ರಾಜ್ಯೋತ್ಸವದಂದೇ ಕಾಂಗ್ರೆಸ್ ನಾಯಕನಿಂದ ಪ್ರತ್ಯೇಕ ರಾಜ್ಯದ ಕೂಗು!
ನಿನ್ನೆ ರಾಜ್ಯಾದ್ಯಂತ ಅಖಂಡ ಕರ್ನಾಟಕದ ರಾಜ್ಯೋತ್ಸವ ಅದ್ಧೂರಿಯಾಗಿ ನೆರವೇರಿದೆ. ಇದೇ ವೇಳೆ ಕಿತ್ತೂರು ಕರ್ನಾಟಕ ಭಾಗದಿಂದ ಪ್ರತ್ಯೇಕ ರಾಜ್ಯದ ಕೂಗು ಕೇಳಿಬಂದಿದೆ. ಕಾಂಗ್ರೆಸ್ ನಾಯಕನಿಂದಲೇ ಪ್ರತ್ಯೇಕ ರಾಜ್ಯದ ವಿಚಾರ ಮುನ್ನೆಲೆಗೆ ಬಂದಿದೆ.
ಕಿತ್ತೂರು ಕರ್ನಾಟಕದ ಬಗ್ಗೆ ಅಥಣಿ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಅಸಮಾಧಾನ ಹೊರಹಾಕಿದ್ದು, ಕಲ್ಯಾಣ ಕರ್ನಾಟಕದಂತೆ ನಮಗೂ ಅನುದಾನ ಸಿಕ್ಕರೆ, ನಾವು ಪ್ರತ್ಯೇಕ ರಾಜ್ಯದ ಕೂಗು ಎತ್ತುವುದಿಲ್ಲ ಎಂದು ಸವದಿ ಪರೋಕ್ಷವಾಗಿ ಸರ್ಕಾರವನ್ನು ಎಚ್ಚರಿಸಿದ್ದಾರೆ.

ಕಿತ್ತೂರು ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ನಡುವೆ ತಾರತಮ್ಯ ನಡೆಯುತ್ತಿದೆ ಎಂಬರ್ಥದಲ್ಲಿ ಸವದಿ ಈ ರೀತಿ ಅಸಮಾಧಾನ ಹೊರಹಾಕಿದ್ದಾರೆ. ಕಲ್ಯಾಣ ಕರ್ನಾಟಕದಂತೆ ಕಿತ್ತೂರು ಕರ್ನಾಟಕ ಭಾಗಕ್ಕೂ ಐದು ಸಾವಿರ ಕೋಟಿ ರೂಪಾಯಿ ನೀಡಬೇಕು. ಅದರಂತೆ ವಿಶೇಷ ಅಭಿವೃದ್ಧಿ ಮಂಡಳಿ ರಚಿಸಬೇಕು. ಆಗ ಪ್ರತ್ಯೇಕ ರಾಜ್ಯದ ಪ್ರಶ್ನೆಯೇ ಉದ್ಭವಿಸಲ್ಲ ಎಂದು ಸವದಿ ಆಗ್ರಹಿಸಿದ್ದಾರೆ.
ಕಿತ್ತೂರು ಕರ್ನಾಟಕ ಭಾಗಕ್ಕೂ ಸರ್ಕಾರ ಆದ್ಯತೆ ಕೊಡಬೇಕು. ಕಲ್ಯಾಣ ಕರ್ನಾಟಕ ಮಂಡಳಿಗೆ ವಿಶೇಷ ಅನುದಾನ ನೀಡಿರುವುದರಿಂದ ಆ ಭಾಗದ ಜಿಲ್ಲೆಗಳಲ್ಲಿ ಅಭಿವೃದ್ಧಿಯಾಗುತ್ತಿವೆ. ಹಾಗಾಗಿ ಕಿತ್ತೂರು ಕರ್ನಾಟಕಕ್ಕೂ ಸರ್ಕಾರ ಅಭಿವೃದ್ಧಿ ಮಂಡಳಿ ರಚಿಸಬೇಕು ಎಂದು ಡಿಮ್ಯಾಂಡ್ ಮಾಡಿದ್ದಾರೆ.

ಕಿತ್ತೂರು ಕರ್ನಾಟಕಕ್ಕೆ ಅನುದಾನ ನೀಡಿದರೆ ಮಾತ್ರವೇ ಇಲ್ಲಿನ ಅಭಿವೃದ್ಧಿ ಸಾಧ್ಯ ಎಂದು ಸವದಿ ಒತ್ತಿ ಹೇಳಿದ್ದು, ಈ ಮೂಲಕ ಸರ್ಕಾರದ ಮುಂದೆ ಪ್ರತ್ಯೇಕ ರಾಜ್ಯದ ಬೇಡಿಕೆಯನ್ನು ಇಟ್ಟಿದ್ದಾರೆ ಎನ್ನಲಾಗಿದೆ.
ಸಿಎಂ ಕನ್ನಡ ಗುಣಗಾನ: ನಿನ್ನೆ ಕನ್ನಡ ರಾಜ್ಯೋತ್ಸವದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಭಾಷೆಯನ್ನು ಬೆಳೆಸಿ ಉಳಿಸಲು ಮೊದಲು ನಾವು ಕನ್ನಡಿಗರಾಗಿ, ಕನ್ನಡೇತರರಿಗೆ ಕನ್ನಡವನ್ನು ಕಲಿಸಲು ಪ್ರಯತ್ನಿಸುವ ಮೂಲಕ ಕನ್ನಡ ವಾತಾವರಣವನ್ನು ನಿರ್ಮಿಸಬೇಕು ಎಂದು ಕರೆ ನೀಡಿದರು.

ಕರ್ನಾಟಕ ರಾಜ್ಯ ಏಕೀಕರಣಗೊಂಡು 68 ವರ್ಷಗಳು ಕಳೆದಿವೆ. 1953 ರಲ್ಲಿ ಫಜಲ್ ಅಲಿ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ಪುನರ್ವಿಂಗಡನಾ ಆಯೋಗ ರಚನೆಯಾಯಿತು. ಆಯೋಗದ ವರದಿಯನ್ನು ಆಧರಿಸಿ ರಾಜ್ಯಗಳ ಭಾಷಾವಾರು ವಿಂಗಡನೆಯಾಧರಿಸಿ, 1956ರ ನವೆಂಬರ್ 1 ರಂದು ರಾಜ್ಯ ಏಕೀಕರಣಗೊಂಡು ಮೈಸೂರು ರಾಜ್ಯ ಉದಯವಾಯಿತು ಎಂದರು.
ಮಾಜಿ ಮುಖ್ಯಮಂತ್ರಿ, ದಿ.ದೇವರಾಜ ಅರಸು ಅವರ ಅವಧಿಯಲ್ಲಿ 1973ರ ನವೆಂಬರ್ 1ರಂದು ಮೈಸೂರು ರಾಜ್ಯ, ಇಡೀ ರಾಜ್ಯವನ್ನು ಪ್ರತಿನಿಧಿಸುವ ಹೆಸರಾದ ಕರ್ನಾಟಕವೆಂದು ಮರುನಾಮಕರಣಗೊಂಡಿತು. ಕರ್ನಾಟಕ ಹೆಸರು ನಾಮಕರಣಗೊಂಡು 50 ವರ್ಷಗಳು ಸಂದಿವೆ. ಈ ಸುವರ್ಣ ಸಂಭ್ರಮವನ್ನು ಬಿಜೆಪಿ ಸರ್ಕಾರ ಸಂಭ್ರಮಿಸಲಿಲ್ಲ ಎಂದು ದೂರಿದರು.
z
ಮಾತೃಭಾಷೆ ಕನ್ನಡವನ್ನು ವ್ಯವಹಾರಿಕವಾಗಿ ಬಳಸುವ ಜೊತೆಗೆ, ಇತರರೊಂದಿಗೆ ಕನ್ನಡದಲ್ಲಿಯೇ ಮಾತನಾಡುವಂತೆ ಶಪಥ ಮಾಡಬೇಕು. ಕನ್ನಡೇತರರಿಗೆ ಕನ್ನಡವನ್ನು ಕಲಿಸಲು ಪ್ರಯತ್ನಿಸಬೇಕು. ಕನ್ನಡ ರಾಜ್ಯದ ಅನ್ನ, ನೀರು, ಗಾಳಿ ಸೇವಿಸಿದ ಮೇಲೆ, ಯಾವುದೇ ಜಾತಿ, ಧರ್ಮ, ಭಾಷೆಯವರೂ ಕೂಡ ಕನ್ನಡಿಗರೇ ಆಗುತ್ತಾರೆ ಎಂದರು.
ಕನ್ನಡ ಭಾಷೆಗೆ ಎರಡು ಸಾವಿರ ಇತಿಹಾಸವಿದ್ದು, ಬಹಳ ಪ್ರಾಚೀನ ಭಾಷೆಯಾಗಿದೆ. ಆದ್ದರಿಂದ ಕನ್ನಡಕ್ಕೆ ಶಾಸ್ತ್ರೀಯ ಭಾಷೆಯ ಸ್ಥಾನಮಾನ ದೊರೆತಿದೆ. ಭಾಷೆಯನ್ನು ಬಲಿಕೊಟ್ಟು ಉದಾರಿಗಳಾಗಬಾರದು. ಭಾಷೆಯ ಬಗ್ಗೆ ದುರಾಭಿಮಾನ ಬೆಳೆಸಿಕೊಳ್ಳದೇ, ಅಭಿಮಾನಗಳಾಗಬೇಕು. ಭಾಷೆಯನ್ನು ಬೆಳೆಸಿ ಉಳಿಸಲು ಮೊದಲು ಕನ್ನಡಿಗರಾಗಬೇಕು ಎಂದರು.
ಬೇರೆ ಭಾಷೆಯನ್ನು ಕಲಿಯಬೇಡಿ ಎಂದು ಹೇಳುವುದಿಲ್ಲ. ಬೇರೆ ಭಾಷಾ ಸಂಪತ್ತನ್ನು ಬೆಳೆಸಿಕೊಳ್ಳಿ, ಆದರೆ ಕನ್ನಡದಲ್ಲಿ ಮಾತನಾಡುವುದನ್ನು ಮರೆಯಬೇಡಿ. ಮಾತೃಭಾಷೆಯಲ್ಲಿ ಶಿಕ್ಷಣ ಪಡೆಯುವುದು ಉತ್ತಮವಾದುದು ಎಂದು ಮಹಾತ್ಮಾ ಗಾಂಧೀಯವರು ಹೇಳಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಉಲ್ಲೇಖಿಸಿದರು.
-
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
12 ಕೋಟಿ ರೂ ಡ್ರಗ್ಸ್ ಜಪ್ತಿ: ಗಂಧದ ನಾಡು 'ಗಾಂಜಾ ಬೀಡು' ಮಾಡಿದ ಕಾಂಗ್ರೆಸ್ ಸರ್ಕಾರ; R ಅಶೋಕ -
ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಕಾಂಗ್ರೆಸ್ ಉಗ್ರರಿಗೆ 'ಗ್ಯಾರಂಟಿ ಭಾಗ್ಯ' ನೀಡಿದರೂ ಅಚ್ಚರಿಯಿಲ್ಲ; ವಿಜಯೇಂದ್ರ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ












Click it and Unblock the Notifications