ಅಹ್ಮದ್ ಪಟೇಲ್ ನಿಧನಕ್ಕೆ ರಾಜ್ಯ ಕಾಂಗ್ರೆಸ್ ನಾಯಕರ ಸಂತಾಪ
ಬೆಂಗಳೂರು, ನ. 25: ಎಐಸಿಸಿ ಖಜಾಂಚಿ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.
'ಅಹ್ಮದ್ ಪಟೇಲ್ ಅವರ ಅವರ ಅಗಲಿಕೆ ಸುದ್ದಿ ಆಘಾತ ತಂದಿದೆ. ಅಹ್ಮದ್ ಪಟೇಲ್ ಅವರು ಕಾಂಗ್ರೆಸ್ ಪಕ್ಷದ ಶಕ್ತಿಯಾಗಿದ್ದರು. ತಮ್ಮ ಇಡೀ ಜೀವನವನ್ನು ಪಕ್ಷಕ್ಕೆ ಮುಡಿಪಾಗಿಟ್ಟ ನಿಷ್ಠಾವಂತ ನಾಯಕರು ಅವರು ಎಂದು ಶಿವಕುಮಾರ್ ಅವರು ಸ್ಮರಿಸಿಕೊಂಡಿದ್ದಾರೆ.
ಪಕ್ಷ ಸಂಕಷ್ಟದ ಪರಿಸ್ಥಿತಿಗೆ ಸಿಲುಕಿದಾಗಲೆಲ್ಲ ಬಲವಾಗಿ ನಿಲ್ಲುತ್ತಿದ್ದವರು ಅಹ್ಮದ್ ಪಟೇಲ್ ಅವರು. ಪಕ್ಷಕ್ಕೆ ಆಧಾರ ಸ್ತಂಭದಂತಿದ್ದ ಹಿರಿಯ ನಾಯಕನ ಅಗಲಿಕೆ ಪಕ್ಷಕ್ಕೆ ಭರಿಸಲಾರದ ನಷ್ಟವಾಗಿದೆ ಎಂದು ಅವರು ದುಃಖಿಸಿದ್ದಾರೆ.

ಅಹ್ಮದ್ ಪಟೇಲ್ ಅವರ ಜತೆ ಮೊದಲಿಂದಲೂ ಉತ್ತಮ ಒಡನಾಟ ಹೊಂದಿದ್ದೆ. ಅವರು ಪಕ್ಷಕ್ಕೆ ಹಾಗೂ ವೈಯಕ್ತಿಕವಾಗಿ ನನಗೆ ಮಾರ್ಗದರ್ಶಕರಾಗಿದ್ದರು. ಅವರ ಆಲೋಚನೆ, ವಿಚಾರ, ಸಿದ್ಧಾಂತಗಳು ನಮ್ಮೆಲ್ಲರಿಗೂ ಮಾದರಿಯಾಗಿತ್ತು ಎಂದು ಶಿವಕುಮಾರ್ ಅವರು ಹೇಳಿದ್ದಾರೆ.
ಅವರ ಅಗಲಿಕೆ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬ ಸದಸ್ಯರು, ಪಕ್ಷದ ಕಾರ್ಯಕರ್ತರು ಹಾಗೂ ಅವರ ಅಭಿಮಾನಿಗಳಿಗೆ ನೀಡಲಿ. ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ' ಎಂದು ಡಿ.ಕೆ ಶಿವಕುಮಾರ್ ಅವರು ತಮ್ಮ ಶೋಕಸಂದೇಶದಲ್ಲಿ ತಿಳಿಸಿದ್ದಾರೆ.
ವಿಪಕ್ಷ ನಾಯಕ ಸಿದ್ದರಾಮಯ್ಯ ಸಂತಾಪ: ನನಗೆ ಆತ್ಮೀಯರಾಗಿದ್ದ ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ಅವರ ನಿಧನದಿಂದ ಆಘಾತಕ್ಕೀಡಾಗಿದ್ದೇನೆ. ದೀರ್ಘಕಾಲ ಸೋನಿಯಾಗಾಂಧಿ ಅವರ ರಾಜಕೀಯ ಕಾರ್ಯದರ್ಶಿಯಾಗಿದ್ದ ಪಟೇಲ್ ಪಕ್ಷಕ್ಕೆ ಆಧಾರಸ್ಥಂಭವಾಗಿದ್ದರು. ಇವರ ಸಾವು ಪಕ್ಷಕ್ಕೆ ತುಂಬಿಬಾರದ ನಷ್ಟ. ಅವರ ಕುಟುಂಬದ ದುಃಖದಲ್ಲಿ ನಾನು ಭಾಗಿಯಾಗಿದ್ದೇನೆ.
ಕಾಂಗ್ರೆಸ್ ಪಕ್ಷ ನಿಷ್ಠಾವಂತ ನಾಯಕನನ್ನು ಮತ್ತು ನಾನು ನಂಬಿಕಸ್ತ ಗೆಳೆಯನನ್ನು ಕಳೆದುಕೊಂಡಿದ್ದೇನೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. ನನ್ನ ರಾಜಕೀಯ ಬದುಕಿನ ಪ್ರಮುಖ ನಿರ್ಧಾರಕ್ಕೆ ಕಾರಣರಾಗಿದ್ದ ಪಟೇಲ್ ಅವರು ಕೊನೆಯವರೆಗೆ ನನ್ನ ಹಿತೈಷಿಯಾಗಿದ್ದವರು. ಈ ಸಾವಿನ ದುಃಖ ಮಾತುಗಳನ್ನು ಮೀರಿದ್ದು, ಹೋಗಿಬನ್ನಿ ಪಟೇಲ್‌ಜಿ ಎಂದು ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications