ವಿರೋಧ ಪಕ್ಷದ ನಾಯಕನ ಹುದ್ದೆಗೆ ಇನ್ನೂ ಯಾರೊಬ್ಬರೂ ಬಿಡ್ ಸಲ್ಲಿಸಿಲ್ಲವೇ? : ಕಾಂಗ್ರೆಸ್ ಪ್ರಶ್ನೆ
ಬೆಂಗಳೂರು,ಸೆಪ್ಟೆಂಬರ್ 12: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಉದ್ಯಮಿಯೊಬ್ಬರಿಗೆ ಟಿಕೆಟ್ ಕೊಡಿಸುವ ಭರವಸೆ ನೀಡ ಕೋಟ್ಯಾಂತರ ರೂಪಾಯಿ ವಂಚನೆ ಕುರಿತು ಕಾಂಗ್ರೆಸ್ ಟ್ವೀಟ್ ಮೂಲಕ ರಾಜ್ಯ ಬಿಜೆಪಿ ಕಿಡಿಕಾರಿದೆ.
ಬಿಜೆಪಿಯಲ್ಲಿ ಎಲ್ಲವನ್ನೂ ಮಾರಾಟಕ್ಕೆ ಇಡಲಾಗಿದೆಯೇ?
— Karnataka Congress (@INCKarnataka) September 13, 2023
ಸಿಎಂ ಹುದ್ದೆಗೆ 2,500 ಕೋಟಿ,
ಮಂತ್ರಿಗಿರಿಗೆ 70 - 80 ಕೋಟಿ,
MLA ಟಿಕೆಟ್ ಗೆ 7 ಕೋಟಿ!!
ಇದೆಲ್ಲವೂ ಬಿಜೆಪಿಯವರಿಂದಲೇ ಬಯಲಾದ ಸತ್ಯಗಳು.
ಯತ್ನಾಳ್ ಆಣೆಗೂ ಇದನ್ನು ನಾವು ಹೇಳಿದ್ದಲ್ಲ!
ಈ ಮಾರಾಟದ ಆಟದಲ್ಲಿ “ವಿರೋಧ ಪಕ್ಷದ ನಾಯಕ”ನ ಹುದ್ದೆಗೆ ಇನ್ನೂ ಯಾರೊಬ್ಬರೂ ಬಿಡ್ ಸಲ್ಲಿಸಿಲ್ಲವೇ…
ಈ ಕುರಿತು ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡಿದ್ದು, ಬಿಜೆಪಿಯಲ್ಲಿ ಎಲ್ಲವನ್ನೂ ಮಾರಾಟಕ್ಕೆ ಇಡಲಾಗಿದೆಯೇ? ಎಂದು ಪ್ರಶ್ನಿಸಿದ್ದಾರೆ. ಸಿಎಂ ಹುದ್ದೆಗೆ 2,500 ಕೋಟಿ, ಮಂತ್ರಿಗಿರಿಗೆ 70 - 80 ಕೋಟಿ ಹಾಗೂ MLA ಟಿಕೆಟ್ ಗೆ 7 ಕೋಟಿ!! ಇದೆಲ್ಲವೂ ಬಿಜೆಪಿಯವರಿಂದಲೇ ಬಯಲಾದ ಸತ್ಯಗಳು. ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಆಣೆಗೂ ಇದನ್ನು ನಾವು ಹೇಳಿದ್ದಲ್ಲ! ಎಂದು ವ್ಯಂಗ್ಯವಾಡಿದ್ದಾರೆ. ಈ ಮಾರಾಟದ ಆಟದಲ್ಲಿ "ವಿರೋಧ ಪಕ್ಷದ ನಾಯಕ"ನ ಹುದ್ದೆಗೆ ಇನ್ನೂ ಯಾರೊಬ್ಬರೂ ಬಿಡ್ ಸಲ್ಲಿಸಿಲ್ಲವೇ ಎಂದು ರಾಜ್ಯ ಬಿಜೆಪಿಯನ್ನ ಕಾಂಗ್ರೆಸ್ ಟ್ವೀಟ್ ಮೂಲಕ ಪ್ರಶ್ನಿಸಿದ್ದಾರೆ.

ಬಿಜೆಪಿಯಲ್ಲಿ ಸಿಎಂ ಹುದ್ದೆಗೆ 2,500 ಕೋಟಿ ನೀಡಬೇಕು ಎಂಬ ಸತ್ಯ ಬಹಿರಂಗಪಡಿಸಿದ್ದ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಬಿಜೆಪಿ ಟಿಕೆಟ್ ಗೆ 7 ಕೋಟಿ ಕೊಡಬೇಕು ಎಂದು ವಂಚಿಸಿದ ಆರೋಪಿಯೊಂದಿಗೆ. ಸ್ಯಾಂಟ್ರೋ ರವಿಯೂ ಬಿಜೆಪಿಗರಿಗೆ ಆಪ್ತ, PSI ಹಗರಣದ ಆರೋಪಿಗಳೂ ಬಿಜೆಪಿಗರಿಗೆ ಆಪ್ತರು, ರೌಡಿ ಶೀಟರ್ ಗಳೂ ಬಿಜೆಪಿಗರಿಗೆ ಆಪ್ತರು, ಟಿಕೆಟ್ ಹಗರಣದ ವಂಚಕರೂ ಬಿಜೆಪಿಗರಿಗೆ ಆಪ್ತರು. ಕಳ್ಳರು, ಸುಳ್ಳರು, ವಂಚಕರು ಕರ್ನಾಟಕ ಬಿಜೆಪಿ ನಾಯಕರಿಗೇ ಆಪ್ತವಾಗುವುದೇಕೆ? ಎಂದು ಪ್ರಶ್ನಿಸಿದೆ.
ಏನಿದು ಚೈತ್ರಾ ಕುಂದಾಪುರ ವಂಚನೆ ಪ್ರಕರಣ?
ಉದ್ಯಮಿಯೊಬ್ಬರಿಗೆ ಕಳೆದ ವಿಧಾನಸಭೆ ಚುನಾವಣೆ ವೇಳೆ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಅವರಿಂದ ಕೋಟ್ಯಂತರ ರೂಪಾಯಿ ಹಣ ಪಡೆದು ವಂಚಿಸಿರುವ ಆರೋಪ ಅವರ ವಿರುದ್ಧ ಕೇಳಿಬಂದಿದೆ. ವಂಚನೆ ಆರೋಪದಡಿ ಹಿಂದೂಪರ ಕಾರ್ಯಕರ್ತೆ ಚೈತ್ರಾ ಕುಂದಾಪುರ ಹಾಗೂ ಚೈತ್ರಾ ಟೀಮ್‌ನ 6 ಮಂದಿಯನ್ನ ಸಿಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.
ಚೈತ್ರಾ ಕುಂದಾಪುರ ಅವರು ಗೋವಿಂದಬಾಬು ಪೂಜಾರಿ ಎಂಬುವರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಕೊಡಿಸುವುದಾಗಿ ಹೇಳಿದ್ದರು. ಇದನ್ನು ನಂಬಿದ ಗೋವಿಂದಬಾಬು ಪೂಜಾರಿಯವರು ಚೈತ್ರಾ ಕುಂದಾಪುರ ಹೇಳಿದಂತೆ ಆಗಾಗ ಬೆಂಗಳೂರಿಗೆ ಬರುತ್ತಿದ್ದರು. ಇಲ್ಲಿ ಚೈತ್ರಾ ಕುಂದಾಪುರ ಕೆಲವರನ್ನು ತೋರಿಸಿ ಇವರಿಗೆ ಹೈಕಮಾಂಡ್ ನಾಯಕರ ಜೊತೆ ನಿಕಟ ಸಂಪರ್ಕವಿದ್ದು, ಇವರು ಹೇಳಿದರೆ ಟಿಕೆಟ್ ಕೊಡಿಸುತ್ತಾರೆ ಎಂದು ಮಾತಿನ ಮೂಲಕ ಮರುಳು ಮಾಡಿದ್ದರು. ಇದನ್ನು ನಂಬಿದ ಗೋವಿಂದಬಾಬು ಪೂಜಾರಿ ಅವರು ಟಿಕೆಟ್ ಸಿಗತ್ತೆ ಅನ್ನುವ ಆಸೆಗೆ ಕೇಳಿದಷ್ಟು ಹಣ ಕೊಡುತ್ತಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.












Click it and Unblock the Notifications