• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಅಹ್ಮದ್ ಪಟೇಲ್ ನಿಧನಕ್ಕೆ ರಾಜ್ಯ ಕಾಂಗ್ರೆಸ್ ನಾಯಕರ ಸಂತಾಪ

|

ಬೆಂಗಳೂರು, ನ. 25: ಎಐಸಿಸಿ ಖಜಾಂಚಿ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

'ಅಹ್ಮದ್ ಪಟೇಲ್ ಅವರ ಅವರ ಅಗಲಿಕೆ ಸುದ್ದಿ ಆಘಾತ ತಂದಿದೆ. ಅಹ್ಮದ್ ಪಟೇಲ್ ಅವರು ಕಾಂಗ್ರೆಸ್ ಪಕ್ಷದ ಶಕ್ತಿಯಾಗಿದ್ದರು. ತಮ್ಮ ಇಡೀ ಜೀವನವನ್ನು ಪಕ್ಷಕ್ಕೆ ಮುಡಿಪಾಗಿಟ್ಟ ನಿಷ್ಠಾವಂತ ನಾಯಕರು ಅವರು ಎಂದು ಶಿವಕುಮಾರ್ ಅವರು ಸ್ಮರಿಸಿಕೊಂಡಿದ್ದಾರೆ.

ಕಾಂಗ್ರೆಸ್ ಹಿರಿಯ ಮುಖಂಡ ಅಹ್ಮದ್ ಪಟೇಲ್ ವಿಧಿವಶ

ಪಕ್ಷ ಸಂಕಷ್ಟದ ಪರಿಸ್ಥಿತಿಗೆ ಸಿಲುಕಿದಾಗಲೆಲ್ಲ ಬಲವಾಗಿ ನಿಲ್ಲುತ್ತಿದ್ದವರು ಅಹ್ಮದ್ ಪಟೇಲ್ ಅವರು. ಪಕ್ಷಕ್ಕೆ ಆಧಾರ ಸ್ತಂಭದಂತಿದ್ದ ಹಿರಿಯ ನಾಯಕನ ಅಗಲಿಕೆ ಪಕ್ಷಕ್ಕೆ ಭರಿಸಲಾರದ ನಷ್ಟವಾಗಿದೆ ಎಂದು ಅವರು ದುಃಖಿಸಿದ್ದಾರೆ.

ಅಹ್ಮದ್ ಪಟೇಲ್ ಅವರ ಜತೆ ಮೊದಲಿಂದಲೂ ಉತ್ತಮ ಒಡನಾಟ ಹೊಂದಿದ್ದೆ. ಅವರು ಪಕ್ಷಕ್ಕೆ ಹಾಗೂ ವೈಯಕ್ತಿಕವಾಗಿ ನನಗೆ ಮಾರ್ಗದರ್ಶಕರಾಗಿದ್ದರು. ಅವರ ಆಲೋಚನೆ, ವಿಚಾರ, ಸಿದ್ಧಾಂತಗಳು ನಮ್ಮೆಲ್ಲರಿಗೂ ಮಾದರಿಯಾಗಿತ್ತು ಎಂದು ಶಿವಕುಮಾರ್ ಅವರು ಹೇಳಿದ್ದಾರೆ.

ಅವರ ಅಗಲಿಕೆ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬ ಸದಸ್ಯರು, ಪಕ್ಷದ ಕಾರ್ಯಕರ್ತರು ಹಾಗೂ ಅವರ ಅಭಿಮಾನಿಗಳಿಗೆ ನೀಡಲಿ. ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ' ಎಂದು ಡಿ.ಕೆ ಶಿವಕುಮಾರ್ ಅವರು ತಮ್ಮ ಶೋಕಸಂದೇಶದಲ್ಲಿ ತಿಳಿಸಿದ್ದಾರೆ.

ವಿಪಕ್ಷ ನಾಯಕ ಸಿದ್ದರಾಮಯ್ಯ ಸಂತಾಪ: ನನಗೆ ಆತ್ಮೀಯರಾಗಿದ್ದ ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ಅವರ ನಿಧನದಿಂದ ಆಘಾತಕ್ಕೀಡಾಗಿದ್ದೇನೆ. ದೀರ್ಘಕಾಲ ಸೋನಿಯಾಗಾಂಧಿ ಅವರ ರಾಜಕೀಯ ಕಾರ್ಯದರ್ಶಿಯಾಗಿದ್ದ ಪಟೇಲ್ ಪಕ್ಷಕ್ಕೆ ಆಧಾರಸ್ಥಂಭವಾಗಿದ್ದರು. ಇವರ ಸಾವು ಪಕ್ಷಕ್ಕೆ ತುಂಬಿಬಾರದ ನಷ್ಟ. ಅವರ ಕುಟುಂಬದ ದುಃಖದಲ್ಲಿ ನಾನು ಭಾಗಿಯಾಗಿದ್ದೇನೆ.

ಅಗಲಿದ ಅಹ್ಮದ್ ಪಟೇಲ್ ಸೇವೆಯನ್ನು ಸ್ಮರಿಸಿದ ಕಾಂಗ್ರೆಸ್

ಕಾಂಗ್ರೆಸ್ ಪಕ್ಷ ನಿಷ್ಠಾವಂತ ನಾಯಕನನ್ನು ಮತ್ತು ನಾನು ನಂಬಿಕಸ್ತ ಗೆಳೆಯನನ್ನು ಕಳೆದುಕೊಂಡಿದ್ದೇನೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. ನನ್ನ ರಾಜಕೀಯ ಬದುಕಿನ ಪ್ರಮುಖ ನಿರ್ಧಾರಕ್ಕೆ ಕಾರಣರಾಗಿದ್ದ ಪಟೇಲ್ ಅವರು ಕೊನೆಯವರೆಗೆ ನನ್ನ ಹಿತೈಷಿಯಾಗಿದ್ದವರು. ಈ ಸಾವಿನ ದುಃಖ ಮಾತುಗಳನ್ನು ಮೀರಿದ್ದು, ಹೋಗಿಬನ್ನಿ ಪಟೇಲ್‌ಜಿ ಎಂದು ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದಾರೆ.

English summary
Karnataka Congress leaders condole the death of ICC treasurer and senior Congress leader Ahmed Patel, Know more,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X