ್ ಘಟಕ ಮೋದಿ ಭೇಟಿಯನ್ನು ವಿರೋಧಿಸಿ ಸರಣಿ ಟ್ವೀಟ್ ಮಾಡಿದೆ. ಇದರ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಮೋದಿ ಅವರಿಗೆ ಕರ್ನಾಟಕಕ್ಕೆ ಸಂಬಂಧಿಸಿದಂತೆ ಹಲವು ಪ್ರಶ್ನೆಗಳನ್ನು ಕೇಳಿ ಉತ್ತರ ಕೊಡಿ ಎಂದು ಟ್ವೀಟ್ಟರ್‌ನಲ್ಲಿ ಬೆನ್ನು ಬಿದ್ದಿದ್ದಾರೆ.

"ಕಾವೇರಿ ನೀರು ಹಂಚಿಕೆಯಲ್ಲಿ ಅನ್ಯಾಯ ಮಾಡಿದ್ರಿ, ಈಗ ಮಹದಾಯಿ ಯೋಜನೆಯನ್ನು ತಡೆದು ದ್ರೊಹ ಮಾಡುತ್ತಿದ್ದೀರಿ, ಚುನಾವಣಾ ಕಾಲದಲ್ಲಿ ನಿಮ್ಮ ಜಲಸಂಪನ್ಮೂಲ ಸಚಿವ ಹೇಳಿದ್ದೇನು? ಈಗ ಮಾಡಿದ್ದೇನು? ಕರ್ನಾಟಕದ ಜನರ ಬಗ್ಗೆ ನಿಮಗೆ ಯಾಕಿಷ್ಟು ದ್ವೇಷ, ಅಸೂಯೆ? ಎಂದು ಪ್ರಶ್ನಿಸಿದ್ದಾರೆ.

ಮೋದಿ ತುಮಕೂರು ರ‍್ಯಾಲಿ ಜವಾಬ್ದಾರಿಯಿಂದ ಬಿಎಸ್ವೈ ಪರಮಾಪ್ತ ದೂರ..ದೂರ.. ಮೋದಿ ತುಮಕೂರು ರ‍್ಯಾಲಿ ಜವಾಬ್ದಾರಿಯಿಂದ ಬಿಎಸ್ವೈ ಪರಮಾಪ್ತ ದೂರ..ದೂರ..

"ಕೇಂದ್ರ- ರಾಜ್ಯದಲ್ಲಿ ಒಂದೇ ಪಕ್ಷ ಅಧಿಕಾರದಲ್ಲಿದ್ದರೆ ರಾಜ್ಯದ ಭಾಗ್ಯದ ಬಾಗಿಲು ತೆರೆಯುತ್ತೆ ಎಂದು ಭಾಷಣ ಮಾಡಿದ್ರಿ, ಅಮಾಯಕ ಜನ ನಿಮ್ಮ ಮಾತು ನಂಬಿ 25 ಸ್ಥಾನ ಗೆಲ್ಲಿಸಿಕೊಟ್ಟರು. ನಮ್ಮ ಭಾಗ್ಯದ ಬಾಗಿಲು ತೆಗೆಯಲಿಲ್ಲ, ಕರ್ನಾಟಕದ ಪಾಲಿಗೆ ನಿಮ್ಮ ಕಚೇರಿ ಬಾಗಿಲು ಮುಚ್ಚಿದ್ದೀರಿ, ಯಾಕೆ?' ಎಂದು ಮತ್ತೊಂದು ಟ್ವೀಟ್ ಮಾಡಿದ್ದಾರೆ.

"ಆಪರೇಷನ್ ಕಮಲ ಮಾಡಿ ಹಿಂದಿನ ಬಾಗಿಲಿನಿಂದ ಸರ್ಕಾರ ರಚಿಸುತ್ತೀರಿ, ನೈತಿಕ ರಾಜಕಾರಣದ ಬಗ್ಗೆ ಭಾಷಣ ಮಾಡ್ತೀರಿ. ರಾಜಕೀಯ ವಿರೋಧಿಗಳ ಮೇಲೆ ಐಟಿ,ಇಡಿ,ಸಿಬಿಐ ಛೂ ಬಿಡ್ತೀರಿ, ಗಣಿಕಳ್ಳರು,ಭೂಕಳ್ಳರನ್ನು ನಿಮ್ಮ ಪಕ್ಷಕ್ಕೆ ಕರೆದು ಮುದ್ದಾಡ್ತೀರಿ. ಇದೇನಾ ನಿಮ್ಮ ''ಸ್ವಚ್ಚ ಭಾರತ್'' ?' ಎಂದು ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ.

Karnataka Congress Leader Siddaramaiah opposes PM Modi Karnataka Visit

ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಮಧ್ಯಾಹ್ನ ತುಮಕೂರಿಗೆ ಭೇಟಿ ನೀಡಿದ್ದಾರೆ. ಅಲ್ಲಿ ಲಿಂಗೈಕ್ಯ ಶಿವಕುಮಾರ ಶ್ರೀಗಳ ಗದ್ದುಗೆ ದರ್ಶನ ಪಡೆದು, ತುಮಕೂರು ವಿವಿ ಆವರಣದಲ್ಲಿ ಆಯೋಜಿಸಿರುವ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ ಯೋಜನಾದ ಫಲಾನುಭವಿಗಳ ಬೃಹತ್ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಸಂಜೆ ಡಿಆರ್‌ಡಿಓ ಸಂಸ್ಥೆಗೆ ಭೇಟಿ ನೀಡಿ ರಾಜಭವನದಲ್ಲಿ ತಂಗಲಿದ್ದಾರೆ. ನಾಳೆ ಭಾರತೀಯ ವಿಜ್ಞಾನ ಕಾಂಗ್ರೆಸ್ ಜಿಕೆವಿಕೆ ಆವರಣದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

English summary
Karnataka Congress Leader Siddaramaiah opposes PM Modi Karnataka Visit. He Questoned Modi about Karanataka issues.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X