ಸಿದ್ದರಾಮಯ್ಯ vs ಸಾಮೂಹಿಕ ನಾಯಕತ್ವ, 'ಕೈ'ವಿದಳನ

By: ಅನುಷಾ ರವಿ
Subscribe to Oneindia Kannada

ಬೆಂಗಳೂರು, ಮೇ 16: ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಯಾರು ಮುನ್ನಡೆಸಲಿದ್ದಾರೆ ಎಂಬುದು ಯಕ್ಷ ಪ್ರಶ್ನೆಯಾಗಿದೆ. ಸಿದ್ದರಾಮಯ್ಯ ನಾಯಕತ್ವ ಹಾಗೂ ಸಾಮೂಹಿಕ ನಾಯಕತ್ವ ನಡುವೆ ಕೈ ಪಡೆಗೆ ಯಾವುದು ಸೂಕ್ತ ಕಾಲವೇ ನಿರ್ಧರಿಸಲಿದೆ.

ಆದರೆ, ಕಾಂಗ್ರೆಸ್ ಹೈಕಮಾಂಡ್ ನಾಯಕರಿಗೆ ಕೆಪಿಸಿಸಿ ಅಧ್ಯಕ್ಷರ ಆಯ್ಕೆಯ ಜತೆಗೆ ಈ ಹೊಸ ಸಮಸ್ಯೆಯನ್ನು ತ್ವರಿತವಾಗಿ ಬಗೆಹರಿಸುವುದು ಮುಖ್ಯವಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವಕ್ಕೆ ಮುಂಬರುವ ವಿಧಾನಸಭಾ ಚುನಾವಣೆ ಎದುರಿಸುವುದಾಗಿ ಪಕ್ಷದ ಹಿರಿಯ ಸಂಸದ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ. ಮುನಿಯಪ್ಪ ಅವರು ಕೂಡಾ ಕಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಎನ್ನುವುದನ್ನು ಮರೆಯುವಂತಿಲ್ಲ.

ಇನ್ನೊಂದೆಡೆ, ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಗೂ ಕೆಪಿಸಿಸಿ ಹಾಲಿ ಅಧ್ಯಕ್ಷ ಜಿ ಪರಮೇಶ್ವರ ಅವರು ಇದಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿದ್ದಾರೆ.

ಮುಂಬರುವ ವಿಧಾನಸಭಾ ಚುನಾವಣೆಯ ಸಾಮೂಹಿಕ ನಾಯಕತ್ವದಲ್ಲಿ ಎದುರಿಸುವುದಾಗಿ ಹೇಳಿದ್ದಾರೆ. ಇದರಿಂದ ಪಕ್ಷದಲ್ಲಿ ಆಂತರಿಕ ಗೊಂದಲಕ್ಕೆ ಎಡೆಮಾಡಿದ್ದಾರೆ.

Karnataka Congress: Siddaramaiah's leadership versus collective leadership

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Read in English: Karnataka Congress
English summary
Siddaramaiah and his supporters proudly claiming that the party would go to elections under his leadership, senior leaders like Dr G Parameshwara and Mallikarjun Kharge speak of collective leadership.
Please Wait while comments are loading...