ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ ಕಾಂಗ್ರೆಸ್‌ ನಾಯಕರು ದೆಹಲಿಯಲ್ಲಿ, ರಾಹುಲ್ ಜೊತೆ ಸಭೆ!

|
Google Oneindia Kannada News

Recommended Video

ಕಾಂಗ್ರೆಸ್ ನಾಯಕರ ಹೇಳಿಕೆಗೆ ರಾಹುಲ್ ಗಾಂಧಿ ಅಸಮಾಧಾನ | Oneindia kannada

ಬೆಂಗಳೂರು, ಮೇ 19 : ಕರ್ನಾಟಕದ ಕಾಂಗ್ರೆಸ್ ನಾಯಕರು ದೆಹಲಿಗೆ ತೆರಳಿದ್ದಾರೆ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಕರೆದಿರುವ ಸಭೆಯಲ್ಲಿ ಪಾಲ್ಗೊಳ್ಳಲು ಹಲವು ನಾಯಕರು ತೆರಳಿದ್ದು, ಸಭೆ ಕುತೂಹಲಕ್ಕೆ ಕಾರಣವಾಗಿದೆ.

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, ಸಚಿವ ಡಿ.ಕೆ.ಶಿವಕುಮಾರ್, ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ದೆಹಲಿಯಲ್ಲಿದ್ದಾರೆ.

ಮೇ 21ಕ್ಕೆ ಮಹತ್ವದ ಸಭೆ ಕರೆದ ಎಚ್.ಡಿ.ದೇವೇಗೌಡರು!ಮೇ 21ಕ್ಕೆ ಮಹತ್ವದ ಸಭೆ ಕರೆದ ಎಚ್.ಡಿ.ದೇವೇಗೌಡರು!

ರಾಜ್ಯದ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚೆ ನಡೆಸಲು ರಾಹುಲ್ ಗಾಂಧಿ ಸಭೆ ಕರೆದಿದ್ದಾರೆ. ಮೇ 23ರಂದು ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾಗುವ ಹಿನ್ನಲೆಯಲ್ಲಿ ಈ ಸಭೆ ಕುತೂಹಲ ಮೂಡಿಸಿದೆ.

ಮೇ 21ರಂದು ಶಾಸಕರ ಸಭೆ ಕರೆದ ಬಿ.ಎಸ್.ಯಡಿಯೂರಪ್ಪಮೇ 21ರಂದು ಶಾಸಕರ ಸಭೆ ಕರೆದ ಬಿ.ಎಸ್.ಯಡಿಯೂರಪ್ಪ

ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಫಲಿತಾಂಶ, ಎರಡು ಉಪ ಚುನಾವಣೆ ಫಲಿತಾಂಶದ ಬಳಿಕ ಮೈತ್ರಿ ಸರ್ಕಾರದ ಮೇಲೆ ಆಗಬಹುದಾದ ಪರಿಣಾಮಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ. ಕಾಂಗ್ರೆಸ್ ನಾಯಕರು ಸದ್ಯದ ಪರಿಸ್ಥಿತಿ ಬಗ್ಗೆ ವಿವರಣೆ ನೀಡಲಿದ್ದಾರೆ....

ನಾನು ಜೆಡಿಎಸ್ ಬಿಡಲಿಲ್ಲ, ನನ್ನನ್ನು ಉಚ್ಛಾಟಿಸಲಾಯಿತು: ಸಿದ್ದರಾಮಯ್ಯನಾನು ಜೆಡಿಎಸ್ ಬಿಡಲಿಲ್ಲ, ನನ್ನನ್ನು ಉಚ್ಛಾಟಿಸಲಾಯಿತು: ಸಿದ್ದರಾಮಯ್ಯ

ಸಿದ್ದರಾಮಯ್ಯ ವಿರುದ್ಧ ಅಸಮಾಧಾನ

ಸಿದ್ದರಾಮಯ್ಯ ವಿರುದ್ಧ ಅಸಮಾಧಾನ

ರಾಹುಲ್ ಗಾಂಧಿ ಜೊತೆಗಿನ ಸಭೆಯಲ್ಲಿ ಸಿದ್ದರಾಮಯ್ಯ ವಿರುದ್ಧ ಜೆಡಿಎಸ್ ನಾಯಕರು ನೀಡುತ್ತಿರುವ ಹೇಳಿಕೆ, ಅಸಮಾಧಾನದ ಕುರಿತು ಚರ್ಚೆ ನಡೆಯಲಿದೆ. 'ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಲಿ' ಎಂದು ಕಾಂಗ್ರೆಸ್ ನಾಯಕರು ಬೇಡಿಕೆ ಇಡುತ್ತಿದ್ದಾರೆ. ಇದಕ್ಕೆ ಜೆಡಿಎಸ್ ನಾಯಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಎಚ್.ವಿ.ವಿಶ್ವನಾಥ್ ಹೇಳಿಕೆ

ಎಚ್.ವಿ.ವಿಶ್ವನಾಥ್ ಹೇಳಿಕೆ

ಜೆಡಿಎಸ್ ಅಧ್ಯಕ್ಷ ಎಚ್.ವಿಶ್ವನಾಥ್ ಅವರು ಸಿದ್ದರಾಮಯ್ಯ ವಿರುದ್ಧ ಅಸಮಾಧಾನಗೊಂಡಿದ್ದಾರೆ. ಶನಿವಾರ ಬೆಂಗಳೂರಿನಲ್ಲಿ ಮಾತನಾಡಿದ ಅವರು, 'ಸಿದ್ದರಾಮಯ್ಯ ಅವರು ಇಲ್ಲದ ಅಧಿಕಾರ ಚಲಾಯಿಸುತ್ತಿದ್ದಾರೆ. ಎರಡೂ ಪಕ್ಷಗಳ ಸಮನ್ವಯಕ್ಕಾಗಿ ಸಮಿತಿ ರಚಿಸಲಾಗಿದೆ. ವಿಶ್ವನಾಥ್ ಸೇರ್ಪಡೆ ಇಷ್ಟವಿಲ್ಲ ಎನ್ನುವ ಅಧಿಕಾರ ಯಾರಿಗೂ ಇಲ್ಲ. ಸಮನ್ವಯ ಸಮಿತಿ ಇರೋದು ವ್ಯಕ್ತಿಯೊಬ್ಬರ ಇಷ್ಟಕ್ಕಲ್ಲ' ಎಂದು ಹೇಳಿದ್ದರು.

ಎಚ್.ಡಿ.ಕುಮಾರಸ್ವಾಮಿ ಟ್ವೀಟ್

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್‌-ಜೆಡಿಎಸ್ ನಾಯಕರಿಗೆ ವ್ಯತಿರಿಕ್ತ ಹೇಳಿಕೆಗಳನ್ನು ನೀಡದಂತೆ ಮನವಿ ಮಾಡಿದ್ದಾರೆ. ಕೇಂದ್ರದಲ್ಲಿ ಇನ್ನೊಂದು ಹೊಸ ಸರ್ಕಾರ ರಚನೆಯಾಗುವ ಮಹತ್ತರ ಘಟ್ಟದಲ್ಲಿ ನಾವಿದ್ದೇವೆ ಎಂದು ಟ್ವೀಟ್ ಮಾಡಿದ್ದಾರೆ.

ಬಸವರಾಜ ಹೊರಟ್ಟಿ ಹೇಳಿಕೆ

ಬಸವರಾಜ ಹೊರಟ್ಟಿ ಹೇಳಿಕೆ

'ಸರ್ಕಾರ ಬೀಳುತ್ತದೆ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ. ಕಾಂಗೆಸ್‌ನವರು ಸಿದ್ದರಾಮಯ್ಯ ಸಿಎಂ ಆಗಲಿ ಎನ್ನುತ್ತಾರೆ. ಸರ್ಕಾರ ವಿಸರ್ಜನೆ ಮಾಡಿ ಚುನಾವಣೆಗೆ ಹೋಗಲಿ ಎನ್ನುವುದು ಜನಾಭಿಪ್ರಾಯವಾಗಿದೆ' ಎಂದು ಜೆಡಿಎಸ್ ನಾಯಕ, ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದ್ದಾರೆ.

ಸಭೆ ಕರೆದ ಬಿಜೆಪಿ, ಜೆಡಿಎಸ್

ಸಭೆ ಕರೆದ ಬಿಜೆಪಿ, ಜೆಡಿಎಸ್

ಮೇ 21ರಂದು ಬೆಂಗಳೂರಿನಲ್ಲಿ ಜೆಡಿಎಸ್ ಮತ್ತು ಬಿಜೆಪಿ ಶಾಸಕರ ಸಭೆ ಕರೆಯಲಾಗಿದೆ. ಎಚ್.ಡಿ.ದೇವೇಗೌಡರು ಸಚಿವರು, ಶಾಸಕರ ಸಭೆ ಕರೆದಿದ್ದಾರೆ. ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ.

English summary
KPCC president Dinesh Gundu Rao and Former CM Siddaramaiah and other Karnataka Congress leaders in Delhi to meet AICC president Rahul Gandhi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X