ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಮಿತ್ ಶಾಗೆ ಬೆಳ್ಳಿತಟ್ಟೆಯಲ್ಲಿ ಊಟ: 40% ಕಮಿಷನ್ ದುಡ್ಡಾ ಎಂದ ಕಾಂಗ್ರೆಸ್

|
Google Oneindia Kannada News

ಬೆಂಗಳೂರು, ಮೇ 3: ಒಂದು ದಿನದ ರಾಜ್ಯ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರಕಾರದ ಕಾರ್ಯವೈಖರಿಯನ್ನು ಹಾಡಿ ಹೊಗಳಿದ್ದಾರೆ. ಸಿಎಂ ನಿವಾಸದಲ್ಲಿ ಮಂಗಳವಾರ ಮಧ್ಯಾಹ್ನ ಅಮಿತ್ ಶಾಗೆ ಬೆಳ್ಳಿತಟ್ಟೆಯಲ್ಲಿ ಊಟ ಬಡಿಸಲಾಯಿತು.

ಅಮಿತ್ ಶಾ ಬೆಂಗಳೂರಿನಲ್ಲಿ ಇರುವಾಗಲೇ ಕೆಪಿಸಿಸಿಯ ಐಟಿ ಘಟಕ ಬೊಮ್ಮಾಯಿ ಸರಕಾರದ ಕಮಿಷನ್ ದಂಧೆಯ ಆರೋಪದ ವಿಚಾರದಲ್ಲಿ ಸಾಲುಸಾಲು ಟ್ವೀಟ್ ಮಾಡಿದೆ. ಕೇಂದ್ರ ಗೃಹ ಸಚಿವರು ರಾಜ್ಯಕ್ಕೆ ಭೇಟಿ ನೀಡಿರುವುದು ಬಿಜೆಪಿಯ ರಾಷ್ಟ್ರಾಧ್ಯಕ್ಷ ಜೆ. ಪಿ. ನಡ್ಡಾ ಅವರನ್ನು ಸೈಡ್ಲೈನ್ ಮಾಡಲು ಎಂದು ಕೆಪಿಸಿಸಿ ಆರೋಪಿಸಿದೆ.

ಸಿಎಂ ಬೊಮ್ಮಾಯಿ ಬದಲಾವಣೆ ಸುದ್ದಿ: ಡಿ.ಕೆ.ಶಿವಕುಮಾರ್ ರಿಯಾಕ್ಷನ್ಸಿಎಂ ಬೊಮ್ಮಾಯಿ ಬದಲಾವಣೆ ಸುದ್ದಿ: ಡಿ.ಕೆ.ಶಿವಕುಮಾರ್ ರಿಯಾಕ್ಷನ್

"ಕೇಂದ್ರ ಗೃಹಸಚಿವರ ರಾಜ್ಯದ ಭೇಟಿ ಕೆಟ್ಟು ನಿಂತ ಡಬಲ್ ಇಂಜಿನ್‌ ಸರ್ಕಾರವನ್ನು ತಳ್ಳಿ ಸ್ಟಾರ್ಟ್ ಮಾಡುವುದಕ್ಕಲ್ಲ, ಬದಲಾಗಿ ಜೆ. ಪಿ. ನಡ್ಡಾ ಅವರನ್ನು ಸೈಡ್ ಲೈನ್ ಮಾಡುವುದಕ್ಕೆ! ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿ ಆಗಮಿಸಿ ಆಗುಹೋಗುಗಳನ್ನು ಚರ್ಚಿಸುವ ಬದಲು ಪಕ್ಷದ ಸಭೆ ಮಾಡುತ್ತಿದ್ದಾರೆ. ಅವರ ಭೇಟಿಯಿಂದ ರಾಜ್ಯಕ್ಕೆ ನಯಾಪೈಸೆ ಉಪಯೋಗವಿಲ್ಲ" ಎಂದು ಕೆಪಿಸಿಸಿ ಐಟಿ ಘಟಕ ಟ್ವೀಟ್ ಮಾಡಿದೆ.

Karnataka Congress Series Of Tweet Against BJP Government, While Amit Shah In State

"ಅಮಿತ್ ಶಾ ಅವರೇ, ಪ್ರಧಾನಿ ಕಚೇರಿಗೆ ಗುತ್ತಿಗೆದಾರರು ಬರೆದ ಪತ್ರ ತಲುಪಿದವೇ? ನಿಮ್ಮ ಬಿಜೆಪಿ ಸರ್ಕಾರ 40% ಕಮಿಶನ್ ಹಗರಣದಲ್ಲಿ ಮಿಂದೇಳುತ್ತಿದೆ, ಈ ಬಗ್ಗೆ ತನಿಖೆ ಮಾಡುವುದಿಲ್ಲವೇ?. ನಿಮ್ಮ ಈಶ್ವರಪ್ಪನವರು ಒಂದು ಜೀವ ಬಲಿ ಪಡೆದಿದ್ದಾರೆ, ಅವರ ಬಂಧನ ಆಗದಿರುವುದೇಕೆ ಎಂದು ಉತ್ತರಿಸುವಿರಾ? ಅಥವಾ 40% ನಲ್ಲಿ ಪಾಲು ಪಡೆಯಲು ಬಂದಿರುವಿರಾ?' ಎಂದು ಕೆಪಿಸಿಸಿ ಪ್ರಶ್ನಿಸಿದೆ.

"ಪ್ರತಿ ಸರ್ಕಾರಿ ನೇಮಕಾತಿಯಲ್ಲಿ, ಪ್ರತಿ ಸರ್ಕಾರಿ ವರ್ಗಾವಣೆಯಲ್ಲಿ, ಪ್ರತಿ ಸರ್ಕಾರಿ ಗುತ್ತಿಗೆಯಲ್ಲಿ 40% ಕಮಿಷನ್ ಪಡೆದು, ಇಡೀ ರಾಜ್ಯವನ್ನ ಲೂಟಿ ಮಾಡಿ, ರಾಜ್ಯದ ಸಂಪನ್ಮೂಲಗಳನ್ನ ಗುಡುಸಿ ಗುಂಡಾಂತರ ಮಾಡಿದ ಆದಾಯದಲ್ಲಿ ಬೆಳ್ಳಿ ತಟ್ಟೆಯಲ್ಲಿ ಭೋಜನ ಸವೆಯುವವರಿಗೆ, ಭಾರತ ಹಸಿವು ಸೂಚಂಕ್ಯದಲ್ಲಿ 117ನೇ ಸ್ಥಾನಕ್ಕೆ ಕುಸಿದಿರೋದು ಕಾಣೋದು ಹೇಗೆ?" ಎಂದು ಕೆಪಿಸಿಸಿ ಲೇವಡಿ ಮಾಡಿದೆ.

"ಸಿಎಂ ಬದಲಾವಣೆ ಬಗ್ಗೆ ಬಿಜೆಪಿ ಶಾಸಕ ಯತ್ನಾಳ್ ಅವರ ಮುನ್ಸೂಚನೆ ನಿಜವೇ @BJP4Karnataka? ನಿಜವಲ್ಲ ಎಂದಾದರೆ, ಇತರ ಪಕ್ಷಗಳ ನಾಯಕರಿಗೆ ನೋಟಿಸ್ ಸಲಹೆ ಕೊಡುವ ತಾವು ಯತ್ನಾಳ್ ಅವರಿಗೆ ನೋಟಿಸ್ ಏಕೆ ನೀಡಿಲ್ಲ? ಬಿಜೆಪಿ ನಾಯಕತ್ವವಿಲ್ಲದೆ ಒದ್ದಾಡುವ ಸ್ಥಿತಿ ಬಂದಿದೆ, ಅದೆಷ್ಟೇ ಬದಲಾವಣೆಯ ಸರ್ಕಸ್ ಮಾಡಿದರೂ ನಾಯಕತ್ವ ಸೃಷ್ಟಿಸಲು ಸಾಧ್ಯವಿಲ್ಲ"ಎಂದು ಕೆಪಿಸಿಸಿ ಆಪಾದಿಸಿದೆ.

English summary
Karnataka Congress Series Of Tweet Against BJP Government, While Amit Shah In State. Know More
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X