ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲೋಕಸಭೆ ಚುನಾವಣೆ : ಕರ್ನಾಟಕ ಕಾಂಗ್ರೆಸ್‌ ಕಾರ್ಯತಂತ್ರ ಬದಲು!

By Gururaj
|
Google Oneindia Kannada News

ಬೆಂಗಳೂರು, ಆಗಸ್ಟ್ 10 : ಲೋಕಸಭೆ ಚುನಾವಣೆಗೆ ಸಿದ್ಧತೆ ಆರಂಭಿಸಿರುವ ಕರ್ನಾಟಕ ಕಾಂಗ್ರೆಸ್ ಕಾರ್ಯತಂತ್ರದಲ್ಲಿ ಬದಲಾವಣೆ ಮಾಡಿದೆ. ಆ.13ರಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅಧಿಕೃತವಾಗಿ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವಿದೆ. ಇದನ್ನು ಉಪಯೋಗಿಸಿಕೊಂಡು ರಾಜ್ಯದಲ್ಲಿ ಹೆಚ್ಚಿನ ಸ್ಥಾನಗಳಲ್ಲಿ ಜಯಗಳಿಸಬೇಕು ಎಂಬುದು ಕಾಂಗ್ರೆಸ್ ಲೆಕ್ಕಾಚಾರ. ಅದಕ್ಕಾಗಿ 2013ರ ವಿಧಾನಸಭೆ ಚುನಾವಣೆ ಕಾರ್ಯತಂತ್ರ ಪಾಲನೆ ಮಾಡಲಾಗುತ್ತಿದೆ.

ಲೋಕಸಭೆಯಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ : ಜೆಡಿಎಸ್‌ಗೆ 6 ಸೀಟು!ಲೋಕಸಭೆಯಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ : ಜೆಡಿಎಸ್‌ಗೆ 6 ಸೀಟು!

2014ರ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್‌ 9 ಸ್ಥಾನಗಳಲ್ಲಿ ಮಾತ್ರ ಜಯಗಳಿಸಿತ್ತು. ಈ ಬಾರಿ 20+ ಕ್ಷೇತ್ರಗಳಲ್ಲಿ ಜಯಗಳಿಸಬೇಕು ಎಂಬುದು ಗುರಿಯಾಗಿದೆ. ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸುವುದಾಗಿ ಈಗಾಗಲೇ ಕಾಂಗ್ರೆಸ್ ಘೋಷಣೆ ಮಾಡಿದೆ.

ಆಕ್ರಮಣಕಾರಿ ಆಟ ಬಿಟ್ಟು, ರಕ್ಷಣಾತ್ಮಕ ಆಟಕ್ಕೆ ಏಕೆ ರಾಹುಲ್ ಇಳಿದಿದ್ದಾರೆ?ಆಕ್ರಮಣಕಾರಿ ಆಟ ಬಿಟ್ಟು, ರಕ್ಷಣಾತ್ಮಕ ಆಟಕ್ಕೆ ಏಕೆ ರಾಹುಲ್ ಇಳಿದಿದ್ದಾರೆ?

ಆಗಸ್ಟ್ 13ರಂದು ಬೀದರ್‌ನಲ್ಲಿ ಕಾಂಗ್ರೆಸ್ ಸಮಾವೇಶ ಆಯೋಜಿಸಲಾಗಿದೆ. ಎಐಸಿಸಿ ಅಧ್ಯಕ್ಷ ರಾಹಲ್ ಗಾಂಧಿ ಅವರು ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದು, 2019ರ ಲೋಕಸಭೆ ಚುನಾವಣೆಯ ಪ್ರಚಾರಕ್ಕೂ ಅಧಿಕೃತವಾದ ಚಾಲನೆ ನೀಡಲಿದ್ದಾರೆ.

ಹೈಕಮಾಂಡ್‌ನಿಂದ ಸೂಚನೆ

ಹೈಕಮಾಂಡ್‌ನಿಂದ ಸೂಚನೆ

2013ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ರಾಜ್ಯದಲ್ಲಿ ಅಧಿಕಾರ ಹಿಡಿದಿದ್ದ ಕಾಂಗ್ರೆಸ್ 2018ರ ಚುನಾವಣೆಯಲ್ಲಿ ಕೇವಲ 70 ಸ್ಥಾನಗಳಿಗೆ ತೃಪ್ತಿ ಪಟ್ಟುಕೊಂಡಿತು. ಆದ್ದರಿಂದ, ಹೈಕಮಾಂಡ್ 2019ರ ಲೋಕಸಭೆ ಕಾರ್ಯತಂತ್ರ ಬದಲಿಸುವಂತೆ ಸೂಚನೆ ನೀಡಿದೆ.

2019ರ ಲೋಕಸಭೆ ಚುನಾವಣೆ ಸಿದ್ಧತೆಯನ್ನು ಈಗ ಪಕ್ಷ ಆರಂಭಿಸುತ್ತಿದೆ. ಆದ್ದರಿಂದ, ತಕ್ಷಣದಿಂದಲೇ ಹೊಸ ಕಾರ್ಯತಂತ್ರದ ಮೂಲಕ ಕೆಲಸ ಮಾಡಲು ಸೂಚನೆ ನೀಡಿದೆ. ಕೆಪಿಸಿಸಿಗೂ ಹೊಸ ಅಧ್ಯಕ್ಷರು ನೇಮಕವಾಗಿದ್ದಾರೆ.

ಮಿರ್ಚಿ ಬಜ್ಜಿ, ಗಿರ್ಮಿಟ್ ಚಪ್ಪರಿಸಿ ತಿಂದ ರಾಹುಲ್ ಗಾಂಧಿಮಿರ್ಚಿ ಬಜ್ಜಿ, ಗಿರ್ಮಿಟ್ ಚಪ್ಪರಿಸಿ ತಿಂದ ರಾಹುಲ್ ಗಾಂಧಿ

ಸಾಮೂಹಿಕ ಜವಾವ್ದಾರಿ

ಸಾಮೂಹಿಕ ಜವಾವ್ದಾರಿ

2019ರ ಲೋಕಸಭೆ ಚುನಾವಣೆಯ ಕಾರ್ಯದಲ್ಲಿ ಎಲ್ಲಾ ನಾಯಕರು ಸಾಮೂಹಿಕವಾಗಿ ಪಾಲ್ಗೊಳ್ಳಲಿದ್ದಾರೆ. ಎಲ್ಲಾ ನಿರ್ಧಾರಗಳನ್ನು ಹಿರಿ-ಕಿರಿಯ ನಾಯಕರ ಜೊತೆ ಚರ್ಚೆ ನಡೆಸಿಯೇ ತೆಗೆದುಕೊಳ್ಳಲಾಗುತ್ತದೆ. ಹಾಲಿ ಶಾಸಕರಿಗೆ, ಸಚಿವರಿಗೆ, ಸಂಸದರಿಗೆ ತಮ್ಮ ಕ್ಷೇತ್ರದ ಜೊತೆ ಅಕ್ಕ-ಪಕ್ಕದ ಕ್ಷೇತ್ರದಲ್ಲಿಯೂ ಪಕ್ಷದ ಅಭ್ಯರ್ಥಿ ಗೆಲ್ಲಿಸಿಕೊಂಡು ಬರುವ ಹೊಣೆಗಾರಿಕೆ ನೀಡಲಾಗುತ್ತದೆ.

2103ರ ಕರ್ನಾಟಕ ವಿಧಾನಸಭೆ ಚುನವಣೆಯಲ್ಲಿ ಇದೇ ಕಾರ್ಯತಂತ್ರವನ್ನು ಅನುಸರಿಸಿ ಕಾಂಗ್ರೆಸ್ ಅಧಿಕಾರ ಹಿಡಿದಿತ್ತು. ಆದ್ದರಿಂದ, ಲೋಕಸಭೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗಳಿಸಲು ಇದೇ ತಂತ್ರ ಅನುಸರಿಸಲಾಗುತ್ತಿದೆ.

2018ರ ಕಾರ್ಯತಂತ್ರ

2018ರ ಕಾರ್ಯತಂತ್ರ

2018ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಕಾರ್ಯತಂತ್ರ ಬದಲಾವಣೆಯಾಗಿತ್ತು. ಐದು ವರ್ಷ ಅಧಿಕಾರ ನಡೆಸಿ, ಜನಪ್ರಿಯ ಯೋಜನೆಗಳನ್ನು ನೀಡಿದ್ದ ಕಾಂಗ್ರೆಸ್ ಸರ್ಕಾರ ಗೆದ್ದು ಬರುವ ವಿಶ್ವಾಸದಲ್ಲಿತ್ತು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚುನಾವಣಾ ತಂತ್ರದ ಜವಾಬ್ದಾರಿ ವಹಿಸಿಕೊಂಡಿದ್ದರು. ಆದ್ದರಿಂದ, ನಾಯಕರು ಸ್ಥಳೀಯ ಮಟ್ಟದತ್ತ ಮಾತ್ರ ಗಮನ ಹರಿಸಿದ್ದರು. ಆದ್ದರಿಂದ, ಚುನಾವಣೆಯಲ್ಲಿ ಹಿನ್ನಡೆ ಉಂಟಾಯಿತು. ಅದಕ್ಕಾಗಿ ಈಗ ಸಾಮೂಹಿಕ ನಾಯಕತ್ವದ ಕಾರ್ಯತಂತ್ರಕ್ಕೆ ಮೊರೆ ಹೋಗಲಾಗಿದೆ.

ಕಾಂಗ್ರೆಸ್-ಜೆಡಿಎಸ್ ಮೈತ್ರಿ

ಕಾಂಗ್ರೆಸ್-ಜೆಡಿಎಸ್ ಮೈತ್ರಿ

2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಿವೆ. ಸೀಟುಗಳ ಹಂಚಿಕೆ ಬಗ್ಗೆ ಇನ್ನೂ ಚರ್ಚೆ ನಡೆದಿಲ್ಲ. ಆದರೆ, ಚುನಾವಣಾ ಪೂರ್ವ ಮೈತ್ರಿ ಬಗ್ಗೆ ಘೋಷಣೆ ಮಾಡಲಾಗಿದೆ.

ಆದ್ದರಿಂದ, ಕಾಂಗ್ರೆಸ್ ಈ ಚುನಾವಣೆಯನ್ನು ಪ್ರತಿಷ್ಠೆಯ ಪ್ರಶ್ನೆಯಾಗಿ ತೆಗೆದುಕೊಂಡಿದೆ. ಕಾಂಗ್ರೆಸ್ ಆಡಳಿತದಲ್ಲಿ ಇರುವ ದೊಡ್ಡ ರಾಜ್ಯ ಕರ್ನಾಟಕ. ಇಲ್ಲಿ ಹೆಚ್ಚಿನ ಸ್ಥಾನವನ್ನು ಪಡೆದು ಕೇಂದ್ರದಲ್ಲಿ ಅಧಿಕಾರಕ್ಕೇರುವುದು ಕಾಂಗ್ರೆಸ್‌ ತಂತ್ರವಾಗಿದೆ.

2014ರ ಫಲಿತಾಂಶ

2014ರ ಫಲಿತಾಂಶ

ಕರ್ನಾಟಕದಲ್ಲಿ 28 ಲೋಕಸಭಾ ಕ್ಷೇತ್ರಗಳಿವೆ. 2014ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 9, ಬಿಜೆಪಿ 17 ಮತ್ತು ಜೆಡಿಎಸ್ 2 ಕ್ಷೇತ್ರದಲ್ಲಿ ಗೆದ್ದಿದ್ದವು. ಈ ಬಾರಿ ಕಾಂಗ್ರೆಸ್‌-ಜೆಡಿಎಸ್ ಮೈತ್ರಿ ಮಾಡಿಕೊಳ್ಳುತ್ತಿವೆ. ಬಿಜೆಪಿ ಮತ್ತು ಕಾಂಗ್ರೆಸ್ 20+ ಸ್ಥಾನಗಳಲ್ಲಿ ಗೆಲ್ಲುವ ಗುರಿಯನ್ನು ಹೊಂದಿವೆ. ಯಾರಿಗೆ ಎಷ್ಟು ಸೀಟು ಸಿಗಲಿದೆ? ಎಂದು ಕಾದು ನೋಡಬೇಕಾಗಿದೆ.

English summary
Karnataka Congress will follow mass leadership strategy in Lok Sabha Elections 2019. AICC president Rahul Gandhi will kick start the election campaign in state on August 13, 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X