ಕರ್ನಾಟಕಕ್ಕೆ ಬರುತ್ತಿರುವ ಮೋದಿಗೆ ಹಲವು ಪ್ರಶ್ನೆ ಕೇಳಿದ ಕಾಂಗ್ರೆಸ್!

ಬೆಂಗಳೂರು, ಫೆಬ್ರವರಿ 10 : 'ರಾಜ್ಯಕ್ಕೆ ಆಗಮಿಸುತ್ತಿರುವ ಮೋದಿಯವರು ನಮ್ಮ ಪ್ರಶ್ನೆಗಳಿಗೆ ಉತ್ತರಿಸಲಿ' ಎಂದು ಹೇಳಿರುವ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಭಾನುವಾರ ಪತ್ರಿಕಾಗೋಷ್ಠಿ ನಡೆಸಿದ ದಿನೇಶ್ ಗುಂಡೂರಾವ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಮುಂದೆ ಹಲವು ಪ್ರಶ್ನೆಗಳನ್ನು ಇಟ್ಟರು. ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಹುಬ್ಬಳ್ಳಿಗೆ ಆಗಮಿಸುತ್ತಿದ್ದಾರೆ.

'ನಾ ಮೈ ಖಾವುಂಗಾ, ನಾ ಮೈ ಖಾನೆದುಂಗ ಎಂದು ಹೇಳುವ ಮೋದಿಯವರು ಆಪರೇಷನ್ ಕಮಲ ಆಡಿಯೋದಲ್ಲಿರುವ ಸಂಭಾಷಣೆ ಕುರಿತು ಸ್ಪಷ್ಟನೆ ನೀಡಲಿ' ಎಂದು ದಿನೇಶ್ ಗುಂಡೂರಾವ್ ಅವರು ಆಗ್ರಹಿಸಿದರು.

ನರೇಂದ್ರ ಮೋದಿ ಅವರು ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲು ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ. ಮೋದಿ ಆಗಮನಕ್ಕೂ ಮೊದಲೇ ಕಾಂಗ್ರೆಸ್ ನಾಯಕರು ಅವರ ಮುಂದೆ ಹಲವು ಪ್ರಶ್ನೆಗಳನ್ನು ಇಟ್ಟಿದ್ದಾರೆ. ಮೋದಿ ಭಾಷಣದಲ್ಲಿ ಇವುಗಳಿಗೆ ಉತ್ತರ ನೀಡುವರೇ? ಕಾದು ನೋಡಬೇಕು.

ಪ್ರಶ್ನೆ - 1

ಆಪರೇಷನ್ ಕಮಲ ಆಡಿಯೋದಲ್ಲಿರುವ ಸಂಭಾಷಣೆ ಕುರಿತು ಸ್ಪಷ್ಟನೆಯನ್ನು ನೀಡಲಿ. ಯಡಿಯೂರಪ್ಪ, ಹಾಗೂ ತಮ್ಮ ಪಾತ್ರದ ಕುರಿತು ವಿವರಣೆ ನೀಡಲಿ ಎಂದು ಕಾಂಗ್ರೆಸ್‌ ಒತ್ತಾಯಿಸಿದೆ.

ಪ್ರಶ್ನೆ - 2

ಪ್ರತಿ ಶಾಸಕರಿಗೆ 10 ಕೋಟಿ ಅಂದರೆ ಆಪರೇಷನ್ ಕಮಲಕ್ಕೆ ಸುಮಾರು 200 ಕೋಟಿ ಹಣ ಮೀಸಲಿಟ್ಟಿದ್ದು, ಇದು ಎಲ್ಲಿಂದ ಬಂದಿದ್ದು? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಪ್ರಶ್ನೆ - 3

ಮಹದಾಯಿ, ನರೇಗ ಯೋಜನೆಗಳಿಗೆ ರಾಜ್ಯಕ್ಕೆ ಅಗತ್ಯ ಹಣ ಯಾಕೆ ನೀಡುತ್ತಿಲ್ಲ? ಕರ್ನಾಟಕ ರಾಜ್ಯದ ಬಗ್ಗೆ ಇಷ್ಟೊಂದು ತಾತ್ಸಾರವೇಕೆ? ಎಂದು ಕಾಂಗ್ರೆಸ್‌ ಪ್ರಶ್ನೆ ಮಾಡಿದೆ.

ಪ್ರಶ್ನೆ - 4

ಐಐಟಿಗೆ ಧಾರವಾಡದಲ್ಲಿ 500 ಎಕರೆ ಉಚಿತವಾಗಿ ಕೊಟ್ಟಿದ್ದೇವೆ. ಅದನ್ನು ಇಂದು ಮೋದಿ ಉದ್ಘಾಟಿಸಿಲಿದ್ದಾರೆ. ಮುಖ್ಯಮಂತ್ರಿಗಳನ್ನು ಕಾರ್ಯಕ್ರಮಕ್ಕೆ ಏಕೆ ಆಹ್ವಾನಿಸಿಲ್ಲ ಎಂದು ಪ್ರಶ್ನಿಸಲಾಗಿದೆ.

ಪ್ರಶ್ನೆ - 5

ನಿಮ್ಮ ಸ್ವಾರ್ಥಕ್ಕಾಗಿ ರಾಜ್ಯದ ಯುವಕರಿಗೆ ಒದಗಬಹುದಾಗಿದ್ದ ಉದ್ಯೋಗ ಅವಕಾಶವನ್ನು ನೀವು ವಂಚಿಸಿದ್ದೀರಿ. ಇದನ್ನು ರಾಜ್ಯದ ಜನತೆಗೆ ಹೇಗೆ ವಿವರಿಸುವಿರಿ? ಎಂದು ಕಾಂಗ್ರೆಸ್ ಕೇಳಿದೆ.

ಪ್ರಶ್ನೆ - 6

ರಾಜ್ಯ ಸರ್ಕಾರ ಹಲವು ಬಾರಿ ಮನವಿ ಮಾಡಿದ್ದರೂ ನಿರ್ಲಕ್ಷವೇಕೆ? ರಾಜ್ಯದ ಯಾವುದೇ ಸಮಸ್ಯೆಗಳ ಪರಿಹರಿಸುವ ಬಗ್ಗೆ ಗಮನ ಹರಿಸುವುದಿಲ್ಲವೇಕೆ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಪ್ರಶ್ನೆ - 7

ಯುನೆಸ್ಕೊದಿಂದ ವಿಶ್ವ ಪಾರಂಪರಿಕ ತಾಣ ಎಂದು ಘೋಷಿಸಲ್ಪಟ್ಟಿರುವ ಹಂಪಿ ಅಭಿವೃದ್ಧಿಗಾಗಿ ಕಳೆದ ಬಜೆಟ್ನಲ್ಲಿ ಪಾರಂಪರಿಕ ನಗರಾಭಿವೃದ್ಧಿ ಎಂದು ಘೋಷಿಸಿದ್ದೀರಿ. ಇಲ್ಲಿಯವರೆಗೆ ಅಭಿವೃದ್ಧಿಗೆ ಕ್ರಮ ಕೈಗೊಂಡಿಲ್ಲವೇಕೆ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+