ನಾಲ್ವರು ಕಾಂಗ್ರೆಸ್‌ ಶಾಸಕರನ್ನು ಅಮಾನತುಗೊಳಿಸಲು ತೀರ್ಮಾನ

ಬೆಂಗಳೂರು, ಫೆಬ್ರವರಿ 08 : ಮೈತ್ರಿ ಸರ್ಕಾರದ ವಿರುದ್ಧ ಬಂಡಾಯ ಎದ್ದಿರುವ ನಾಲ್ವರು ಶಾಸಕರನ್ನು ಕಾಂಗ್ರೆಸ್ ಅಮಾನತುಗೊಳಿಸಲಿದೆ. ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಈ ಕುರಿತು ತೀರ್ಮಾನವನ್ನು ಕೈಗೊಂಡಿದ್ದಾರೆ.

ವಿಧಾನಸೌಧದಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಶಾಸಕಾಂಗ ಪಕ್ಷದ ಸಭೆ ಶುಕ್ರವಾರ ನಡೆಯಿತು. ಅತೃಪ್ತ ಬಣದಲ್ಲಿ ಗುರುತಿಸಿಕೊಂಡಿರುವ ಶಾಸಕರು ಸಭೆಗೆ ಗೈರು ಹಾಜರಾಗಿದ್ದರು. ಸಭೆಯಲ್ಲಿ ಶಾಸಕರನ್ನು ಅಮಾನತುಗೊಳಿಸಲು ತೀರ್ಮಾನ ಕೈಗೊಳ್ಳಲಾಗಿದೆ.

Karnataka Congress may suspend 4 MLAs

ಶಾಸಕರಾದ ರಮೇಶ್ ಜಾರಕಿಹೊಳಿ (ಗೋಕಾಕ್), ಬಿ.ನಾಗೇಂದ್ರ (ಬಳ್ಳಾರಿ ಗ್ರಾಮಾಂತರ), ಮಹೇಶ್ ಕುಮಠಳ್ಳಿ (ಅಥಣಿ), ಉಮೇಶ್ ಜಾಧವ್ (ಚಿಂಚೋಳಿ) ಅವರನ್ನು ಪಕ್ಷದಿಂದ ಅಮಾನತು ಮಾಡಲು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

ಇಂದು ನಡೆದ ಶಾಸಕಾಂಗ ಪಕ್ಷದ ಸಭೆಗೆ 5 ಶಾಸಕರು ಗೈರಾಗಿದ್ದರು. ಅವರಲ್ಲಿ ನಾಲ್ವರು ಶಾಸಕರು ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಸಭೆಗೆ ಬರಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದ್ದರು. ರೋಷನ್ ಬೇಗ್ ಅವರು ದೆಹಲಿಯಲ್ಲಿದ್ದ ಕಾರಣ ಅವರು ಸಭೆಗೆ ಹಾಜರಾಗಿಲ್ಲ.

ಪಕ್ಷದ ವಿಪ್ ಉಲ್ಲಂಘನೆ ಮಾಡಿದ ಶಾಸಕರ ವಿರುದ್ಧ ಪಕ್ಷಾಂತರ ನಿಷೇಧ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗುತ್ತಿದೆ. ಕಾಯ್ದೆಯಡಿ ಪಕ್ಷದ ಆದೇಶ ಉಲ್ಲಂಘನೆ ಮಾಡಿದರೆ ಸಹಜವಾಗಿಯೇ ಶಾಸಕರು ಅನರ್ಹರಾಗುತ್ತಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+