ಆರೋಪಿಗಳಿಗೆ ಜೈಲಿನಲ್ಲಿ ಬಿರಿಯಾನಿ ಸೇವೆ ನೀಡಿದ್ದೇಕೆ ಎಂದು ಹೇಳುವರೇ?: ಕಾಂಗ್ರೆಸ್‌

ಬೆಂಗಳೂರು, ಜುಲೈ 12:ಆರೋಪಿಗಳನ್ನು ತಕ್ಷಣವೇ ಪತ್ತೆ ಹಚ್ಚಿದ ನಮ್ಮ ಪೋಲೀಸರ ಕಾರ್ಯಕ್ಷಮತೆ ಶ್ಲಾಘನೀಯ. ಹೆಣ ಕಂಡೊಡನೆ ಹಾರಿ ಬರುವ ಬಿಜೆಪಿಗರಿಗೆ ತಮ್ಮ ಆಡಳಿತದಲ್ಲಿ ನಡೆದ ಹತ್ಯೆಗಳೆಷ್ಟು? ಎಂದು ರಾಜ್ಯ ಕಾಂಗ್ರೆಸ್‌ ಟ್ವೀಟರ್‌ ಮೂಲಕ ಪ್ರಶ್ನಿಸಿದೆ.

ಈ ಕುರಿತು ಟ್ವೀಟ್‌ ಮಾಡಿರುವ ಕಾಂಗ್ರೆಸ್‌, ಆರೋಪಿಗಳಿಗೆ ಜೈಲಿನಲ್ಲಿ ಬಿರಿಯಾನಿ ಸೇವೆ ನೀಡಿದ್ದೇಕೆ ಎಂದು ಹೇಳುವರೇ? ಬಿಜೆಪಿ ತಿರುಗೇಟು ನೀಡಿದೆ. ಇನ್ನೂ ಜೈನಮುನಿ ಹತ್ಯೆಯ ಪ್ರಕರಣ - 24 ಗಂಟೆಯೊಳಗೆ ಆರೋಪಿಗಳ ಬಂಧನವಾಗಿದೆ. ಈ ಕೊಲೆಗೆ ಕಾರಣ ಹಣದ ವ್ಯವಹಾರ ಎಂದು ಟ್ವೀಟ್‌ ಮೂಲಕ ಹೇಳಿದೆ.

Congress Against BJP

ಇನ್ನೂ ವೇಣುಗೋಪಾಲ್ ಹತ್ಯೆಯ ಪ್ರಕರಣವನ್ನ 24 ಗಂಟೆಯೊಳಗೆ ಆರೋಪಿಗಳ ಬಂಧನವಾಗಿದೆ. ಈ ಕೊಲೆಗೆ ಕಾರಣ ವೈಯಕ್ತಿಕ ದ್ವೇಷವಾಗಿದೆ. ಬೆಂಗಳೂರಿನ ಜೋಡಿ ಕೊಲೆ ಪ್ರಕರಣ - 24 ಗಂಟೆಯೊಳಗೆ ಆರೋಪಿಗಳ ಬಂಧನವಾಗಿದ್ದು, ಈ ಜೋಡಿ ಕೊಲೆಗೆ ವೈಯಕ್ತಿಕ ದ್ವೇಷ ಕಾರಣ ಎಂದು ಕಾಂಗ್ರೆಸ್‌ ತಿಳಿಸಿದ್ದು, ಆರೋಪಿಗಳನ್ನು ತಕ್ಷಣವೇ ಪತ್ತೆ ಹಚ್ಚಿದ ನಮ್ಮ ಪೋಲೀಸರ ಕಾರ್ಯಕ್ಷಮತೆ ಶ್ಲಾಘನೀಯ ಎಂದು ಹೇಳಿದೆ.

ಈ ದೇಶದಲ್ಲಿ ಭ್ರಷ್ಟಾಚಾರವನ್ನು ಯಾರೊಬ್ಬರೂ ಪ್ರಶ್ನಿಸಬಾರದು

ಇನ್ನೂ ಕೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿರುವ ರಾಜ್ಯ ಕಾಂಗ್ರೆಸ್‌, ಅದಾನಿ ಹಗರಣವನ್ನು ಪ್ರಶ್ನಿಸಿದ ಒಂದೇ ಕಾರಣಕ್ಕೆ ರಾಹುಲ್‌ ಗಾಂಧಿ ಅವರನ್ನ ಅನರ್ಹಗೊಳಿಸಲು ಷಡ್ಯಂತ್ರ ರೂಪಿಸಿದ ಕೇಂದ್ರ ಸರ್ಕಾರ ಅಕ್ಷರಶಃ ದ್ವೇಷ ರಾಜಕಾರಣದ ಪರಮಾವಧಿಗೆ ತಲುಪಿದೆ.ಈ ದೇಶದಲ್ಲಿ ಭ್ರಷ್ಟಾಚಾರವನ್ನು ಯಾರೊಬ್ಬರೂ ಪ್ರಶ್ನಿಸಬಾರದು ಎನ್ನುವುದೇ ಸರ್ವಾಧಿಕಾರಿಯ ಉದ್ದೇಶವೇ? ಎಂದು ಪ್ರಶ್ನಿಸಿದೆ.

ಭಾರತವನ್ನು ವಿಭಜಿಸಿ ಆಳುವವರಿಗೆ ಭಾರತವನ್ನು ಜೋಡಿಸುವ ನಾಯಕನನ್ನು, ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯನ್ನು ಹಂಚಲು ಹೊರಟ ನಾಯಕನನ್ನು ಹೇಗೆ ಸಹಿಸಬಲ್ಲರು? ದ್ವೇಷದ ವ್ಯಾಪಾರಿಗಳಿಗೆ ರಾಹುಲ್ ಗಾಂಧಿ ನುಂಗಲಾರದ ತುತ್ತಾಗಿದ್ದಾರೆ, ಈ ಕಾರಣಕ್ಕಾಗಿಯೇ ಅನರ್ಹತೆ ಎಂಬ ಅಸ್ತ್ರ ಪ್ರಯೋಗಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+